ವ್ಯಕ್ತಿಯೊಬ್ಬನ ತಲೆ ಕಡಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಹೊರವಲಯದ ಬಬಲಾದ್ ಗ್ರಾಮದ ಬಳಿಯ ನಿರ್ಜನ ಪ್ರದೇಶದಲ್ಲಿ ನಡೆದಿದೆ.
36 ವರ್ಷ ಆಸುಪಾಸಿನ ವ್ಯಕ್ತಿಯ ಹತ್ಯೆ ನಡೆದಿದೆ. ಬಳಿಕ ರುಂಡವಿಲ್ಲದ ಶವ ತೊಗರಿ ಹೊಲದಲ್ಲಿ ಎಸೆಯಲಾಗಿದ್ದು, ಸ್ಥಳದಲ್ಲಿ ರುಂಡ ಪತ್ತೆಯಾಗದಿರುವ ಕಾರಣ ಪೊಲೀಸರು ರುಂಡ ಪತ್ತೆ ಹಚ್ಚುವ ಕಾರ್ಯ ಮುಂದುವರೆಸಿದ್ದಾರೆ.
ಹಂತಕರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ಹುಡುಕಾಟ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸಿಟಿ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ ಮತ್ತು ಡಿಸಿಪಿ ಕನ್ನಿಕಾ ಸಿಕ್ರಿವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.