ಬಿಬಿಎಂಪಿ | ಪೌರಕಾರ್ಮಿಕರ ಅನುದಾನ ರದ್ದುಗೊಳಿಸಿದ ಸರ್ಕಾರ: ಖಂಡನೆ

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪೌರಕಾರ್ಮಿಕರಿಗೆ ಸುರಕ್ಷತಾ ಪರಿಕರಗಳು ಮತ್ತು ಸಮವಸ್ತ್ರ ಒದಗಿಸಲು ಮಂಜೂರಾಗಿದ್ದ 15 ಕೋಟಿ ಅನುದಾನವನ್ನು ಸರ್ಕಾರ ರದ್ದುಗೊಳಿಸಿರುವುದು ಖಂಡನೀಯ. ಇದರಿಂದ ತೀವ್ರ ನಿರಾಶೆ ಉಂಟಾಗಿದೆ. ಈ ಕೂಡಲೇ ಸರ್ಕಾರ ಪುನರ್ ಹಂಚಿಕೆ ಮಾಡಬೇಕು ಎಂದು ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷೆ ನಿರ್ಮಲ ಅವರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, “ಬಿಬಿಎಂಪಿಯಲ್ಲಿ ಪರಿಶ್ರಮದಿಂದ ಕೆಲಸ ನಿರ್ವಹಿಸುತ್ತಿರುವ 18,500 ಪೌರಕಾರ್ಮಿಕರಿಗೆ ಸುರಕ್ಷತಾ ಉಪಕರಣಗಳು ಮತ್ತು ಸಮವಸ್ತ್ರಗಳನ್ನು ಒದಗಿಸಲು ಜೂನ್ 2022 ರಲ್ಲಿ ಮಂಜೂರಾಗಿದ್ದ 15 ಕೋಟಿ ಅನುದಾನವನ್ನು ತಮ್ಮ ಸರ್ಕಾರ ರದ್ದುಗೊಳಿಸಿರುವುದು ನಮ್ಮ ಸಂಘಟನೆಗೆ ತೀವ್ರ ನಿರಾಶೆಯನ್ನುಂಟು ಮಾಡಿದೆ” ಎಂದು ಹೇಳಿದ್ದಾರೆ.

“ಈ ಅನುದಾನ ರದ್ದಾಗಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಸರ್ಕಾರದ ಇಂತಹ ಪೌರಕಾರ್ಮಿಕ ವಿರೋಧಿ ನೀತಿಗೆ ನಮ್ಮ ತೀವ್ರ ವಿರೋಧವಿದೆ. ಬಿಬಿಎಂಪಿ ಪೌರಕಾರ್ಮಿಕರು ಎಂತಹ ಕಷ್ಟದ ಪರಿಸ್ಥಿತಿಯಲ್ಲೂ ಯಾವುದೇ ಸಮಸ್ಯೆಯನ್ನು ಲೆಕ್ಕಿಸದೇ ತಮ್ಮ ಜೀವದ ಹಂಗು ತೊರೆದು ಬೆಂಗಳೂರಿನಂತಹ ಮಹಾನಗರದ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಯೋಗಕ್ಷೇಮ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರ ಮತ್ತು ಸಮಾಜದ ಕಾನೂನು ಬದ್ಧ ಮತ್ತು ನೈತಿಕ ಜವಾಬ್ದಾರಿಯಾಗಿದೆ” ಎಂದು ತಿಳಿಸಿದ್ದಾರೆ.

Advertisements

“ಅನುದಾನದ ಹಠಾತ್ ರದ್ದತಿಯು ಪೌರಕಾರ್ಮಿಕರ ಸುರಕ್ಷತೆ ಮತ್ತು ಆರೋಗ್ಯಕ್ಕೆ ಧಕ್ಕೆ ತರುವುದಲ್ಲದೆ, ಅವರ ಜೀವನೋಪಾಯ, ಘನತೆ ಮತ್ತು ಸ್ವಾಭಿಮಾನಕ್ಕೆ ಧಕ್ಕೆ ತರುತ್ತದೆ. ಅನುದಾನದ ರದ್ದತಿ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದ ಬದ್ಧತೆಯ ಬಗ್ಗೆ ನಕಾರಾತ್ಮಕ ಸಂದೇಶವನ್ನು ನೀಡಿದೆ. ಸುರಕ್ಷತಾ ಉಪಕರಣಗಳು ಮತ್ತು ಸಮವಸ್ತ್ರಗಳು ಐಷಾರಾಮಿಗಳಲ್ಲ. ಅವು ನಗರದ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವ ಪೌರಕಾರ್ಮಿಕರ ಯೋಗಕ್ಷೇಮ ಮತ್ತು ಗೌರವವನ್ನು ಕಾಪಾಡುವ ಅಗತ್ಯ ಸಾಧನಗಳಾಗಿವೆ” ಎಂದಿದ್ದಾರೆ.

“ಅಪಾಯಕಾರಿ ತ್ಯಾಜ್ಯವನ್ನು ನಿರ್ವಹಿಸುವುದರಿಂದ ಅಥವಾ ಸೂಕ್ತ ಸುರಕ್ಷತಾ ಸಾಧನಗಳ ಅನುಪಸ್ಥಿತಿಯಿಂದ ಪೌರಕಾರ್ಮಿಕರು ಪ್ರತಿದಿನ ಅಸಂಖ್ಯಾತ ರೋಗರುಜಿನಗಳಿಗೆ ತುತ್ತಾಗುತ್ತಿದ್ದಾರೆ. ಈ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಪೌರಕಾರ್ಮಿಕರ ಒಟ್ಟಾರೆ ಕೆಲಸದ ಪರಿಸ್ಥಿತಿಗಳನ್ನು ಸುಧಾರಿಸುವ ಉದ್ದೇಶಕ್ಕಾಗಿ ಮಂಜೂರಾದ ಅನುದಾನವನ್ನು ರದ್ದುಗೊಳಿಸಿರುವುದು ಸಮಾಜದಲ್ಲಿನ ಸಹ ನಾಗರಿಕರ ಯೋಗಕ್ಷೇಮವನ್ನು ಖಾತ್ರಿಪಡಿಸುವ ಪೌರಕಾರ್ಮಿಕರಿಗೆ ಮಾಡಿದ ಘೋರ ಅನ್ಯಾಯವಾಗಿದೆ” ಎಂದು ವಿವರಿಸಿದ್ದಾರೆ.

“ಅನುದಾನವನ್ನು ರದ್ದು ಮಾಡುವುದರಿಂದ ಪೌರಕಾರ್ಮಿಕರ ಸಾಮೂಹಿಕ ಕರ್ತವ್ಯಕ್ಕೆ ಸರ್ಕಾರ ಅಗೌರವವನ್ನು ತೋರಿದೆ. ಸರ್ಕಾರದ ಈ ಕ್ರಮದಿಂದಾಗಿ ಪೌರಕಾರ್ಮಿಕರು ಘನತೆಯುಕ್ತ ಮತ್ತು ಆರೋಗ್ಯವಂತ ಬದುಕು ನಡೆಸಲು ದುರ್ಬಲರಾಗುತ್ತಾರೆ. ಈ ನಮ್ಮ ಸಮಾಜಕ್ಕೆ ನಮ್ಮ ಪೌರಕಾರ್ಮಿಕರ ಕೊಡುಗೆ ಅಮೂಲ್ಯವಾಗಿದೆ ಮತ್ತು ಅವರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ” ಎಂದು ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಚದಡಿ ₹42 ಕೋಟಿ ನಗದು ಪತ್ತೆ; ಅಂಬಿಕಾಪತಿ ದಂಪತಿ ಬಂಧನ ಸಾಧ್ಯತೆ

“ಪೌರಕಾರ್ಮಿಕರಿಗೆ ಸುರಕ್ಷತಾ ಪರಿಕರ ಮತ್ತು ಸಮವಸ್ತ್ರಕ್ಕೆ ಮಂಜೂರಾಗಿದ್ದ 15 ಕೋಟಿ ಅನುದಾನವನ್ನು ರದ್ದುಗೊಳಿಸಿರುವ ಆದೇಶವನ್ನು ವಾಪಸ್ಸು ಪಡೆಯಬೇಕು. ಈ ಕೂಡಲೇ ಅನುದಾನವನ್ನು ಪುನರ್ ಸ್ಥಾಪಿಸಬೇಕು. ಪೌರಕಾರ್ಮಿಕರ ಸುರಕ್ಷತೆ, ಆರೋಗ್ಯ ಮತ್ತು ಘನತೆಯನ್ನು ಭದ್ರಪಡಿಸಿಕೊಳ್ಳಲು ಎಲ್ಲ ಪೌರಕಾರ್ಮಿಕರನ್ನು ಶೀಘ್ರವೇ ಖಾಯಂಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X