ಬಸವನ ಬಾಗೇವಾಡಿ | ಲೋಕ್‌ ಅದಾಲತ್‌ನಲ್ಲಿ ಸಂಧಾನದ ಮೂಲಕ 1,450 ಪ್ರಕರಣಗಳ ಇತ್ಯರ್ಥ

Date:

ಸ್ಥಳೀಯ ನ್ಯಾಯಾಲಯಗಳ ಸಂಕಿರಣದಲ್ಲಿ ಬಸವನ ಬಾಗೇವಾಡಿ ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಲೋಕ್‌ ಅದಾಲತ್‌ನಲ್ಲಿ ರಾಜಿ ಸಂಧಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಒಟ್ಟು 1,450 ನ್ಯಾಯಾಲಯದ ಪ್ರಕರಣಗಳು ಸುಖಾಂತ್ಯ ಕಂಡಿವೆ.

- Advertisement -

ನ್ಯಾಯಾಲಯದಲ್ಲಿ ಬಾಕಿ ಇದ್ದ 8,215 ಪ್ರಕರಣಗಳ ಪೈಕಿ 2,218 ಪ್ರಕರಣಗಳನ್ನು ಲೋಕ್ ಅದಾಲತ್‌ ಕೈಗೆತ್ತಿಕೊಳ್ಳಲಾಗಿತ್ತು. ಅಪರಾಧ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ (ಎಂವಿಎಸಿ), ಚೆಕ್ ಬೌನ್ಸ್, ನಿರ್ವಹಣಾ ಭತ್ಯೆ, ಪಾಲುದಾರಿಕೆ ವಿವಾದಗಳು ಹಾಗೂ ಇತರೆ ಸಿವಿಲ್ ದಾವೆಗಳು ಸೇರಿದಂತೆ 1,450 ಪ್ರಕರಣಗಳನ್ನು ನ್ಯಾಯಾಧೀಶರು ಹಾಗೂ ವಕೀಲರ ಸಮ್ಮುಖದಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಪೂರ್ವದಾವೆ ಹಂತದಲ್ಲಿಯೂ ಲೋಕ ಅದಾಲತ್ ಗಮನಾರ್ಹ ಸಾಧನೆ ಮಾಡಿದೆ. ಟ್ರಾಫಿಕ್ ಚಾಲನ್ ಪ್ರಕರಣಗಳು, ಕಂದಾಯ ಇಲಾಖೆಯ ಪ್ರಕರಣಗಳು, ಬ್ಯಾಂಕ್‌ಗಳಿಗೆ ಸಂಬಂಧಿಸಿದ ವಿವಾದಗಳು ಹಾಗೂ ಹೆಸ್ಕಾಂ ವಿದ್ಯುತ್ ಬಾಕಿ ಪಾವತಿ ಪ್ರಕರಣಗಳು ಸೇರಿದಂತೆ ಒಟ್ಟು 8,70,890 ಪ್ರಕರಣಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದ್ದು, 7,96,744 ಪ್ರಕರಣಗಳು ರಾಜಿ ಸಂಧಾನದ ಮೂಲಕ ಯಶಸ್ವಿಯಾಗಿ ಇತ್ಯರ್ಥಗೊಂಡಿವೆ ಎಂದು ತಾಲೂಕು ಕಾನೂನು ಸೇವಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ತಾಲೂಕು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಶಶಿಧರ ಎಂ. ಗೌಡ, ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಂಜುಳಾ ಡಿ, ಕಾರ್ಯದರ್ಶಿ ಅಮಿತ್ ಘಟ್ಟಿ ಹಾಗೂ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಈರಪ್ಪ ಡವಳೇಶ್ವರ ಅವರ ಮಾರ್ಗದರ್ಶನದಲ್ಲಿ ಲೋಕ ಅದಾಲತ್ ಯಶಸ್ವಿಯಾಗಿ ನಡೆಯಿತು

ಸಂಧಾನಕಾರರಾಗಿ ವಕೀಲರಾದ ಎ.ಐ. ಪರಮಗೊಂಡ, ಕೆ.ಜಿ. ಕಂದಗಲ್ಲ, ಶಿಲ್ಪಾ ಎಸ್. ಮುಚಖಂಡಿ ಹಾಗೂ ರೇಣುಕಾ ಎಂ. ಅಣ್ಣಿಗೇರಿ ಕಾರ್ಯನಿರ್ವಹಿಸಿ, ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಸಹಕರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...