ಬಾಪೂಜಿ ಸೇವಾ ಕೇಂದ್ರ | ಭೂಮಾಪನ ಕಂದಾಯ ವ್ಯವಸ್ಥೆ, ಭೂ ದಾಖಲೆ ಇಲಾಖೆಯ ಸೇವೆ ಲಭ್ಯ: ಪ್ರಿಯಾಂಕ್‌ ಖರ್ಗೆ

Date:

  • ವಿವಿಧ ಸೇವೆಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ
  • ‘ಗ್ರಾಮ ಪಂಚಾಯತಿಗಳ ಹಂತದಲ್ಲಿಯೇ ಎಲ್ಲ ಸೇವೆಗಳು ದೊರಕಬೇಕು’

ರಾಜ್ಯದ ಗ್ರಾಮೀಣ ಜನರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಆರಂಭಿಸಲಾಗಿರುವ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಮೋಜಿನಿ ವ್ಯವಸ್ಥೆಯಡಿ ʼ11 ಇ ನಕ್ಷೆʼ, ʼಜಮೀನಿನ ತತ್ಕಾಲ್‌ ಪೋಡಿಗಾಗಿ ಅರ್ಜಿʼ, ʼಭೂ ಪರಿವರ್ತನೆಗಾಗಿ ಅರ್ಜಿʼ ಮತ್ತು ʼಹದ್ದುಬಸ್ತುಗಾಗಿ ಅರ್ಜಿʼ ಸೇವೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು.

ಗ್ರಾಮೀಣ ಜನತೆಯು ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಿಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳನ್ನು ಪಡೆಯುವ ಅಗತ್ಯವಿದ್ದು, ದಾಖಲೆಗಳನ್ನು ತ್ವರಿತವಾಗಿ ಮತ್ತು ಸಮೀಪವಾಗಿ ಪಡೆದುಕೊಳ್ಳಲು 2016ರಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು.

ಪ್ರಸ್ತುತ ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ 17 ಸೇವೆಗಳನ್ನು ಹಾಗೂ ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇಂಧನ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಸೇವೆಗಳನ್ನು ಮತ್ತು ಆಧಾರ್‌ ಸೇವೆಗಳನ್ನು ಒದಗಿಸಲಾಗುತ್ತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಶಿಗ್ಗಾಂವ ʼಬರಗಾಲ ತಾಲ್ಲೂಕುʼ ಎಂದು ಘೋಷಿಸಿ : ರೈತ ಸಂಘ ಆಗ್ರಹ

“ಗ್ರಾಮೀಣ ಜನರು ಸರ್ಕಾರಿ ಸೇವೆಯನ್ನು ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲೇ ಪಡೆಯಬೇಕಾದುದರಿಂದ ಜನಸಂದಣಿ ಹೆಚ್ಚುವುದರ ಜೊತೆಗೆ ಕೇಂದ್ರದಲ್ಲಿ ತ್ವರಿತ ಗತಿಯಲ್ಲಿ ಸೇವೆಯನ್ನು ಒದಗಿಸುವುದಕ್ಕೆ ತೊಡಕಾಗುತ್ತಿತ್ತು. ಜೊತೆಗೆ ಸಾರ್ವಜನಿಕರು ಸೇವೆಗಳನ್ನು ಪಡೆಯಲು ಸಾಕಷ್ಟು ದೂರ ಕ್ರಮಿಸ ಬೇಕಾದುದರಿಂದ ಸಾಕಷ್ಟು ಹಣ ವ್ಯಯಿಸಬೇಕಾಗುತ್ತಿದ್ದ ಕಾರಣ ಈ ಸೇವೆಗಳನ್ನು ಗ್ರಾಮ ಪಂಚಾಯತಿಗಳ ಹಂತದಲ್ಲಿಯೇ ದೊರಕುವಂತೆ ಅನುಕೂಲ ಕಲ್ಪಿಸಲಾಗಿದೆ” ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

“ಗ್ರಾಮೀಣ ಪ್ರದೇಶಗಳ ಅಂದಾಜು 3.7 ಕೋಟಿ ಜನರು ಅಂದರೆ 78 ಲಕ್ಷ ಕುಟುಂಬಗಳು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಮೋಜಿನಿ ವ್ಯವಸ್ಥೆಯಡಿ ವಿವಿಧ ಸೇವೆಗಳನ್ನು ಪಡೆಯುವಲ್ಲಿ ಗ್ರಾಮ ಪಂಚಾಯತಿಯ ಬಾಪೂಜಿ ಸೇವಾ ಕೇಂದ್ರಗಳು ಮಹ್ವತದ ಪಾತ್ರ ವಹಿಸಲಿವೆ” ಎಂದು ಸಚಿವರು ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ಒತ್ತಡದಿಂದ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ತಿರಸ್ಕಾರ; ಹೈಕೋರ್ಟ್‌ಗೆ ಹೋಗುತ್ತೇವೆಂದ ಕಾಂಗ್ರೆಸ್‌

ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರವನ್ನು...

‘ನಾವು ಮತ ಹಾಕುತ್ತೇವೆ, ಆದರೆ ಬಿಜೆಪಿಗಲ್ಲ’; 1,200 ಕುಟುಂಬಗಳು ಹೀಗೆ ಹೇಳಿದ್ದೇಕೆ?

ನಾವು ಒಡೆದ ಮನೆಯಲ್ಲಿ ಬದುಕುತ್ತಿದ್ದೇವೆ. ಬಿಜೆಪಿ ಸರ್ಕಾರ ನಮ್ಮ ಮನೆಗಳನ್ನು ಒಡೆದುರುಳಿಸಿದೆ....

‘ಇಂಡಿಯಾ’ ಒಕ್ಕೂಟ ತೊರೆಯಲು ನಿರಾಕರಿಸಿದ್ದಕ್ಕೆ ಮಾಜಿ ಸಿಎಂ ಹೇಮಂತ್ ಸೊರೆನ್‌ಗೆ ಜೈಲು’

'ಇಂಡಿಯಾ' ಮೈತ್ರಿಕೂಟವನ್ನು ತೊರೆಯಲು ನಿರಾಕರಿಸಿದ್ದಕ್ಕೆ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ, ಜೆಎಂಎಂ ನಾಯಕ...