ಬಸವಕಲ್ಯಾಣ | ಧಾರಾಕಾರ ಮಳೆಗೆ ಕೊಚ್ಚಿ ಹೋದ ಸೇತುವೆ : ಸ್ಥಳಕ್ಕೆ ಶಾಸಕ ಶರಣು ಸಲಗರ ಭೇಟಿ

Date:

ಬೀದರ್‌ ಜಿಲ್ಲಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು, ಬುಧವಾರ (ಮೇ 21) ರಂದು ಜಿಲ್ಲೆಯ ಹಲವೆಡೆ ಬೆಳಿಗ್ಗೆಯಿಂದಲೇ ಭಾರಿ ಮಳೆಯಾಗಿದೆ.

- Advertisement -

ಬಸವಕಲ್ಯಾಣ, ಹುಲಸೂರ ಸೇರಿದಂತೆ ತಾಲ್ಲೂಕಿನ ಹಲವೆಡೆ ಸಂಜೆ 5 ಗಂಟೆಗೆ ಆರಂಭಗೊಂಡ ಮಳೆ ರಾತ್ರಿ 11 ಗಂಟೆವರೆಗೂ ಸುರಿಯಿತು. ಅಬ್ಬರ ಮಳೆಗೆ ಬಸವಕಲ್ಯಾಣ ನಗರದ ಹಲವು ರಸ್ತೆ, ಬಡಾವಣೆಗಳಲ್ಲಿ ಅಪಾರ ಪ್ರಮಾಣದಲ್ಲಿ ನೀರು ಸಂಗ್ರಹಗೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ರಸ್ತೆಗಳಲ್ಲಿ ನೀರು ತುಂಬಿಕೊಂಡ ಪರಿಣಾಮ ವಾಹನ ಸವಾರರು ರಸ್ತೆ ಕಾಣದೇ ಕೆಲ ಹೊತ್ತು ಪರದಾಡಿದರು. ಅಲ್ಲದೆ, ಕೆಲ ತಗ್ಗು ಪ್ರದೇಶದ ಅಂಗಡಿಗಳಿಗೂ ನೀರು ನುಗ್ಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಸವಕಲ್ಯಾಣ ನಗರದಿಂದ ಮೀರಖಲ್ ಗ್ರಾಮದ ಮಧ್ಯೆ ಗೌರ್ ಗ್ರಾಮದ ಹತ್ತಿರ ಮಳೆ ನೀರಿನ ರಭಸದಿಂದ ರಸ್ತೆ ಜೊತೆಗೆ ಬ್ರಿಡ್ಜ್ ಕೊಚ್ಚಿಕೊಂಡು ಹೋಗಿದ್ದು ಸಂಚಾರ ಸ್ಥಗಿತಗೊಂಡಿತ್ತು.

WhatsApp Image 2025 05 22 at 1.00.00 PM
ಶಾಸಕ ಶರಣು ಸಲಗರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ವಿಷಯ ತಿಳಿದು ಗುರುವಾರ ಶಾಸಕ ಶರಣು ಸಲಗರ ಅವರು ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿ, ಗ್ರಾಮಸ್ಥರಿಂದ ಮಾಹಿತಿ ಪಡೆದರು.

ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಫೋನ್ ಕರೆ ಮೂಲಕ ಮಾತನಾಡಿ ಸ್ಥಗಿತಗೊಂಡ ರಸ್ತೆ ಸಂಚಾರಕ್ಕೆ ಅನುವುಮಾಡಿಕೊಡಬೇಕು ಶೀಘ್ರದಲ್ಲೇ ತಾತ್ಕಾಲಿಕ ರಸ್ತೆ ಸುಧಾರಣೆಗೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ...

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಬೀದರ್ ದಕ್ಷಿಣ ಕ್ಷೇತ್ರದ ʼಆಪ್ʼ ಅಧ್ಯಕ್ಷರಾಗಿ ಅಶೋಕ ಜಾಯ್ ಆಯ್ಕೆ

ಬೀದರ್ ದಕ್ಷಿಣ ಕ್ಷೇತ್ರದ ಆಮ್ ಆದ್ಮಿ ಪಕ್ಷದ ನೂತನ ಅಧ್ಯಕ್ಷರಾಗಿ ಡಾ.ಅಶೋಕ...