ದ.ಕ | ಜ. 4: ಗುರುಪುರ ಕೈಕಂಬದಲ್ಲಿ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ; ಉಮರ್ ಯು.ಹೆಚ್.

Date:

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಜನವರಿ 4 ರಂದು ಮಂಗಳೂರು ತಾಲೂಕಿನ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದ್ದು, ಹಿರಿಯ ಸಾಹಿತಿ ಅಬ್ದುಲ್‌ ರಹಿಮಾನ್‌ ಕುತ್ತೆತ್ತೂರು ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಉಮರ್ ಯು.ಹೆಚ್. ತಿಳಿಸಿದರು.

- Advertisement -

ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಮಾಹಿತಿ ನೀಡಿದ ಅವರು, ಅಂದು ಬೆಳಗ್ಗೆ 9.30ಕ್ಕೆ ಗುರುಪುರ ಕೈಕಂಬದ ಸಬೀಲುಲ್‌ ಹುದಾ ಅಲ್‌ಬಿರ್ರ್‌ ಶಾಲಾ ವಠಾರದಿಂದ ಸಭಾಂಗಣದ ತನಕ ನಡೆಯಲಿರುವ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ಸಮ್ಮೇಳನ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಹಾಜಿ ಎಂ. ಹೆಚ್.‌ ಮೊಹಿದಿನ್ ಅಡ್ಡೂರು ಉದ್ಘಾಟಿಸಲಿದ್ದಾರೆ. ಬೆಳಗ್ಗೆ 10.15ಕ್ಕೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಸಮ್ಮೇಳನ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ಅಬ್ದುಲ್‌ ರಹಿಮಾನ್‌ ಕುತ್ತೆತ್ತೂರು ಸಮ್ಮೇಳನಾಧ್ಯಕ್ಷರ ಭಾಷಣ ಮಾಡಲಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್‌ ಯು.ಹೆಚ್.‌ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡ್‌, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್‌ ಹಾಗೂ ಮತ್ತಿತರ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಉದ್ಘಾಟನಾ ಸಮಾರಂಭದಲ್ಲಿ ಶಮೀಮಾ ಕುತ್ತಾರ್‌ ಅವರ ʼಪಡಿಞ್ಞಾರ್ರೊ ಪೂʼ (ಕಥಾ ಸಂಕಲನ), ಹಸೀನ ಮಲ್ನಾಡ್‌ ಅವರ ʼಮಿನ್ನಾಂಪುಲುʼ (ಹನಿಗವನ ಸಂಕಲನ), ಎನ್.ಎಂ. ಹನೀಫ್‌ ನಂದರಬೆಟ್ಟು ಅವರ ʼಸಂಪುಕಾತ್‌ʼ (ಕವನ ಸಂಕಲನ), ಬಶೀರ್‌ ಅಹ್ಮದ್‌ ಬೆಳ್ಳಾಯಿರು ಅವರ ʼಬೆಲ್‌ಚʼ (ಕವನ ಸಂಕಲನ) ಮತ್ತು ಹೈದರಲಿ ಕಾಟಿಪಳ್ಳ ಅವರ ʼನಸೀಅತ್‌ʼ (ಕವನ ಸಂಕಲನ) ಬ್ಯಾರಿ ಕೃತಿಗಳು ಬಿಡುಗಡೆಗೆಯಾಗಲಿವೆ.

ಮಧ್ಯಾಹ್ನ12.00ಕ್ಕೆ ಸಮ್ಮೇಳನಾಧ್ಯಕ್ಷರ ಭಾಷಣದ ಮೇಲೆ ನಡೆಯಲಿರುವ ಚರ್ಚಾಗೋಷ್ಠಿಯಲ್ಲಿ ಪ್ರಾಧ್ಯಾಪಕ ಹೈದರ್‌ ಅಲಿ, ಪತ್ರಕರ್ತ ಏ.ಕೆ. ಕುಕ್ಕಿಲ, ಅಬುಧಾಬಿಯ ಬ್ಯಾರೀಸ್‌ ವೆಲ್ಫೇರ್‌ ಫೋರಂನ ಅಧ್ಯಕ್ಷ ಮುಹಮ್ಮದ್‌ ಅಲಿ ಉಚ್ಚಿಲ್‌ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯೆ ಹಫ್ಸಾ ಬಾನು ಭಾಗವಹಿಸಲಿದ್ದಾರೆ. ಮಂಗಳೂರು ವಿ.ವಿ. ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕರ್‌ ಸಿದ್ದೀಕ್‌ ಚರ್ಚಾಗೋಷ್ಠಿ ನಿರೂಪಿಸಲಿದ್ದಾರೆ.

ಬ್ಯಾರಿ ಕವಿಗೋಷ್ಠಿ, ದಫ್‌ ಮತ್ತು ಬ್ಯಾರಿ ಹಾಡುಗಳ ಸಂಭ್ರಮ:

ಮಧ್ಯಾಹ್ನ 2.00ಕ್ಕೆ ಹಿರಿಯ ಸಾಹಿತಿ ಮುಹಮ್ಮದ್‌ ಬಡ್ಡೂರು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬ್ಯಾರಿ ಕವಿಗೋಷ್ಠಿಯಲ್ಲಿ ಬದ್ರುದ್ದೀನ್‌ ಕೂಳೂರು, ಖಲಂದರ್‌ ಬೀವಿ ಅಮಾನುಲ್ಲಾ, ಅಶ್ಫಾಕ್‌ ಅಹ್ಮದ್‌ ಕಾಟಿಪಳ್ಳ, ಶಾಹಿದಾ ಮಂಗಳೂರು, ಶಮೀಮ್‌ ಕುಟ್ಟಿಕಳ, ಅಸ್ಮತ್‌ ವಗ್ಗ, ನಾಫಿಲ ಶಬೀನ್‌ ಕೈಕಂಬ ಮತ್ತು ಮುಹಮ್ಮದ್‌ ಕುಂಞಿ ಮಾಸ್ಟರ್‌ ಅಡ್ಡೂರು ಕವನ ಮಂಡಿಸಲಿದ್ದಾರೆ. ಮಧ್ಯಾಹ್ನ 3.00ಕ್ಕೆ ಮೂಡಬಿದರೆಯ ಆಳ್ವಾಸ್‌ ಕಾಲೇಜಿನ ದಫ್‌ ತಂಡದಿಂದ ದಫ್‌ ಹಾಡು ಮತ್ತು ಬ್ಯಾರಿ ಹಾಡುಗಾರರ ತಂಡದಿಂದ ಹಾಡುಗಳ ಸಂಭ್ರಮವಿರಲಿದೆ.

ಸಾಧಕರಿಗೆ ಸನ್ಮಾನ:

ಸಂಜೆ 4ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿಅಬ್ದುಲ್‌ ಲತೀಫ್‌ ಗುರುಪುರ, ಪಾತುಞ್ಞಿ ಮೂಡುಶೆಡ್ಡೆ, ಎಂ.ಪಿ. ಉಸ್ಮಾನ್ ಮುಕ್ರಿಕ ಸೂರಲ್ಪಾಡಿ, ಸುಲೈಮಾನ್‌ ಗುರುಪುರ, ಸಲೀಕಾ ಸೂರಲ್ಪಾಡಿ, ಆರ್.‌ ಎಸ್. ಅಶ್ರಫ್‌ ಸೂರಲ್ಪಾಡಿ, ಅಬ್ದುಲ್‌ ಶರೀಫ್‌ ಸಾಮರಸ್ಯ ನ್ಯೂಸ್ ಮತ್ತು ಮುಹಮ್ಮದ್ ನಝೀರ್‌ ಬಜ್ಪೆ ಸನ್ಮಾನ ಸ್ವೀಕರಿಸಲಿದ್ದಾರೆ.

ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ದ.ಕ. ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್‌ ಶಾ, ಕಸಪಾ ದ.ಕ. ಜಿಲ್ಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಮತ್ತಿತರ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬ್ಯಾರಿ ಇನ್ಫೋ.ಕಾಂನ ಮುಖ್ಯಸ್ಥ ಬಿ.ಎ. ಮುಹಮ್ಮದ್‌ ಅಲಿ ಸಮಾರೋಪ ಭಾಷಣ ಮಾಡಲಿದ್ದು, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್‌ ಯು.ಹೆಚ್.‌ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಬ್ಯಾರಿ ನಾಟಕ ಮತ್ತು ತಾಲೀಮು ಪ್ರದರ್ಶನ:

ಸಂಜೆ 6.30ರಿಂದ ರಾತ್ರಿ 8.00ರ ತನಕ ಚಲನಚಿತ್ರ ನಿರ್ದೇಶಕ ಇಸ್ಮಾಯಿಲ್‌ ಮೂಡುಶೆಡ್ಡೆ ನಿರ್ದೇಶನದ ʼಬ್ರೋಕರ್‌ ಪೋಕರ್ʼ ಬ್ಯಾರಿ ನಾಟಕ ಮತ್ತು ಗುರುಪುರದ ಎಂ.ಜಿ.ಎಂ. ತಾಲೀಮು ತಂಡದಿಂದ ತಾಲೀಮು ಪ್ರದರ್ಶನ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಬ್ಯಾರಿ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಾ.‌ಇ.ಕೆ.ಎ. ಸಿದ್ದೀಕ್‌ ಅಡ್ಡೂರು, ತಾಜುದ್ದೀನ್‌ ಅಮ್ಮುಂಜೆ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಯು. ಹೆಚ್.‌ ಖಾಲಿದ್‌ ಉಜಿರೆ, ಅನ್ಸಾರ್‌ ಕಾಟಿಪಳ್ಳ, ಎಂ.ಜಿ. ಸಾಹುಲ್‌ ಹಮೀದ್ ಗುರುಪುರ, ಸಲೀಂ ಹಂಡೇಲ್, ಅಬ್ದುಲ್‌ ಜಲೀಲ್‌ ಅರಳ, ಎಂ.ಡಿ. ನವಾಝ್‌ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...