ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕೆಲಸ ವಿಳಂಬಕ್ಕೆ ಕಾರಣ ಆಗಿರುವ ಬಸವಕಲ್ಯಾಣ ತಾಲ್ಲೂಕು ಪಂಚಾಯಿತಿ ತಾಂತ್ರಿಕ ಸಹಾಯಕ ಅಮರನಾಥ ಪಾಟೀಲ್ ಅವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಜನರ ಧ್ವನಿ ಸಂಘಟನೆ ತಾಲ್ಲೂಕು ಘಟಕದಿಂದ ಇಒ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.
ʼತಾಂತ್ರಿಕ ಸಹಾಯಕ ಅಮರನಾಥ ಪಾಟೀಲ್ ಅವರು ಕಚೇರಿಯಲ್ಲಿ ಹಾಜರಿರುವುದಿಲ್ಲ. ಮೊಬೈಲ್ ಮೂಲಕ ಸಂಪರ್ಕಿಸಿದರೂ ಸಮಸ್ಯೆ ಬಗೆಹರಿಸುತ್ತಿಲ್ಲ. ಹೀಗಾಗಿ ಉದ್ಯೋಗ ಖಾತರಿ ಕೆಲಸ ಕೈಗೊಂಡವರು ತೊಂದರೆ ಅನುಭವಿಸಬೇಕಾಗಿದೆʼ ಎಂದು ದೂರಿದರು.
ʼಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿಲ್ಲ. ಇನ್ನು ಮುಂದಾದರೂ ಸಹಾಯಕರ ಮೇಲೆ ಕ್ರಮ ಜರುಗಿಸಬೇಕು. ಅವರನ್ನು ಇಲ್ಲಿಂದ ವರ್ಗಾವಣೆ ಮಾಡಬೇಕು. ಇಲ್ಲದಿದ್ದರೆ ತಾಲ್ಲೂಕು ಪಂಚಾಯಿತಿ ಎದುರುಗಡೆ ಧರಣಿ ನಡೆಸಲಾಗುವುದುʼ ಎಂದು ಎಚ್ಚರಿಸಿದರು.
ಇದನ್ನೂ ಓದಿ : ಕಲಬುರಗಿ | ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ
ಜನರ ಧ್ವನಿ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಮಾರುತಿ ಕಾಂಬಳೆ, ಪ್ರಮುಖರಾದ ದಯಾನಂದ ಶಿಂಧೆ, ರಾಜೀವ ಸೂರ್ಯವಂಶಿ, ವಿಜಯ ಕಾಂಬಳೆ, ಅರುಣ ರಾಜೋಳೆ ಮತ್ತಿತರರು ಪಾಲ್ಗೊಂಡಿದ್ದರು.