ಕಳೆದ 15 ದಿನಗಳಿಂದ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯ ನೆಪದಲ್ಲಿ ಬೆಂಗಳೂರಿನ ಎಲ್ಲಾ ನಗರ ಪಾಲಿಕೆ ಕಚೇರಿಗಳಲ್ಲಿನ ಸಿಬ್ಬಂದಿಗಳು ಕೆಲಸಕ್ಕೆ ಹಾಜರಾಗದೆ ಕಚೇರಿಗಳು ಸಂಪೂರ್ಣ ಬಣಗುಡುತ್ತಿವೆ. ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಅಲೆದಾಡುವಂತಹ ಪರಿಸ್ಥಿತಿ ಬಂದೊದಗಿದೆ ಎಂದು ಆಮ್ ಆದ್ಮಿ ಪಕ್ಷ ಗಂಭೀರ ಆರೋಪ ಕೂಡಲೇ ಮುಖ್ಯ ಆಯುಕ್ತರು ಇತ್ತ ಕಡೆ ಗಮನಹರಿಸಿ ಸಾರ್ವಜನಿಕ ಕೆಲಸಗಳು ಮುಂದುವರಿಯುವಂತೆ ಕ್ರಮ ತೆಗೆದುಕೊಳ್ಳಬೇಕೆಂದು ಆಮ್ ಆದ್ಮಿ ಪಕ್ಷ ಇಂದು ಆಗ್ರಹಿಸಿತು.
ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ನಗರಪಾಲಿಕೆ ಕಚೇರಿಯಲ್ಲಿ ಪಕ್ಷದ ಮುಖಂಡ ಅಣ್ಣ ನಾಯಕ್ ಫ್ಯಾಕ್ಟ್ ಚೆಕ್ ಮಾಡಿರುವ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಸಮೀಕ್ಷೆಗಾಗಿ ಸರ್ಕಾರ ಶಿಕ್ಷಣ ಇಲಾಖೆಯ ಸಿಬ್ಬಂದಿಗಳನ್ನು ನೇಮಿಸಿದೆ. ಆದರೆ ಬಿಬಿಎಂಪಿ ಸಿಬ್ಬಂದಿಗಳು ಕಳೆದ ಹಲವು ದಿನಗಳಿಂದ ಕಚೇರಿಗೆ ಬಾರದೆ ಗೈರು ಹಾಜರಾಗಿ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಭಂಗ ಉಂಟು ಮಾಡುತ್ತಿದ್ದಾರೆ. ಕೂಡಲೇ ಜಿಬಿಎ ಮುಖ್ಯ ಆಯುಕ್ತರು ಹಾಗೂ ನಗರ ಪಾಲಿಕೆ ಆಯುಕ್ತರುಗಳು ತಮ್ಮ ಸಿಬ್ಬಂದಿಗಳಿಗೆ ಎಚ್ಚರಿಕೆಯನ್ನು ನೀಡಿ ಕಚೇರಿಗಳಿಗೆ ಹಾಜರಾಗುವಂತೆ ಸೂಚಿಸಬೇಕು, ಹಾಗೂ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳ ಬೇಕೆಂದು ಆಗ್ರಹಿಸಿದ್ದಾರೆ.