ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಕೆಲ ಕಿಡಿಗೇಡಿಗಳು ಬಸವಣ್ಣನವರ ಭಾವಚಿತ್ರ ಸುಟ್ಟು ವಿಕೃತಿ ಮೆರೆದಿರುವುದನ್ನು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಖಂಡಿಸಿದ್ದಾರೆ.
“ಜಗತ್ತಿಗೆ ಪ್ರಜಾಪ್ರಭುತ್ವ ನೀಡಿದ, ತುಳಿತಕ್ಕೆ ಒಳಗಾದವರನ್ನು ಸಮಾಜದ ಮೇಲಸ್ಥರಕ್ಕೆ ಎತ್ತಿದ, ಸಮಾನತೆ ಸಾರಿದ ಬಸವಣ್ಣನವರು. ಹೆಣ್ಣನ್ನು ಕೀಳಾಗಿ ಕಾಣುತ್ತಿದ್ದ ಸಮಾಜದಲ್ಲಿ ಹೆಣ್ಣನ್ನು ಗೌರವದ ಸ್ಥಾನಕ್ಕೆ ತಂದು ನಿಲ್ಲಿಸಿದ ಬಸವಣ್ಣನವರನ್ನು ಪರಿಪೂರ್ಣವಾಗಿ ಅರಿಯದೆ ಹೀನ ಮನಸ್ಥಿತಿ ಉಳ್ಳವರು ಮಾತ್ರ ಇಂತಹ ಕೃತ್ಯ ಎಸಗಲು ಸಾಧ್ಯ” ವಿಷಾಧ ವ್ಯಕ್ತಪಡಿಸಿದ್ದಾರೆ.
ಈ ಕೃತ್ಯದಲ್ಲಿ ಭಾಗಿಯಾದ ದುಷ್ಕರ್ಮಿಗಳನ್ನು ಸರಕಾರ ಕೂಡಲೇ ಪತ್ತೆ ಹಚ್ಚಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.