ಬ್ಯಾಟರಾಯನಪುರ | ಅಪಾರ್ಟ್‌ಮೆಂಟ್‌ಗಳ ನಡುವೆ ಸೌಹಾರ್ದ ಸಂಬಂಧಕ್ಕೆ ನ.15,16 ರಂದು ಸ್ಪೋರ್ಟ್ಸ್ ಫೆಸ್ಟ್: ಮೀನಾಕ್ಷಿ ಕೃಷ್ಣಬೈರೇಗೌಡ

Date:

ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುವ ಜನರ ನಡುವೆ ಸೌಹಾರ್ದ ಸಂಬಂಧವನ್ನು ಗಟ್ಟಿಗೊಳಿಸುವ ಉದ್ದೇಶದಿಂದ ನವೆಂಬರ್ 15 ಹಾಗೂ 16 ರಂದು ಬ್ಯಾಟರಾಯನಪುರ ಕ್ಷೇತ್ರದಲ್ಲಿ ಇಂಟರ್ ಅಪಾರ್ಟ್‌ಮೆಂಟ್‌ ಸ್ಪೋರ್ಟ್ಸ್ ಫೆಸ್ಟ್-2025 ಆಯೋಜಿಸಲಾಗಿದೆ ಎಂದು ಸಂಘಟಕಿ, ಸಚಿವ ಕೃಷ್ಣಬೈರೇಗೌಡ ಅವರ ಪತ್ನಿ ಶ್ರೀಮತಿ ಮೀನಾಕ್ಷಿ ಅವರು ಮಾಹಿತಿ ನೀಡಿದರು.

- Advertisement -

ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಳೆದ ಮೂರು ವರ್ಷಗಳಿಂದ ಇಂಟರ್ ಅಪಾರ್ಟ್ಮೆಂಟ್ ಸ್ಪೋರ್ಟ್ಸ್ ಫೆಸ್ಟ್ ಅನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಕ್ರೀಡೆಯ ಮೂಲಕ ಜನರನ್ನು ಒಂದುಗೂಡಿಸಲು ಸಾಧ್ಯವಿದೆ. ಹಾಗಾಗಿ, ಬ್ಯಾಟರಾಯನಪುರ ಕ್ಷೇತ್ರದ ಜನರ ಆರೋಗ್ಯ ಮತ್ತು ಫಿಟ್‌ನೆಸ್ ಅನ್ನು ಗಮನದಲ್ಲಿರಿಸಿಕೊಂಡು ನಾಲ್ಕು ಒಳಾಂಗಣ ಕ್ರೀಡಾಂಗಣವನ್ನು ಸರ್ಕಾರ ನಿರ್ಮಿಸಿದೆ. ಮುಂಬರುವ ದಿನಗಳಲ್ಲಿ ಜಕ್ಕೂರು ಬಳಿ ಕೂಡ ಕ್ರೀಡಾಂಗಣ ನಿರ್ಮಾಣವಾಗಲಿದೆ. ಈ ಎಲ್ಲ ಸೌಲಭ್ಯಗಳನ್ನು ಸರಿಯಾಗಿ ಬಳಸುವ ಉದ್ದೇಶದಿಂದ ಅಪಾರ್ಟ್‌ಮೆಂಟ್‌ಗಳ ನಡುವೆ ಸೌಹಾರ್ದ ಸಂಬಂಧಕ್ಕೆ ನ.15,16 ರಂದು ಸ್ಪೋರ್ಟ್ಸ್ ಫೆಸ್ಟ್ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಂಗಳೂರು ಉತ್ತರದಲ್ಲಿ ಹಲವು ಅಪಾರ್ಟ್‌ಮೆಂಟ್‌ಗಳಲ್ಲಿ ಜನರು ವಾಸಿಸುತ್ತಿದ್ದಾರೆ. ಅಪಾರ್ಟ್‌ಮೆಂಟ್‌ಗಳಲ್ಲಿನ ಜನರು ಸಮಾಜದ ಎಲ್ಲರೊಂದಿಗೆ ಬೆರೆಯುವಂತಾಗಬೇಕು. ನ.15,16 ರಂದು ಬ್ಯಾಟರಾಯನಪುರ ಕ್ಷೇತ್ರದ 8 ಪ್ರದೇಶಗಳಲ್ಲಿ ಇಂಟರ್ ಅಪಾರ್ಟ್‌ಮೆಂಟ್‌ ಸ್ಪೋರ್ಟ್ಸ್ ನಡೆಯಲಿದೆ. ಈ ಬಾರಿಯ ವಿಶೇಷವಾಗಿ ಜಿಮ್ನಾಸ್ಟಿಕ್ ಹಾಗೂ ಪಿಕಲ್ ಬಾಲ್ ಅನ್ನು ಸೇರ್ಪಡೆ ಮಾಡಿದ್ದೇವೆ. 14 ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಈಗಾಗಲೇ ಸುಮಾರು ಜನರು ನೋಂದಣಿ ಮಾಡಿಕೊಂಡಿದ್ದಾರೆ. ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುತ್ತಿದೆ. ವಿಜೇತರ ಪೈಕಿ ಮಹಿಳೆ ಇರಲಿ ಅಥವಾ ಪುರುಷರೇ ಇರಲಿ. ಸಮಾನತೆಯ ದೃಷ್ಟಿಯಿಂದ ಎಲ್ಲರಿಗೂ ಒಂದೇ ರೀತಿಯ ಬಹುಮಾನಗಳನ್ನು ನೀಡಲಾಗುವುದು” ಎಂದು ತಿಳಿಸಿದರು.

Krishna Byre Gowda Wife Meenakshi

“ಕಳೆದ ಎರಡು ವಾರದ ಹಿಂದೆ ಆರಂಭವಾಗಿರುವ ನೋಂದಣಿ ಪ್ರಕ್ರಿಯೆಗೆ ಈ ಬಾರಿ ನೋಂದಣಿ ಮಾಡಿರುವವರ ಸಂಖ್ಯೆ ಹೆಚ್ಚಾಗಿದೆ. ಕಳೆದ ಬಾರಿ 1500 ಜನ ಭಾಗವಹಿಸಿದ್ದರೆ, ಈ ಬಾರಿ ಈಗಾಗಲೇ ಮೂರು ಸಾವಿರಕ್ಕೂ ಅಧಿಕ ಮಂದಿ ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿ ಮಾಡಿಕೊಂಡಿರುವವರ ವಿಳಾಸವನ್ನು ಪರಿಶೀಲಿಸಿ, ದೃಢೀಕರಿಸಲಾಗುತ್ತಿದೆ” ಎಂದು ಶ್ರೀಮತಿ ಮೀನಾಕ್ಷಿ ತಿಳಿಸಿದರು.

Advertisements

“ಕಂದಾಯ ಸಚಿವ ಕೃಷ್ಣಬೈರೇಗೌಡರ ಕ್ಷೇತ್ರವಾಗಿರುವ ಬ್ಯಾಟರಾಯನಪುರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಅದರ ಜೊತೆಗೆ ಇಲ್ಲಿನ ನಿವಾಸಿಗಳ ಆರೋಗ್ಯವನ್ನು ಕೂಡ ಗಮನಿಸುವುದು ನಮ್ಮ ಕರ್ತವ್ಯವಾಗಿದೆ. ಅವರ ಮಾರ್ಗದರ್ಶನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆ ಸೇರಿದಂತೆ ಎಲ್ಲದಕ್ಕೂ ಪ್ರೋತ್ಸಾಹ ನೀಡಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿಯೇ ಇಂಟರ್ ಅಪಾರ್ಟ್‌ಮೆಂಟ್‌ ಸ್ಪೋರ್ಟ್ಸ್ ಫೆಸ್ಟ್-2025 ಆಯೋಜಿಸಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ಅವರ ಪತ್ನಿ ಶ್ರೀಮತಿ ಮೀನಾಕ್ಷಿ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...