ಬಿಬಿಎಂಪಿ | ಪೌರಕಾರ್ಮಿಕರ ಅನುದಾನ ರದ್ದುಗೊಳಿಸಿದ ಸರ್ಕಾರ: ಖಂಡನೆ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪೌರಕಾರ್ಮಿಕರಿಗೆ ಸುರಕ್ಷತಾ ಪರಿಕರಗಳು ಮತ್ತು ಸಮವಸ್ತ್ರ ಒದಗಿಸಲು ಮಂಜೂರಾಗಿದ್ದ ₹15 ಕೋಟಿ ಅನುದಾನವನ್ನು ಸರ್ಕಾರ ರದ್ದುಗೊಳಿಸಿರುವುದು ಖಂಡನೀಯ. ಇದರಿಂದ ತೀವ್ರ ನಿರಾಶೆ ಉಂಟಾಗಿದೆ. ಈ ಕೂಡಲೇ ಸರ್ಕಾರ ಪುನರ್ ಹಂಚಿಕೆ ಮಾಡಬೇಕು ಎಂದು ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷೆ ನಿರ್ಮಲ ಅವರು ಒತ್ತಾಯಿಸಿದ್ದಾರೆ.

- Advertisement -

ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, “ಬಿಬಿಎಂಪಿಯಲ್ಲಿ ಪರಿಶ್ರಮದಿಂದ ಕೆಲಸ ನಿರ್ವಹಿಸುತ್ತಿರುವ 18,500 ಪೌರಕಾರ್ಮಿಕರಿಗೆ ಸುರಕ್ಷತಾ ಉಪಕರಣಗಳು ಮತ್ತು ಸಮವಸ್ತ್ರಗಳನ್ನು ಒದಗಿಸಲು ಜೂನ್ 2022 ರಲ್ಲಿ ಮಂಜೂರಾಗಿದ್ದ 15 ಕೋಟಿ ಅನುದಾನವನ್ನು ತಮ್ಮ ಸರ್ಕಾರ ರದ್ದುಗೊಳಿಸಿರುವುದು ನಮ್ಮ ಸಂಘಟನೆಗೆ ತೀವ್ರ ನಿರಾಶೆಯನ್ನುಂಟು ಮಾಡಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಈ ಅನುದಾನ ರದ್ದಾಗಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಸರ್ಕಾರದ ಇಂತಹ ಪೌರಕಾರ್ಮಿಕ ವಿರೋಧಿ ನೀತಿಗೆ ನಮ್ಮ ತೀವ್ರ ವಿರೋಧವಿದೆ. ಬಿಬಿಎಂಪಿ ಪೌರಕಾರ್ಮಿಕರು ಎಂತಹ ಕಷ್ಟದ ಪರಿಸ್ಥಿತಿಯಲ್ಲೂ ಯಾವುದೇ ಸಮಸ್ಯೆಯನ್ನು ಲೆಕ್ಕಿಸದೇ ತಮ್ಮ ಜೀವದ ಹಂಗು ತೊರೆದು ಬೆಂಗಳೂರಿನಂತಹ ಮಹಾನಗರದ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಯೋಗಕ್ಷೇಮ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರ ಮತ್ತು ಸಮಾಜದ ಕಾನೂನು ಬದ್ಧ ಮತ್ತು ನೈತಿಕ ಜವಾಬ್ದಾರಿಯಾಗಿದೆ” ಎಂದು ತಿಳಿಸಿದ್ದಾರೆ.

“ಅನುದಾನದ ಹಠಾತ್ ರದ್ದತಿಯು ಪೌರಕಾರ್ಮಿಕರ ಸುರಕ್ಷತೆ ಮತ್ತು ಆರೋಗ್ಯಕ್ಕೆ ಧಕ್ಕೆ ತರುವುದಲ್ಲದೆ, ಅವರ ಜೀವನೋಪಾಯ, ಘನತೆ ಮತ್ತು ಸ್ವಾಭಿಮಾನಕ್ಕೆ ಧಕ್ಕೆ ತರುತ್ತದೆ. ಅನುದಾನದ ರದ್ದತಿ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದ ಬದ್ಧತೆಯ ಬಗ್ಗೆ ನಕಾರಾತ್ಮಕ ಸಂದೇಶವನ್ನು ನೀಡಿದೆ. ಸುರಕ್ಷತಾ ಉಪಕರಣಗಳು ಮತ್ತು ಸಮವಸ್ತ್ರಗಳು ಐಷಾರಾಮಿಗಳಲ್ಲ. ಅವು ನಗರದ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವ ಪೌರಕಾರ್ಮಿಕರ ಯೋಗಕ್ಷೇಮ ಮತ್ತು ಗೌರವವನ್ನು ಕಾಪಾಡುವ ಅಗತ್ಯ ಸಾಧನಗಳಾಗಿವೆ” ಎಂದಿದ್ದಾರೆ.

“ಅಪಾಯಕಾರಿ ತ್ಯಾಜ್ಯವನ್ನು ನಿರ್ವಹಿಸುವುದರಿಂದ ಅಥವಾ ಸೂಕ್ತ ಸುರಕ್ಷತಾ ಸಾಧನಗಳ ಅನುಪಸ್ಥಿತಿಯಿಂದ ಪೌರಕಾರ್ಮಿಕರು ಪ್ರತಿದಿನ ಅಸಂಖ್ಯಾತ ರೋಗರುಜಿನಗಳಿಗೆ ತುತ್ತಾಗುತ್ತಿದ್ದಾರೆ. ಈ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಪೌರಕಾರ್ಮಿಕರ ಒಟ್ಟಾರೆ ಕೆಲಸದ ಪರಿಸ್ಥಿತಿಗಳನ್ನು ಸುಧಾರಿಸುವ ಉದ್ದೇಶಕ್ಕಾಗಿ ಮಂಜೂರಾದ ಅನುದಾನವನ್ನು ರದ್ದುಗೊಳಿಸಿರುವುದು ಸಮಾಜದಲ್ಲಿನ ಸಹ ನಾಗರಿಕರ ಯೋಗಕ್ಷೇಮವನ್ನು ಖಾತ್ರಿಪಡಿಸುವ ಪೌರಕಾರ್ಮಿಕರಿಗೆ ಮಾಡಿದ ಘೋರ ಅನ್ಯಾಯವಾಗಿದೆ” ಎಂದು ವಿವರಿಸಿದ್ದಾರೆ.

“ಅನುದಾನವನ್ನು ರದ್ದು ಮಾಡುವುದರಿಂದ ಪೌರಕಾರ್ಮಿಕರ ಸಾಮೂಹಿಕ ಕರ್ತವ್ಯಕ್ಕೆ ಸರ್ಕಾರ ಅಗೌರವವನ್ನು ತೋರಿದೆ. ಸರ್ಕಾರದ ಈ ಕ್ರಮದಿಂದಾಗಿ ಪೌರಕಾರ್ಮಿಕರು ಘನತೆಯುಕ್ತ ಮತ್ತು ಆರೋಗ್ಯವಂತ ಬದುಕು ನಡೆಸಲು ದುರ್ಬಲರಾಗುತ್ತಾರೆ. ಈ ನಮ್ಮ ಸಮಾಜಕ್ಕೆ ನಮ್ಮ ಪೌರಕಾರ್ಮಿಕರ ಕೊಡುಗೆ ಅಮೂಲ್ಯವಾಗಿದೆ ಮತ್ತು ಅವರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ” ಎಂದು ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಚದಡಿ ₹42 ಕೋಟಿ ನಗದು ಪತ್ತೆ; ಅಂಬಿಕಾಪತಿ ದಂಪತಿ ಬಂಧನ ಸಾಧ್ಯತೆ

“ಪೌರಕಾರ್ಮಿಕರಿಗೆ ಸುರಕ್ಷತಾ ಪರಿಕರ ಮತ್ತು ಸಮವಸ್ತ್ರಕ್ಕೆ ಮಂಜೂರಾಗಿದ್ದ ₹15 ಕೋಟಿ ಅನುದಾನವನ್ನು ರದ್ದುಗೊಳಿಸಿರುವ ಆದೇಶವನ್ನು ವಾಪಸ್ಸು ಪಡೆಯಬೇಕು. ಈ ಕೂಡಲೇ ಅನುದಾನವನ್ನು ಪುನರ್ ಸ್ಥಾಪಿಸಬೇಕು. ಪೌರಕಾರ್ಮಿಕರ ಸುರಕ್ಷತೆ, ಆರೋಗ್ಯ ಮತ್ತು ಘನತೆಯನ್ನು ಭದ್ರಪಡಿಸಿಕೊಳ್ಳಲು ಎಲ್ಲ ಪೌರಕಾರ್ಮಿಕರನ್ನು ಶೀಘ್ರವೇ ಖಾಯಂಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...