ಬಸವಕಲ್ಯಾಣ | ಸೇತುವೆ ಮೇಲೆ ಬೃಹತ್ ಗುಂಡಿ : ಸಂಚಾರಕ್ಕೆ ತೀವ್ರ ಸಮಸ್ಯೆ

Date:

ಬಸವಕಲ್ಯಾಣ ನಗರದಿಂದ ನಾರಾಯಣಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ನಿರ್ಮಿಸಿದ ಸೇತುವೆ ಮೇಲೆ ದೊಡ್ಡ ಪ್ರಮಾಣದ ತಗ್ಗು-ಗುಂಡಿಗಳು ಬಿದ್ದಿದ್ದು, ಸಂಚಾರಕ್ಕೆ ಸರ್ಕಸ್‌ ಮಾಡುವಂತಾಗಿದೆ.

- Advertisement -

ಕಳೆದ ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಸೇತುವೆ ಶಿಥಿಲಗೊಂಡಿದ್ದು, ಸವಾರರು ಭಯದಿಂದ ಓಡಾಡುವಂತಾಗಿದೆ. ಕೂಡಲೇ ನೂತನ ಸೇತುವೆ ನಿರ್ಮಿಸಿ ಪ್ರಯಾಣಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ವಾಹನ ಸವಾರರು ಸೇತುವೆ ಮೇಲಿಂದ ಆಯ ತಪ್ಪಿ ಬಿದ್ದರೆ ಕಾಲುವೆ ಪಾಲಾಗುವಂತಾಗಿದೆ. ಕಾಂಕ್ರಿಟ್ ಸೇತುವೆ ಮೇಲೆ ಸತತ ನೀರು ನಿಲ್ಲುವುದರಿಂದ ಸೇತುವೆ ಕುಸಿದು ಬೀಳುವ ಸ್ಥಿತಿ ನಿರ್ಮಾಣವಾಗಿದೆ. ಹೆಚ್ಚಿನ ಅನಾಹುತ ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತು ಸಮಸ್ಯೆಯನ್ನು ಇತ್ಯರ್ಥಪಡಿಸಲಿ ಎಂದು ಸಾಮಾಜಿಕ ಕಾರ್ಯಕರ್ತ ಆಕಾಶ ಖಂಡಾಳೆ ಆಗ್ರಹಿಸಿದ್ದಾರೆ.

ವಿಷಯ ಗಮನಕ್ಕೆ ಬಂದ ಬಳಿಕ ಬಸವಕಲ್ಯಾಣ ನಗರಸಭೆಯ ಇಂಜಿನಿಯರ್‌ ಸಂಜು ಚವ್ಹಾಣ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಭಾರಿ ಮಳೆಯಿಂದಾಗಿ ಸೇತುವೆ ಮೇಲೆ ಬೃಹತ್‌ ಗುಂಡಿ ಬಿದ್ದಿರುವ ಸುತ್ತ ಬ್ಯಾರಿಕೇಡ್‌ ಅಳವಡಿಸಲಾಗುವುದು ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...