ಬೀದಿ ನಾಯಿಗಳಿಗೆ ಆಹಾರ | ಬಿಬಿಎಂಪಿಯಿಂದ ಮಾರ್ಗಸೂಚಿ ಬಿಡುಗಡೆ; ಮಿಶ್ರ ಪ್ರತಿಕ್ರಿಯೆ

Date:

ಬೆಂಗಳೂರಿನಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಹಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿಗಳಿಗೆ ಪ್ರಾಣಿ ಕಾರ್ಯಕರ್ತರು, ಎನ್‌ಜಿಒ ಸ್ವಯಂಸೇವಕರು ಹಾಗೂ ನಾಗರಿಕ ಸಮುದಾಯಗಳಿಂದ ಮಿತ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

- Advertisement -

ಮಾರ್ಗಸೂಚಿಗಳು ಆಹಾರ ನೀಡುವವರ ಸಾಮರ್ಥ್ಯವನ್ನು ಪ್ರಶ್ನಿಸುತ್ತದೆ ಎಂದಿರುವ ಪ್ರಾಣಿಪ್ರಿಯರು, ಪ್ರಾಣಿಗಳ ಆಹಾರಕ್ಕಾಗಿ ಬಿಬಿಎಂಪಿ ಹೆಚ್ಚಿನ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಇನ್ನು, ಎನ್‌ಜಿಒ ವಾಲೆಂಟಿಯರ್‌ಗಳು ಮಾರ್ಗಸೂಚಿಗಳನ್ನು ಸ್ವಾಗತಿಸಿದ್ದು, ‘ಇದು ಸಾಕುಪ್ರಾಣಿಗಳ ಆರೋಗ್ಯವನ್ನು ಮೇಲ್ವಿಚಾರಣೆ ಮಾಡಲು ಸಹಾಯ ಮಾಡುತ್ತದೆ. ಪ್ರಾಣಿಗಳ ಆರೈಕೆ ಮತ್ತು ಸಾರ್ವಜನಿಕರ ನಡುವಿನ ಸಮತೋಲನವನ್ನು ನಿರ್ವಹಿಸುತ್ತದೆ’ ಎಂದಿದ್ದಾರೆ.

ಗುರುವಾರ ಪರಿಚಯಿಸಲಾದ ಮಾರ್ಗಸೂಚಿಗಳಲ್ಲಿ ನಿಗದಿತ ಆಹಾರ ವಲಯಗಳನ್ನು ಗುರುತಿಸಲಾಗಿದೆ. ಆಹಾರ ನೀಡಿದ ಬಳಿಕ ಸ್ಥಳಗಳನ್ನು ಶುಚಿಗೊಳಿಸಬೇಕು. ಬೆಳಿಗ್ಗೆ 5 ಗಂಟೆಯ ನಂತರ ಮತ್ತು ರಾತ್ರಿ 11.30ರ ಮೊದಲು ಪ್ರಾಣಿಗಳಿಗೆ ಆಹಾರ ನೀಡಬೇಕು ಎಂಬುದು ಸೇರಿದಂತೆ ಹಲವಾರು ಷರತ್ತುಗಳನ್ನು ವಿಧಿಸಲಾಗಿದೆ.

ಈ ಮಾರ್ಗಸೂಚಿಗಳ ಬಗ್ಗೆ ಪ್ರತಿಕ್ರಿಯಿಸಿರುವ ಭೂಮಿ ಎನ್‌ಜಿಒದ ಸಂಯೋಜಕಿ ದಿಶಾ ಗಾರ್ಗೆ, “ಬಿಬಿಎಂಪಿಯ ಮಾರ್ಗಸೂಚಿಗಳು ಪ್ರಾಣಿಗಳ ಆಹಾರ ಪ್ರಕ್ರಿಯೆಯನ್ನು ನಿರ್ವಹಿಸಲು ನೆರವಾಗುತ್ತದೆ. ಆಹಾರ ವಲಯಗಳನ್ನು ಗೊತ್ತುಪಡಿಸುವ ಮೂಲಕ, ನಾವು ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಪ್ರೇರೇಪಿಸುತ್ತದೆ. ಪ್ರಾಣಿಗಳ ಆರೋಗ್ಯ ಮತ್ತು ಯೋಗಕ್ಷೇಮವನ್ನು ಮೇಲ್ವಿಚಾರಣೆ ಮಾಡಲು ಸಾಧ್ಯವಾಗುತ್ತದೆ” ಎಂದಿದ್ದಾರೆ.

ಆದಾಗ್ಯೂ, ಪ್ರಾಣಿ ಕಾರ್ಯಕರ್ತ ಅರುಣ್ ಪ್ರಸಾದ್ ಅವರು ಮಾರ್ಗಸೂಚಿಗಳನ್ನು ವಿರೋಧಿಸಿದ್ದಾರೆ. ”ಬಿಬಿಎಂಪಿ ಮನೆ ಬಾಗಿಲಿನಿಂದ ತ್ಯಾಜ್ಯ ಸಂಗ್ರಹಿಸುತ್ತಿರುವುದರಿಂದಾಗಿ ಪ್ರಾಣಿಗಳಿಗೆ ಆಹಾರದ ಮೂಲವೇ ಇಲ್ಲದಂತಾಗಿದೆ. ಪ್ರಾಣಿಗಳನ್ನು ಯಾರು ನೋಡಿಕೊಳ್ಳಬೇಕು ಎಂಬುದರ ಬಗ್ಗೆ ಮಾರ್ಗಸೂಚಿಗಳಲ್ಲಿ ಸ್ಪಷ್ಟತೆ ಇಲ್ಲ.  ಬಿಬಿಎಂಪಿಯು ಪ್ರಾಣಿಗಳಿಗೆ ಉತ್ತಮ ಆಹಾರ ನೀಡುವಂತೆ ನೋಡಿಕೊಳ್ಳಬೇಕು” ಎಂದಿದ್ದಾರೆ.\

 ಈ ಸುದ್ದಿ ಓದಿದ್ದೀರಾ?: ಪುರುಷಾಧಿಪತ್ಯದ ಕ್ರೌರ್ಯ | ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು

“ಸ್ಯಾನಿಟರಿ ನ್ಯಾಪ್‌ಕಿನ್‌ಗಳು ಪ್ರಾಣಿಗಳ ಆರೋಗ್ಯದ ಮೇಲೆ ಪರಿಣಾಮಗಳನ್ನು ಉಂಟುಮಾಡುತ್ತಿವೆ. ಜನರು ತ್ಯಾಜ್ಯವನ್ನು ವಿಲೇವಾರಿ ಮಾಡುವಾಗ ಹೆಚ್ಚು ಜಾಗೃತರಾಗಿರಬೇಕು. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಉಳಿಕೆ ಆಹಾರವನ್ನು ಹೇಗೆ ನಿರ್ವಹಣೆ ಮಾಡಬೇಕು ಎಂಬುದರ ಅರಿವಿಲ್ಲದೆ, ಅವರು ಬೀದಿಗೆ ಚೆಲ್ಲುತ್ತಾರೆ. ಆ ರೀತಿ ಆಗದಂತೆ ನೋಡಿಕೊಳ್ಳಬೇಕು” ಎಂದು ನವೀಶ್ ಶೆಟ್ಟಿ ಎಂಬವರು ಹೇಳಿದ್ದಾರೆ

“ಮಕ್ಕಳು ಪ್ರಾಣಿಗಳ ಬಗ್ಗೆ ಹೆಚ್ಚು ಪ್ರೀತಿ ಹೊಂದಿರುತ್ತಾರೆ. ಈ ಮಾರ್ಗಸೂಚಿಗಳು ಮಕ್ಕಳು ಪ್ರಾಣಿಗಳಿಗೆ ಆಹಾರ ನೀಡುವ ಅವಕಾಶವನ್ನು ಕಿತ್ತುಕೊಳ್ಳಬಾರದು. ಜೊತೆಗೆ, ಪ್ರಾಣಿಗಳ ಆಂಬ್ಯುಲೆನ್ಸ್‌ಗಳನ್ನು ಹೆಚ್ಚಿಸಬೇಕು” ಎಂದು ಮೃಣಾಲಿನಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...