ಶಕ್ತಿಕೇಂದ್ರ ವಿಧಾನಸೌಧ ಎದುರು ಬಸವಣ್ಣ-ಕೆಂಪೇಗೌಡ ಪ್ರತಿಮೆ ಅನಾವರಣ

Date:

  • ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಭಾನುವಾರ ಪ್ರತಿಮೆಗಳ ಅನಾವರಣ
  • ಕೆಂಪೇಗೌಡ, ಬಸವೇಶ್ವರ ಆದರ್ಶದಡಿ ಆಡಳಿತ ಮಾಡುತ್ತಿದ್ದೇವೆ: ಬೊಮ್ಮಾಯಿ

ನಾಡಿನ ಶಕ್ತಿಕೇಂದ್ರ ವಿಧಾನಸೌಧದ ಎದುರು ಸ್ಥಾಪಿಸಲಾಗಿರುವ ಜಗಜ್ಯೋತಿ ಬಸವಣ್ಣ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಸಂಜೆ ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಕೆಂಪೇಗೌಡರು ಮತ್ತು ಬಸವೇಶ್ವರರ ಆದರ್ಶಗಳ ಆಧಾರದಲ್ಲಿ ನಾವು ಆಡಳಿತ ಮಾಡುತ್ತಿದ್ದೇವೆ. ಈ ನಾಡಿನ ಶ್ರೇಷ್ಠ ಆಡಳಿತಾಗಾರರು, ತತ್ವಜ್ಞಾನಿಗಳು ಅವರಾಗಿದ್ದರು. ವಿದಾನಸೌಧದ ಮುಂದೆ ಈ ಇಬ್ಬರು ನಾಯಕರ ಪ್ರತಿಮೆ ಅನಾವರಣ ಬಹಳ ದಿನಗಳ ಹಿಂದೆ ಆಗಬೇಕಿತ್ತು. ಅದಕ್ಕೆ ನಾನು ಯಾರನ್ನು ದೂಷಿಸುವುದಿಲ್ಲ” ಎಂದರು.

“ಬಸವೇಶ್ವರರ ಪ್ರತಿಮೆ ವಿಧಾನಸೌಧದ ಮುಂದೆ ಅಷ್ಟೆ ಅಲ್ಲ, ಹೈಕೋರ್ಟ್ ಎದುರಿಗಿದೆ. ನಾಡ ಪ್ರಭು ‌ಕೆಂಪೇಗೌಡರು ಯಾವುದೇ ನದಿ ಇಲ್ಲದ ಪ್ರದೇಶದಲ್ಲಿ ನಗರ ನಿರ್ಮಾಣ ಮಾಡಿದ್ದಾರೆ. ಎಲ್ಲ ಸಮುದಾಯಗಳಿಗೆ ಮಾರುಕಟ್ಟೆ ನಿರ್ಮಿಸಿ, ನಿಜವಾಗಿ ಬಸವಣ್ಣನವರ ಆದರ್ಶಗಳನ್ನು ಜಾರಿಗೆ ತಂದವರು ಕೆಂಪೇಗೌಡರು” ಎಂದು ಬಣ್ಣಿಸಿದರು.

“ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಡೀ ದೇಶವನ್ನು ಮತ್ತೆ ಒಗ್ಗೂಡಿಸುವ ಕೆಲಸ ಮಾಡಿದ್ದಾರೆ. ನಮ್ಮ ರಾಜ್ಯ, ಆಂಧ್ರಪ್ರದೇಶ, ಓರಿಸ್ಸಾಗಳಲ್ಲಿ ನಕ್ಸಲರ ಹಾವಳಿ ಇತ್ತು. ಅಲ್ಲದೇ ಅನೇಕ‌ ವಿಚಿದ್ರಕಾರಿ ಶಕ್ತಿಗಳನ್ನು ದಮನ ಮಾಡಿ ಇಡಿ ದೇಶವನ್ನು ಅಭಿವೃದ್ಧಿ ಪತದಲ್ಲಿ ತೆಗೆದುಕೊಂಡು ಹೋಗುತ್ತಿದ್ದಾರೆ” ಎಂದರು.

ಈ ಸಂದರ್ಭದಲ್ಲಿಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಡಾ. ನಿರ್ಮಾಲಾನಂದ ಸ್ವಾಮೀಜಿ, ತುಮಕೂರು ಶಿವಕುಮಾರ ಸ್ವಾಮೀಜಿ, ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಸಚಿವರಾದ ಆರ್. ಅಶೋಕ, ಗೋವಿಂದ ಕಾರಜೋಳ, ಮುರಗೇಶ ನಿರಾಣಿ, ಸಿ ಸಿ ಪಾಟೀಲ, ಅಶ್ವತ್ಥನಾರಾಯಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಯುಷ್ಮಾನ್ ಆರೋಗ್ಯ ಕಾರ್ಡ್‌ಗೆ ರಾಜ್ಯ ಸರ್ಕಾರದಿಂದ ಹೊಸ ರೂಪ; ಎಪಿಎಲ್ ಕುಟುಂಬಗಳಿಗೂ ಅವಕಾಶ

ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್'ಗಳಿಗೆ ಆರೋಗ್ಯ ಇಲಾಖೆ...

Fact check | ಯತ್ನಾಳ್‌ ಹೇಳಿದ ಭಾರೀ ಸುಳ್ಳು: ಸಿಎಂ ವಿರುದ್ಧ ಆರೋಪ ಸುಳ್ಳೆಂಬುದಕ್ಕೆ ಇಲ್ಲಿದೆ ಸಾಕ್ಷಿ

ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು...

ಗಜೇಂದ್ರಗಡ | ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆ ಈಡೇರಿಸುವಂತೆ ಎಸ್ಎಫ್‌ಐ ಆಗ್ರಹ

ರಾಜ್ಯದಲ್ಲಿ 430ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು, ವಿವಿಧ ಬೇಡಿಕೆಗಳನ್ನು...

ಡಿಕೆಶಿ ವಿರುದ್ಧ ಸಿಬಿಐ ತನಿಖೆ ಅನುಮತಿ ಹಿಂಪಡೆದ ಸರ್ಕಾರ; ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ ಯತ್ನಾಳ್

ಉಪಮುಖ್ಯಮಂತ್ರಿ‌ ಡಿಕೆ ಶಿವಕುಮಾರ್‌ ಅಕ್ರಮ ಆಸ್ತಿಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ನೀಡಿದ್ದ‌...