ಬೆಂಗಳೂರಿನಲ್ಲಿ ಶೀಘ್ರದಲ್ಲೇ ‘ಬ್ಯಾರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ’ ಆರಂಭ: ಸ್ಪೀಕರ್ ಯು.ಟಿ. ಖಾದರ್

Date:

ದೂರದ ಕರಾವಳಿಯಿಂದ ಬೆಂಗಳೂರಿಗೆ ಉದ್ಯೋಗ ಮತ್ತು ವಿವಿಧ ಉದ್ದೇಶಗಳಿಗಾಗಿ ಬಂದು ನೆಲೆಸಿರುವ ಬ್ಯಾರಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಕೋನದಿಂದ ಬೆಂಗಳೂರಿನಲ್ಲಿ ಅತೀ ಶೀಘ್ರದಲ್ಲೇ ‘ಬ್ಯಾರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ’ಯ ಪ್ರಾರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಬ್ಯಾರಿ ಸಮುದಾಯದ ಎಲ್ಲ ಮುಖಂಡರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದರು.

- Advertisement -

ಮಂಗಳವಾರ ಸಂಜೆ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿರುವ ಹಿಂದೂಸ್ತಾನ್ ಕಾಂಪ್ಲೆಕ್ಲ್‌ನಲ್ಲಿ ಬ್ಯಾರಿಸ್ ಸೆಂಟ್ರಲ್ ಕಮಿಟಿ(ಬಿಸಿಸಿ)ಯ ನೂತನ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕರಾವಳಿಯ ಬ್ಯಾರಿ ಸಮುದಾಯದ ಮಂದಿ ಸ್ವಾಭಿಮಾನದ ಬದುಕನ್ನು ರೂಪಿಸಿಕೊಳ್ಳುವವರು. ಇತ್ತೀಚಿನ ವರ್ಷಗಳಲ್ಲಿ ಸಮುದಾಯದ ಯುವಕರು ಬೆಂಗಳೂರಿಗೆ ಉದ್ಯೋಗ, ವ್ಯಾಪಾರ ಸೇರಿದಂತೆ ನಾನಾ ಉದ್ದೇಶಗಳಿಗಾಗಿ ಬಂದು ತಮ್ಮದೇ ಅಸ್ತಿತ್ವವನ್ನು ಕಂಡುಕೊಳ್ಳುತ್ತಿರುವುದು ನಿಜಕ್ಕೂ ಶ್ಲಾಘನೀಯ. ನಾನು ರಾಜಕೀಯದಲ್ಲಿ ಸ್ಪೀಕರ್ ಹುದ್ದೆಗೆ ಏರುವುದಕ್ಕೆ ನಮ್ಮ ಬ್ಯಾರಿ ಸಮುದಾಯವು ಸೇರಿದಂತೆ ಎಲ್ಲ ವರ್ಗದ ಜನರ ಪ್ರೀತಿ ವಿಶ್ವಾಸದ ಜೊತೆಗೆ ಹಿರಿಯರ ಆಶೀರ್ವಾದವೂ ಕಾರಣ. ಸಮುದಾಯದ ಯುವಕರೇ ಕಟ್ಟಿಕೊಂಡಿರುವ ಬ್ಯಾರಿಸ್ ಸೆಂಟ್ರಲ್ ಕಮಿಟಿ(ಬಿಸಿಸಿ)ಯು ಬೆಂಗಳೂರಿನಲ್ಲಿರುವ ಬ್ಯಾರಿ ಸಮುದಾಯದ ಎಲ್ಲ ಕಷ್ಟಕ್ಕೆ ತಮ್ಮ ನಿಭಿಡತೆಯ ಮಧ್ಯೆಯೂ ಸ್ಪಂದಿಸುತ್ತಿರುವುದು ಒಳ್ಳೆಯ ಬೆಳವಣಿಗೆ. ಸಮುದಾಯದ ಏಳಿಗೆಗಾಗಿ ದುಡಿಯುತ್ತಾ, ಎಲ್ಲರ ಪ್ರೀತಿ ವಿಶ್ವಾಸವನ್ನು ಗಳಿಸುತ್ತಿದೆ ಎಂಬುದಕ್ಕೆ ಕಳೆದ ವರ್ಷ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬ್ಯಾರಿ ಕೂಟವೇ ಸಾಕ್ಷಿ ಎಂದು ಸ್ಪೀಕರ್ ಶ್ಲಾಘಿಸಿದರು.

WhatsApp Image 2025 11 04 at 11.10.56 PM 1

ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಮ್ಮ ಮೇಲೆ ಮಾಡಿರುವ ಅಕ್ರಮದ ಆರೋಪಗಳ ಕುರಿತಾಗಿ ತಮ್ಮ ಭಾಷಣದಲ್ಲಿ ಮಾತನಾಡಿದ ಯು.ಟಿ. ಖಾದರ್, “ಬ್ಯಾರಿ ಸಮುದಾಯದ ಹೆಸರನ್ನು ಯಾವತ್ತೂ ಕೆಡಿಸಿಲ್ಲ. ಟೀಕೆ ಮಾಡುವವರು ಮಾಡುತ್ತಲೇ ಇರುತ್ತಾರೆ, ಕೆಲಸಗಳು ನೆನಪಿನಲ್ಲಿರುತ್ತದೆ. ವಿಧಾನಸೌಧದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಿದ್ದಕ್ಕೆ ಇವತ್ತು ಟೀಕೆಗಳು ಬರುತ್ತಿವೆ. ವಿಧಾನಸೌಧದಲ್ಲಿ ಪಾಳುಬಿದ್ದಿದ್ದ ಬಾಗಿಲನ್ನು ಸರಿ ಮಾಡಿಸಿದ್ದಕ್ಕೆ ಇವತ್ತು ಕೆಲವರು ಪ್ರಶ್ನಿಸುತ್ತಿದ್ದಾರೆ. ಊಟ ಕೊಟ್ಟದ್ದನ್ನೂ ಈಗ ಪ್ರಶ್ನಿಸುತ್ತಿದ್ದಾರೆ. ತಿನ್ನುವಾಗ ಯಾರೂ ಕೇಳಿರಲಿಲ್ಲ. ಟೀಕೆ ಮಾಡುವವರಿಗೆಲ್ಲ ಯಾರು ಉತ್ತರ ಕೊಟ್ಟುಕೊಂಡು ಹೋಗೋದು? ಕೆಲಸ ಮಾಡುವುದಕ್ಕೆ ಶ್ರಮ, ಯೋಚನೆ, ಯೋಜನೆಯ ಅಗತ್ಯವಿದೆ. ಆದರೆ, ಟೀಕೆ ಮಾಡುವುದಕ್ಕೆ ಇವ್ಯಾವುದೂ ಬೇಕಿಲ್ಲ. ನಾನು ಯಾವತ್ತೂ ಕೂಡ ಬ್ಯಾರಿ ಸಮುದಾಯದ ಹೆಸರನ್ನು ಕೆಡಿಸಿಲ್ಲ, ಇನ್ನು ಮುಂದೆಯೂ ಕೆಡಿಸಲ್ಲ. ಈ ಬಗ್ಗೆ ಈಗಾಗಲೇ ನನ್ನ ಕ್ಷೇತ್ರದ ಜನರ ಸಹಿತ ಎಲ್ಲರಲ್ಲಿಯೂ ತಿಳಿಸಿದ್ದೇನೆ” ಎಂದು ಹೇಳಿದರು.

ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮಾತನಾಡುತ್ತಾ, ಬ್ಯಾರಿಸ್ ಸೆಂಟ್ರಲ್ ಕಮಿಟಿಯಲ್ಲಿ ಬ್ಯಾರಿ ಸಮುದಾಯದ ಮಧ್ಯಮ ವರ್ಗ ಯುವಕರು ಸೇರಿದಂತೆ ಎಲ್ಲರೂ ಒಗ್ಗಟ್ಟಿನಲ್ಲಿ ಕೆಲಸ ಮಾಡುತ್ತಿರುವುದು ನಿಜಕ್ಕೂ ಖುಷಿಕೊಡುತ್ತಿದೆ. ಕಳೆದ ವರ್ಷ ಯುವಕರು ನಡೆಸಿಕೊಟ್ಟಿದ್ದ ಬ್ಯಾರಿ ಕೂಟದ ಯಶಸ್ಸಿನ ಹಿಂದೆ ಎಲ್ಲರ ಶ್ರಮವಿತ್ತು. ಸಮುದಾಯದ ಏಳಿಗೆಗಾಗಿ, ರಾಜಕೀಯ ರಹಿತವಾಗಿ ಕೆಲಸ ಮಾಡುತ್ತಿರುವ ಈ ಸಂಘಟನೆಯು ಬೆಂಗಳೂರಿನಲ್ಲಿ ಇನ್ನಷ್ಟು ಎತ್ತರಕ್ಕೆ ಏರಲಿ. ಇದಕ್ಕೆ ಎಲ್ಲರೂ ಸಹಕಾರ ನೀಡುವುದನ್ನು ಮುಂದುವರಿಸಬೇಕು ಎಂದು ತಿಳಿಸಿದರು.

WhatsApp Image 2025 11 04 at 11.10.56 PM

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಂ ಎ ಗಫೂರ್ ಹಾಗೂ ಕಾರ್ಮಿಕರ ಕನಿಷ್ಠ ವೇತನ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಾಹಿದ್ ತೆಕ್ಕಿಲ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷ್ಯತೆಯನ್ನು ವಹಿಸಿದ್ದ ಬ್ಯಾರಿಸ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಶಬೀರ್ ಬ್ರಿಗೇಡ್ ಮಾತನಾಡಿದರು. ವಿಶೇಷ ಆಹ್ವಾನಿತರಾಗಿದ್ದ ಬೆಂಗಳೂರಿನ ಬ್ಯಾರಿ ಸಮುದಾಯದ ಹಿರಿಯ ವಕೀಲರಾದ ಕಮಾಲ್, ಅಡ್ವೊಕೇಟ್ ಮುಝಫ್ಫರ್ ಅಹ್ಮದ್, ಬೆಂಗಳೂರಿನ ಸುಲ್ತಾನ್ ಗೋಲ್ಡ್ ನಿರ್ದೇಶಕರಾದ ರಿಯಾಝ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಉಮರ್ ಯು ಹೆಚ್, ಸ್ಥಳೀಯ ಮಸೀದಿಯ ಗುರುಗಳಾದ ಶಾಫಿ ಸಅದಿ, ಹಿಂದುಸ್ತಾನ್ ಹೋಟೆಲ್ ಮಾಲೀಕರಾದ ಸೈಯ್ಯದ್ ಮುಖ್ತಾರ್ ಅಹ್ಮದ್, ನಿವೃತ್ತ ಎಸಿಪಿ ಬಶೀರ್ ಅಹ್ಮದ್, ಎಂಎಂವೈಸಿಯ ಅಧ್ಯಕ್ಷರಾದ ಅಬೂಬಕ್ಕರ್, ಬಿಸಿಸಿಯ ಉಪಾಧ್ಯಕ್ಷ ಗಫೂರ್ ಕೆಂಟ್, ಹನೀಫ್ ಖಾನ್ ಕೊಡಾಜೆ, ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್‌ನ ವಹೀದ್ ವಸಂತ ನಗರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

2026ರ ಫೆಬ್ರವರಿ 8ರಂದು 2ನೇ ವರ್ಷದ ಬ್ಯಾರಿ ಕೂಟ: ಪೋಸ್ಟರ್ ಬಿಡುಗಡೆ
ಬ್ಯಾರಿಸ್ ಸೆಂಟ್ರಲ್ ಕಮಿಟಿಯ ವತಿಯಿಂದ 2ನೇ ವರ್ಷದ ಬ್ಯಾರಿ ಕೂಟವನ್ನು 2026ರ ಫೆಬ್ರವರಿ 8ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಪೀಕರ್ ಯು ಟಿ ಖಾದರ್ ಅವರು 2ನೇ ವರ್ಷದ ಬ್ಯಾರಿ ಕೂಟದ ಪೋಸ್ಟರ್ ಹಾಗೂ ಬಿಸಿಸಿಯ ನೂತನ ಲೋಗೋವನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಿದರು.

WhatsApp Image 2025 11 05 at 1.45.53 AM

ಬ್ಯಾರಿಸ್ ಸೆಂಟ್ರಲ್ ಕಮಿಟಿಯ ನೂತನ ಕಚೇರಿಗೆ ಸೌದಿ ಅರೇಬಿಯಾದ ದಾನಿಯೋರ್ವರು ಕೊಡುಗೆಯಾಗಿ ನೀಡಿದ ಕಂಪ್ಯೂಟರ್ ಅನ್ನು ಬಿಸಿಸಿಯ ಅಧ್ಯಕ್ಷ ಶಬೀರ್ ಬ್ರಿಗೇಡ್ ಅತಿಥಿಗಳಿಂದ ಸ್ವೀಕರಿಸಿದರು.

ಕಾರ್ಯಕ್ರಮವನ್ನು ಪತ್ರಕರ್ತ ಬಶೀರ್ ಅಡ್ಯನಡ್ಕ ಅವರು ನಿರೂಪಿಸಿದರು. ಬಿಸಿಸಿಯ ಕಾರ್ಯಕಾರಿ ಸಮಿತಿಯ ಸದಸ್ಯ ಅಡ್ವೊಕೇಟ್ ಕಲಂದರ್ ಕೊಯಿಲ ಸ್ವಾಗತಿಸಿದರು. ಸವಾದ್ ಆರ್.ಟಿ. ನಗರ ಧನ್ಯವಾದ ಸಲ್ಲಿಸಿದರು. ಬ್ಯಾರಿಸ್ ಸೆಂಟ್ರಲ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ನಾಸಿರ್ ಕೆಂಪಿ ಸೇರಿದಂತೆ ಹಲವು ಮಂದಿ ಕಾರ್ಯಕಾರಿ ಸಮಿತಿಯ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

345454
WhatsApp Image 2025 11 04 at 7.40.19 PM
WhatsApp Image 2025 11 05 at 1.45.53 AM 2 1
WhatsApp Image 2025 11 05 at 1.45.53 AM 1
WhatsApp Image 2025 11 05 at 1.47.28 AM
WhatsApp Image 2025 11 05 at 1.47.29 AM
WhatsApp Image 2025 11 05 at 1.47.10 AM
WhatsApp Image 2025 11 05 at 1.45.52 AM
WhatsApp Image 2025 11 05 at 1.32.02 AM
WhatsApp Image 2025 11 04 at 11.10.57 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...