- ದೇವದಾಸಿ ಮಹಿಳೆಯರ ವಿಮೋಚನಾ ಸಂಘದಿಂದ ಸರಳ ವಿವಾಹ
- ದೇವದಾಸಿ ಕುಟುಂಬಕ್ಕೆ ಭೂಮಿ, ಮನೆ, ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ
12ನೇ ಶತಮಾನದಲ್ಲಿ ಅಸಮಾನತೆ, ಜಾತಿ ಅಸಮಾನತೆಯನ್ನು ತೊಲಗಿಸಿ ಬಸವಣ್ಣ ಸಮಾನತೆ ಸಾರಿದರೆ, ಡಾ. ಬಿ ಆರ್ ಅಂಬೇಡ್ಕರ್ ಮನುವಾದಿಗಳ ವಿರುದ್ಧ ಹೋರಾಟ ಮಾಡಿದರು ಎಂದು ಕರ್ನಾಟಕ ದೇವದಾಸಿ ಮಹಿಳೆಯರ ವಿಮೋಚನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ ಮಾಳಮ್ಮ ಹೇಳಿದರು.
ಕರ್ನಾಟಕ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ತಾಲೂಕು ಸಮಿತಿ ಸಹಯೋಗದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಮತ್ತು ಬಸವ ಜಯಂತಿ ಅಂಗವಾಗಿ ಗದಗ ಜಿಲ್ಲೆಯ ರೋಣ ಪಟ್ಟಣದ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಸರಳ ಸಾಮೂಹಿಕ ವಿವಾಹ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದ ಮುಖ್ಯ ಅತಿಥಿ ಡಿ ಮಾಳಮ್ಮ ಮಾತನಾಡಿ, “ಸಮಾಜದಲ್ಲಿ ಜಾತಿವ್ಯವಸ್ಥೆಯನ್ನು ತೀವ್ರವಾಗಿ ಪ್ರಶ್ನೆ ಮಾಡಿದವರೆಂದರೆ ಬಸವಣ್ಣ ಮತ್ತು ಅಂಬೇಡ್ಕರ್, ಇವರ ಜಯಂತಿ ಪ್ರಯುಕ್ತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಸಮಾಜದಲ್ಲಿ ಸಮಾನತೆ ತರುವಲ್ಲಿ ಈ ಕಾರ್ಯಕ್ರಮ ಮಹತ್ವದ ಕಾರ್ಯ ಶ್ಲಾಘನೀಯ” ಎಂದರು.
This video cannot be played in your browser. Open the video directly
ಈ ಸುದ್ದಿ ಓದಿದ್ದೀರಾ? :ಸಕಲೇಶಪುರ | ಲಂಚ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಕೆಆರ್‌ಎಸ್ ಗೆಲ್ಲಿಸಿ: ರವಿ ಕೃಷ್ಣಾರೆಡ್ಡಿ
ದಲಿತರು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಶೋಷಣೆಗೆ ಒಳಗಾದವರು. ಇಂದಿಗೂ ಇವರಿಗೆ ಊಳಲು ಭೂಮಿ ಇಲ್ಲ. ಸಮಾಜದಲ್ಲಿ ಅಂದಿನಿಂದಲೂ ಈವರೆಗೂ ಒಂದಲ್ಲ ಒಂದು ರೀತಿಯಲ್ಲಿ ಶೋಷಣೆಗೆ ಒಳಗಾಗುತ್ತಲೇ ಇದ್ದಾರೆ. ಅಷ್ಟೇ ಅಲ್ಲದೇ ದೇವದಾಸಿ ಮಹಿಳೆಯರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ದೇವದಾಸಿ ಕುಟುಂಬಕ್ಕೆ ಭೂಮಿ, ಮನೆ ಹಾಗೂ ಅವರ ಮಕ್ಕಳಿಗೆ ಉಚಿತ ಶಿಕ್ಷಣವನ್ನು ಸರ್ಕಾರ ಕೊಡಬೇಕು” ಎಂದು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ ಬಸವಲಿಂಗ ಸ್ವಾಮಿಜಿ, ನವ ಜೋಡಿಗಳಿಗೆ ಬಸವಣ್ಣ ಅವರ ವಚನ ಬೋಧಿಸಿದರು. ಎಂ ಎಸ್ ಹಡಪದ ಪ್ರಸ್ತಾವಿಕ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಪೀರು ರಾಠೋಡ್, ಬಾಲು ರಾಠೋಡ್, ಮಾರುತಿ ಚಟಗಿ ಮಹೇಶ ಹಿರೇಮಠ ಹಾಗೂ ಕಾರ್ಮಿಕ ಸಂಘದ ಮುಖಂಡರು ಉಪಸ್ಥಿತರಿದ್ದರು.




