ಬೆಂಗಳೂರು | ಬಿಬಿಎಂಪಿ 8 ವಲಯಗಳಿಗೆ ಕಾನೂನು ಮುಖ್ಯಸ್ಥರ ನೇಮಕ

Date:

  • ಬಿಬಿಎಂಪಿ ಆಸ್ತಿ ಉಳಿಸಿಕೊಳ್ಳಲು ಅಧಿಕಾರಿಗಳ ನಿರ್ಲಕ್ಷ್ಯ – ಆರೋಪ
  • ನ್ಯಾ. ಗೋವಿಂದರಾಜ್‌ ಏಕಸದಸ್ಯ ನ್ಯಾಯಪೀಠದಿಂದ ಅರ್ಜಿ ವಿಚಾರಣೆ

ವ್ಯಾಜ್ಯಗಳನ್ನು ಬಗೆಹರಿಸಲು ಹಾಗೂ ಕಾನೂನು ಸಲಹೆಗಳನ್ನು ಪಡೆಯುವ ಉದ್ದೇಶದಿಂದ ಬಿಬಿಎಂಪಿಯ 8 ವಲಯಗಳಿಗೆ ಕಾನೂನು ಮುಖ್ಯಸ್ಥರ ನೇಮಕ ಮಾಡಿಕೊಳ್ಳಲಾಗಿದೆ. ನಿವೃತ್ತ ಜಿಲ್ಲಾ ನ್ಯಾಯಾಧೀಶರು ಇವುಗಳ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ ಎಂದು ಹೈಕೋರ್ಟ್‌ ಗೆ ಬಿಬಿಎಂಪಿ ಮಾಹಿತಿ ನೀಡಿದೆ.

ಬೆಂಗಳೂರಿನ ಪಾಲಿಕೆ ಜಾಗವನ್ನು ಒತ್ತುವರಿ ಮಾಡಿಕೊಂಡು ಡಿ ಶಶಾಂಕ್‌ ಎಂಬಾತ ಮನೆ ಕಟ್ಟಿಕೊಂಡಿದ್ದಾರೆ. ಅಧಿಕಾರಿಗಳು ಆ ಜಾಗವನ್ನು ತೆರವುಗೊಳಿಸುವಲ್ಲಿ ಮತ್ತು ಪಾಲಿಕೆ ಆಸ್ತಿಯನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ವೆಂಕಟೇಶ್‌ ಎಂಬುವವರು ಹೈಕೋರ್ಟ್‌ನಲ್ಲಿ ಸಿವಿಲ್‌ ಕೇಸ್‌ ದಾಖಲಿದ್ದರು.

“ಒತ್ತುವರಿ ಮಾಡಿಕೊಂಡು ಮನೆ ಕಟ್ಟುವಾಗ ಪಾಲಿಕೆ ಅಧಿಕಾರಿಗಳು ಕೋರ್ಟ್‌ ಮೆಟ್ಟಿಲೇರಿ, ಪಾಲಿಕೆ ಜಾವನ್ನು ಉಳಿಸಿಕೊಳ್ಳಲು ಯತ್ನಿಸಬೇಕಿತ್ತು. ಆದರೆ, ಯಾವೊಬ್ಬ ಅಧಿಕಾರಿಗಳು ಇದನ್ನು ಮಾಡಲಿಲ್ಲ.ಪಾಲಿಕೆ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ವ್ಯಕ್ತಿಯ ಜೊತೆ ಶಾಮೀಲಾಗಿ ಕಟ್ಟಡ ಕಟ್ಟಲು ಅನುಕೂಲ ಮಾಡಿಕೊಟ್ಟಿದೆ” ಎಂದು ವೆಂಕಟೇಶ್‌ ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ಖಾಲಿ ಜಮೀನಿನಲ್ಲಿ ನವಜಾತ ಶಿಶು ಪತ್ತೆ; ಪೊಲೀಸರಿಂದ ರಕ್ಷಣೆ

ಅವರ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿದೆ. ಈ ವೇಳೆ ಹಾಜರಿದ್ದ ಬಿಬಿಎಂಪಿ ಕಾನೂನು ಕೋಶದ ಮುಖ್ಯಸ್ಥ ಚಂದ್ರಶೇಖರ ಪಾಟೀಲ, “ಬಿಬಿಎಂಪಿಯ 8 ವಲಯಗಳಲ್ಲಿದ್ದ ಲೋಪಗಳನ್ನು ಸರಿಪಡಿಸಲು ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಾಗಿದೆ. ಪಾಲಿಕೆ ಪರವಾಗಿ ವಕಲತ್ತು ವಹಿಸಲು ವಕೀಲರನ್ನು ನೇಮಿಸಿಕೊಳ್ಳಲು ನಿರ್ದೇಶನ ನೀಡಲಾಗಿದೆ” ಎಂದರು.

“ಬಿಬಿಎಂಪಿಯ ಅಧಿಕಾರಿಗಳು, ಕಾನೂನು ಸಲಹೆಗಾರರು ಮತ್ತು ಬಿಬಿಎಂಪಿ ವಕೀಲರ ನಡುವೆ ಸುಲಭವಾಗಿ ಸಂವಹನ ನಡೆಸುವ ಉದ್ದೇಶದಿಂದ ಸಿಸಿಎಂಎಸ್‌ (ಅಡಕಗೊಂಡ ವಿಷಯಗಳ ನಿರ್ವಹಣಾ ವ್ಯವಸ್ಥೆ) ವೇದಿಕೆ ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದೆ” ಎಂದು ತಿಳಿಸಿದರು.

ಇವರ ವಾದವನ್ನು ಆಲಿಸಿದ ನ್ಯಾಯಪೀಠವು ವಿಚಾರಣೆಯನ್ನು ಏಪ್ರಿಲ್‌ 11ಕ್ಕೆ ಮುಂದೂಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಕ್ಷ್ಮೇಶ್ವರ | ದೊಡ್ಡೂರಲ್ಲಿ ವಾರ್ಡ್ ಸಭೆ; ಗ್ರಾಮದ ಕುಂದು ಕೊರತೆಗಳ ಚರ್ಚೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ 1ನೇ ವಾರ್ಡ್ ಸಭೆಯನ್ನು...

ಕೊಪ್ಪಳ | ವಿಜಯನಗರ ಸಾಮ್ರಾಜ್ಯದ ಮೂಲ ನೆಲೆ ಕುಮ್ಮಟದುರ್ಗ; ಶಾಸಕ ಗಾಲಿ ಜನಾರ್ದನರೆಡ್ಡಿ

ವಿಶ್ವದ ಶ್ರೀಮಂತ ರಾಜ ಮನೆತನಗಳಲ್ಲಿ ಒಂದಾದ ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ಮೂಲ...

ವಿಜಯಪುರ | ಅಂಬೇಡ್ಕರ 67ನೇ ಮಹಾ ಪರಿನಿರ್ವಾಣ ಶೋಕ ಆಚರಿಸಿದ ದಲಿತ ವಿದ್ಯಾರ್ಥಿ ಪರಿಷತ್

ವಿಜಯಪುರ ನಗರದ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಕಚೇರಿಯಲ್ಲಿ ಡಾ. ಬಾಬಾ...

ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದೆ : ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

"ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದ್ದು, ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿ...