ಬೆಂಗಳೂರು | ಹಗಲು-ರಾತ್ರಿ ರಸ್ತೆ ಗುಂಡಿ ಮುಚ್ಚುವ ಕಾರ್ಯದಲ್ಲಿ ನಿರತರಾದ ಬಿಬಿಎಂಪಿ ಅಧಿಕಾರಿಗಳು

Date:

  • ಬಿಬಿಎಂಪಿಯ ಎಲ್ಲ 8 ವಲಯಗಳಲ್ಲಿ ವೇಗ ಪಡೆದುಕೊಂಡ ರಸ್ತೆ ದುರಸ್ತಿ ಕಾರ್ಯ
  • ಬೆಂಗಳೂರು ನಗರಾಭಿವೃದ್ಧಿ ಸಚಿವ, ಡಿಸಿಎಂ ಡಿ ಕೆ ಶಿವಕುಮಾರ್ ಆದೇಶ ಹಿನ್ನೆಲೆ

ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ ಕೆ ಶಿವಕುಮಾರ್ ಅವರ ಆದೇಶ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ನಿರ್ದೇಶನ ನೀಡಿರುವುದರಿಂದ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ವೇಗ ಪಡೆದುಕೊಂಡಿದೆ.

- Advertisement -

ಕಳೆದ ಎರಡು ದಿನಗಳಿಂದ ನಗರದ ಹಲವು ರಸ್ತೆಗಳ ದುರಸ್ತಿ ಕಾರ್ಯವನ್ನು ಬಿಬಿಎಂಪಿ ಕೈಗೆತ್ತಿಕೊಂಡಿದೆ. ಹಗಲು-ರಾತ್ರಿ ಎನ್ನದೆ ರಸ್ತೆ ಗುಂಡಿ ಮುಚ್ಚುವ ಕಾರ್ಯದಲ್ಲಿ ಬಿಬಿಎಂಪಿ ಅಧಿಕಾರಿಗಳು ನಿರತರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
ಗುಂಡಿ 1

ರಸ್ತೆಗಳ ಗುಂಡಿ ಮುಚ್ಚುವ ಕಾಮಗಾರಿಯನ್ನು ಬಿಬಿಎಂಪಿ ಆಯುಕ್ತ ತುಷಾ‌ರ್ ಗಿರಿನಾಥ್ ಅವರು ಮಂಗಳವಾರ ರಾತ್ರಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಖುದ್ದು ವೀಕ್ಷಿಸಿದರು.

ಬಳಿಕ ಮಾತನಾಡಿದ ಅವರು, ನಗರದಲ್ಲಿ ಏಪ್ರಿಲ್ 1ರಿಂದ ಈವರೆಗೆ ನಾಲ್ಕು ಸಾವಿರ ಗುಂಡಿ ಮುಚ್ಚಲಾಗಿದೆ. ಇನ್ನೂ ಎರಡು ಸಾವಿರ ಗುಂಡಿಗಳನ್ನು ಮುಚ್ಚಲು ಬಾಕಿ ಉಳಿದಿವೆ. ‘ರಸ್ತೆ ಗುಂಡಿ ಗಮನ’ ಆ್ಯಪ್‌ನಲ್ಲಿ ಸುಮಾರು 1,600 ದೂರುಗಳು ಬಂದಿವೆ. ಅದರಲ್ಲಿ ಒಂದು ಸಾವಿರ ರಸ್ತೆ ಗುಂಡಿಗಳಾಗಿವೆ” ಎಂದು ತಿಳಿಸಿದರು.

“ಪ್ರಮುಖ ರಸ್ತೆಗಳನ್ನು ಗುಂಡಿ ಮುಕ್ತವಾಗಿಸಲು ಪ್ರತಿ 5 ಕಿ.ಮೀಗೆ ಒಬ್ಬ ಎಂಜಿನಿಯರ್ ನೇಮಿಸಲಾಗಿದೆ. ಇದರ ಮೇಲ್ವಿಚಾರಣೆಯನ್ನು ಪ್ರಧಾನ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ್ ಅವರಿಗೆ ವಹಿಸಲಾಗಿದೆ. ವಾರ್ಡ್ ರಸ್ತೆಗಳ ನಿರ್ವಹಣೆಗೂ ನೋಡಲ್ ಎಂಜಿನಿಯರ್‌ಗಳನ್ನು ನೇಮಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಪ್ರಮುಖ ರಸ್ತೆಗಳನ್ನು ಹಲವು ವರ್ಷಗಳಿಂದ ದುರಸ್ತಿ ಮಾಡಿಲ್ಲ. 459 ಕಿ.ಮೀ ಉದ್ದದ ಪ್ರಮುಖ ರಸ್ತೆಗಳಲ್ಲಿ ₹660 ಕೋಟಿ ವೆಚ್ಚದಲ್ಲಿ ಮೇಲ್ಫದರದ ಡಾಂಬರೀಕರಣ ಮಾಡಲಾಗುತ್ತದೆ. ಅಕ್ಟೋಬರ್‌ನಲ್ಲಿ ಕಾರ್ಯಾದೇಶ ನೀಡಿ, ಒಂದೆರಡು ತಿಂಗಳಲ್ಲಿ ಈ ರಸ್ತೆಗಳನ್ನು ದುರಸ್ತಿ ಮಾಡಲಾಗುತ್ತದೆ ಎಂದರು.

ಮೆಟ್ರೋ ಕಾಮಗಾರಿ ನಡೆಯುತ್ತಿರುವ ಕಡೆ, ಮಳೆ ನೀರು ಹರಿಯಲು ಕ್ರಮ ವಹಿಸುವಂತೆ, ರಸ್ತೆ ಸುಸ್ಥಿತಿಯಲ್ಲಿಡುವಂತೆ ಅಧಿಕಾರಿಗಳಿಗೆ ಆಯುಕ್ತರು ಸೂಚಿಸಿದರು. ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ಈ ವೇಳೆ ಉಪಸ್ಥಿತರಿದ್ದರು.

ಅಮಾನತು ಎಚ್ಚರಿಕೆ

“ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಕಾಲಮಿತಿಯೊಳಗಾಗಿ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಯಾವುದೇ ಮುಲಾಜಿಲ್ಲದೆ ಅಮಾನತು ಮಾಡಲಾಗುವುದು” ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು | ಅಪಘಾತದ ವೇಳೆ ತಾಯಿಯನ್ನು ರಕ್ಷಿಸಿದ್ದ ಬಾಲಕಿಗೆ ಜಿಲ್ಲಾಧಿಕಾರಿ ಸನ್ಮಾನ

ಇದರಿಂದಾಗಿ ಎಚ್ಚೆತ್ತುಕೊಂಡಿರುವ ಬಿಬಿಎಂಪಿಯ ಎಲ್ಲ ಎಂಟು ವಲಯದ ಅಧಿಕಾರಿಗಳು, ಹಗಲು-ರಾತ್ರಿ ರಸ್ತೆ ಗುಂಡಿ ಮುಚ್ಚುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಬೆಂಗಳೂರು ಬಿಬಿಎಂಪಿ

ಇಂದು ರಾಜರಾಜೇಶ್ವರಿ ನಗರ ವಲಯ ಪಂತರಪಾಳ್ಯ-ನಾಯಂಡಹಳ್ಳಿ ಮೆಟ್ರೋ ನಿಲ್ದಾಣದ ಬಳಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ವಲಯ ಜಂಟಿ ಆಯುಕ್ತರಾದ ಅಜಯ್‌ರವರ ನೇತೃತ್ವದಲ್ಲಿ ನಡೆಯಿತು.

ಸ್ಥಳದಲ್ಲಿ ಮುಖ್ಯ ಅಭಿಯಂತರರಾದ ಸ್ವಯಂಪ್ರಭಾ, ಕಾರ್ಯಪಾಲಕ ಅಭಿಯಂತರಾದ ಪಾಪರೆಡ್ಡಿ, ಆರಿಫ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...