ಶಿರಸಿ | ಭಾಶಿಯಲ್ಲಿ ಹಾಲು ಕೇಂದ್ರದ ಸ್ಥಾಪನೆಗೆ ಶ್ರಮಿಸಿದ ಬಸವರಾಜ ರುದ್ರಪ್ಪ ಗೌಡ್ರಿಗೆ ಸನ್ಮಾನ

Date:

ಶಿರಸಿ: ತಾಲೂಕಿನ ಭಾಶಿ ಗ್ರಾಮದಲ್ಲಿ 18 ವರ್ಷಗಳ ಹಿಂದೆ ಹಾಲಿನ ಕೇಂದ್ರ ಸ್ಥಾಪನೆಗೆ ಮಹತ್ವದ ಪಾತ್ರ ವಹಿಸಿದ್ದ ಬಸವರಾಜ ರುದ್ರಪ್ಪ ಗೌಡ್ರ ಅವರನ್ನು ಭಾಶಿ ಹಾಲು ಒಕ್ಕೂಟದ ವತಿಯಿಂದ ಗೌರವಿಸಲಾಯಿತು.

- Advertisement -

ಗ್ರಾಮದಲ್ಲಿ ಹಾಲಿನ ಕೇಂದ್ರದ ಅವಶ್ಯಕತೆ ಇದ್ದ ಸಂದರ್ಭದಲ್ಲಿ ಬಸವರಾಜ ರುದ್ರಪ್ಪ ಗೌಡ್ರ ಅವರು ಮನೆಮನೆಗೆ ತೆರಳಿ ಹಾಲು ಉತ್ಪಾದಕರಲ್ಲಿ ಅರಿವು ಮೂಡಿಸಿ, ಹಾಲು ಉತ್ಪಾದನೆಗೆ ಉತ್ತೇಜನ ನೀಡಿದ್ದರು. ಹಾಲು ಉತ್ಪಾದಕರನ್ನು ಒಗ್ಗೂಡಿಸುವುದು ಹಾಗೂ ಹಾಲು ಒಕ್ಕೂಟದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಯನ್ನು ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅಂಗನವಾಡಿ, ಶಾಲೆ, ಆಸ್ಪತ್ರೆಗಳಿಗೆ ಆದ್ಯತೆಯ ಮೇರೆಗೆ ಕುಡಿಯುವ ನೀರು: ಸಿಇಒ ಡಾ. ದಿಲೀಷ್ ಶಶಿ

ಈ ಹಿನ್ನೆಲೆಯಲ್ಲಿ ಭಾಶಿ ಹಾಲು ಒಕ್ಕೂಟದ ವತಿಯಿಂದ ನೆನಪಿನ ಕಾಣಿಕೆ ನೀಡಿ ಬಸವರಾಜ ರುದ್ರಪ್ಪ ಗೌಡ್ರ ಅವರನ್ನು ಗೌರವಿಸಲಾಯಿತು. ಒಕ್ಕೂಟದ ಅಧ್ಯಕ್ಷ ಪ್ರಮೋದ ಬಸವರಾಜ ಗೌಡ ಭಾಶಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

Advertisements

ಈ ಸಂದರ್ಭದಲ್ಲಿ ಬನವಾಸಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗಜಾನನ ಎಂ. ಗೌಡ ಭಾಶಿ, ಭಾಶಿ ಹಾಲು ಒಕ್ಕೂಟದ ಉಪಾಧ್ಯಕ್ಷ ಸುಬ್ರಹ್ಮಣ್ಯ ಎಸ್. ಗೌಡ ಭಾಶಿ ಸೇರಿದಂತೆ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾಮದಲ್ಲಿ ಹಾಲಿನ ಕೇಂದ್ರದ ಬೆಳವಣಿಗೆಗೆ ಹಲವು ವರ್ಷಗಳ ಹಿಂದೆ ಶ್ರಮಿಸಿದ ಹಿರಿಯರ ಸೇವೆಯನ್ನು ಗುರುತಿಸಿ ಗೌರವಿಸುವ ಮೂಲಕ ಭಾಶಿ ಹಾಲು ಒಕ್ಕೂಟದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರ ನಡೆಸಿ: ಗ್ರಾಮ ಸ್ವರಾಜ್ಯ ಕರ್ನಾಟಕ ಆಗ್ರಹ

ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು...

ಹಾಸನ | ಮೂಢನಂಬಿಕೆ, ಜಾತಿ ತಾರತಮ್ಯ ಮತ್ತು ಅಸಮಾನತೆ ವಿರುದ್ಧ ವೈಚಾರಿಕತೆ ಅಗತ್ಯ; ಸಿಪಿಐಎಂ ಧರ್ಮೇಶ್ 

ಇಂದಿನ ಸಮಾಜದಲ್ಲಿ ಮೂಢನಂಬಿಕೆ, ಕಂದಾಚಾರ, ಜಾತಿ ತಾರತಮ್ಯ, ಅಸ್ಪೃಶ್ಯತೆ, ಕೋಮುವಾದ ಸೇರಿದಂತೆ...

ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು

ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯದ ಮಹತ್ವ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ...