ಕೊಡಗು | ಮುಂಗಾರು ಆರಂಭಕ್ಕೂ ಮುನ್ನ ಅಗತ್ಯ ಸಿದ್ಧತೆಗೆ ಎ.ಎಸ್. ಪೊನ್ನಣ್ಣ ಸೂಚನೆ

Date:

ಕೊಡಗು ಜಿಲ್ಲೆಯಲ್ಲಿ ಮುಂಗಾರು ಶೀಘ್ರ ಆರಂಭವಾಗುವ ಲಕ್ಷಣಗಳು ಕಾಣಿಸುತ್ತಿರುವ ಹಿನ್ನೆಲೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಸೂಚನೆ ನೀಡಿದರು.

- Advertisement -

ಪೊನ್ನಂಪೇಟೆಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಕಾರ್ಯಪಡೆ (ಟಾಸ್ಕ್‌ಫೋರ್ಸ್) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯ ವಿವಿಧ ಭಾಗಗಳಲ್ಲಿ ಈಗಾಗಲೇ ಗಾಳಿ-ಮಳೆಯಿಂದ ಮರದ ಕೊಂಬೆಗಳು ಬೀಳುತ್ತಿರುವುದು ವಿದ್ಯುತ್ ಮತ್ತು ಸಾರಿಗೆ ಸಂಪರ್ಕಕ್ಕೆ ಅಡಚಣೆ ಉಂಟುಮಾಡುತ್ತಿದೆ. ಆದ್ದರಿಂದ ರಸ್ತೆ ಬದಿಯ ಅಪಾಯಕಾರಿ ಮರದ ಕೊಂಬೆಗಳನ್ನು ಕಡಿಯುವುದು, ಚರಂಡಿ ಹೂಳು ತೆರವುಗೊಳಿಸುವುದು, ಗುಂಡಿಬಿದ್ದ ರಸ್ತೆಗಳನ್ನು ದುರಸ್ತಿ ಮಾಡುವುದು ಸೇರಿದಂತೆ ಅಗತ್ಯ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸಮರ್ಪಕವಾಗಿ ಆಲಿಸಿ ತಳಮಟ್ಟದಲ್ಲಿಯೇ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಅವರು ತಾಕೀತು ಮಾಡಿದರು. ಸಣ್ಣಪುಟ್ಟ ಸಮಸ್ಯೆಗಳಿಗೂ ಸಾರ್ವಜನಿಕರು ಶಾಸಕರ ಬಳಿ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಬಾರದು. ಸಂಬಂಧಪಟ್ಟ ಎಂಜಿನಿಯರ್‌ಗಳು ಮತ್ತು ಅಧಿಕಾರಿಗಳು ಸ್ಥಳೀಯ ಮಟ್ಟದಲ್ಲಿಯೇ ಸ್ಪಂದಿಸಿ ಸಮಸ್ಯೆ ಬಗೆಹರಿಸಬೇಕು. ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು, ಎಂದು ಹೇಳಿದರು.

ಅಂಗನವಾಡಿ, ಶಾಲೆ ಹಾಗೂ ಕಾಲೇಜು ಕಟ್ಟಡಗಳ ಸುರಕ್ಷತೆ ಬಗ್ಗೆ ವಿಶೇಷ ಗಮನಹರಿಸುವಂತೆ ಸೂಚಿಸಿದ ಅವರು, ಹಳೆಯ ಮತ್ತು ಅಪಾಯಕರ ಕಟ್ಟಡಗಳ ಬಗ್ಗೆ ತಕ್ಷಣ ವರದಿ ಸಲ್ಲಿಸುವಂತೆ ತಿಳಿಸಿದರು. ವಿದ್ಯುತ್ ಇಲಾಖೆಯು ಹಳೆಯ ಕಂಬಗಳನ್ನು ಬದಲಿಸುವುದು, ಅಗತ್ಯ ವಿದ್ಯುತ್ ಪರಿವರ್ತಕಗಳನ್ನು ದಾಸ್ತಾನು ಇಟ್ಟುಕೊಳ್ಳುವುದು ಸೇರಿದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೆಸ್ಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬರುತ್ತಿರುವುದರಿಂದ ಸಮರ್ಪಕ ನೀರು ಪೂರೈಕೆಗೆ ಆದ್ಯತೆ ನೀಡಬೇಕು ಎಂದ ಅವರು, ರಸ್ತೆ ಬದಿಯ ಗಿಡಗಂಟೆಗಳನ್ನು ತೆರವುಗೊಳಿಸದಿದ್ದರೆ ಸೆಸ್ಕ್, ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಮೇಲಿನ ಒತ್ತಡ ಹೆಚ್ಚಲಿದೆ ಎಂದು ಎಚ್ಚರಿಸಿದರು. ಹೆಚ್ಚಿನ ಮಳೆಯಿಂದ ಮನೆ ಹಾನಿಯಾದಲ್ಲಿ ತಕ್ಷಣ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು. ಮಳೆಗಾಲದಲ್ಲಿ ಆಹಾರ ಧಾನ್ಯಗಳ ಸಮರ್ಪಕ ಪೂರೈಕೆ, ನದಿ ಹಾಗೂ ಹೊಳೆ ಬದಿಯ ನಿವಾಸಿಗಳಿಗೆ ಮುನ್ನೆಚ್ಚರಿಕಾ ಮಾಹಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ನೀಡಿದರು.

ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ದಾಸ್ತಾನು ಇರಬೇಕೆಂದು ಅವರು ಸೂಚಿಸಿದರು.

ಈ ವೇಳೆ ಮಾತನಾಡಿದ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪ್ರಶಾಂತ್, ಶ್ರೀಮಂಗಲ ಆಸ್ಪತ್ರೆಯಲ್ಲಿ ಜ್ವರದ ಔಷಧಿಯೇ ಲಭ್ಯವಿಲ್ಲ ಎಂದು ಸಭೆಯ ಗಮನಕ್ಕೆ ತಂದು, ಜಾನುವಾರುಗಳ ರಕ್ಷಣೆಗೂ ಆದ್ಯತೆ ನೀಡಬೇಕೆಂದು ಸೂಚಿಸಿದ ಶಾಸಕರು, ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ ಹಾಗೂ ಸೇತುವೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಹೇಳಿದರು.

ಮಡಿಕೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶೇಖರ್ ಮಾತನಾಡಿ, ಮುಂಗಾರು ಹಿನ್ನೆಲೆಯಲ್ಲಿ ಈಗಾಗಲೇ ಪಂಚಾಯತ್ ರಾಜ್, ಕಂದಾಯ, ಪೊಲೀಸ್ ಹಾಗೂ ವಿವಿಧ ಎಂಜಿನಿಯರಿಂಗ್ ವಿಭಾಗಗಳ ಸಹಯೋಗದಲ್ಲಿ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಮಾರ್ಗದರ್ಶನ ನೀಡಲಾಗಿದೆ ಎಂದರು.

ಈ ವಿಡಿಯೋ ವೀಕ್ಷಿಸಿ:https://youtu.be/3Lk22PKMz88

ವಿರಾಜಪೇಟೆ ತಹಶೀಲ್ದಾರ್ ಪ್ರವೀಣ್ ಕುಮಾರ್ ಮಾತನಾಡಿ, ಪ್ರವಾಹ ಪೀಡಿತ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಮಾತನಾಡಿದ ಲಾಲು ಅಪ್ಪಣ್ಣ, ಬಿರುನಾಣಿ ಹಾಗೂ ಬಿ.ಶೆಟ್ಟಿಗೇರಿ ಭಾಗಗಳಲ್ಲಿ ಮಳೆ ಆರಂಭವಾದ ಬಳಿಕ ಜಂಗಲ್ ಕಟಿಂಗ್, ಗುಂಡಿ ಮುಚ್ಚುವುದು ಮತ್ತು ಚರಂಡಿ ಸ್ವಚ್ಛಗೊಳಿಸುವ ಕಾಮಗಾರಿಗಳನ್ನು ಕೈಗೊಳ್ಳುವುದು ಕಷ್ಟಸಾಧ್ಯವಾಗುತ್ತದೆ. ಆದ್ದರಿಂದ, ಮಳೆ ಆರಂಭಕ್ಕೂ ಮುನ್ನವೇ ಅಗತ್ಯ ಸಿದ್ಧತೆ ಪೂರ್ಣಗೊಳಿಸಬೇಕು ಎಂದು ಅಭಿಪ್ರಾಯಪಟ್ಟರು. ಕುಡಿಯುವ ನೀರು ವಿಭಾಗದ ಎಂಜಿನಿಯರ್ ಭಾಸ್ಕರ್ ಮಾತನಾಡಿ, ಕುಡಿಯುವ ನೀರಿನ ಕಾಮಗಾರಿಗೆ ಸರ್ಕಾರದಿಂದ ಒಂದೂವರೆ ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಸಂಬಂಧಪಟ್ಟ ಕಾಮಗಾರಿಗಳಿಗೆ ಶೀಘ್ರ ಅನುಮೋದನೆ ನೀಡಬೇಕೆಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ಎಲ್ಲರೂ ಸಹಕಾರ ನೀಡಿ: ಎ.ಎಸ್. ಪೊನ್ನಣ್ಣ

ಸಭೆಯಲ್ಲಿ ಪೊನ್ನಂಪೇಟೆ ತಹಶೀಲ್ದಾರ್ ಸಂಜನಾ, ತಾಲೂಕು ಪಂಚಾಯಿತಿ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸೆಸ್ಕ್, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ವಿರಾಜಪೇಟೆ ಪುರಸಭೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮಳೆಗಾಲದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...

ರಾಯಚೂರು | ಕಾರು ಪಲ್ಟಿ: ಕೃಷ್ಣಾ ಭಾಗ್ಯ ಜಲನಿಗಮದ ಸಹಾಯಕ ಎಂಜಿನಿಯರ್ ಸಾವು

ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೃಷ್ಣಾ ಭಾಗ್ಯ ಜಲನಿಗಮದ ನಾರಾಯಣಪುರ ವಲಯದ...

ರಾಯಚೂರು | ಯರಮರಸ್ ವಿದ್ಯುತ್ ಘಟಕ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡಲು ಆಗ್ರಹ

ಯರಮರಸ್ ವಿದ್ಯುತ್ ಘಟಕಕ್ಕೆ ಭೂಮಿ ಕಳೆದುಕೊಂಡ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡದೇ...

ರಾಯಚೂರು | ನಾರಾಯಣಪುರ ಬಲದಂಡೆ ಕಾಲುವೆಗೆ ನೀರು ಹರಿಸದ ಅಧಿಕಾರಿಗಳ ವಿರುದ್ಧ ಅ.2ರಂದು ರೈತರಿಂದ ಮುತ್ತಿಗೆ

ನಾರಾಯಣಪುರ ಬಲದಂಡೆ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸದ ನಿಗಮದ ಅಧಿಕಾರಿಗಳ ನಿರ್ಲಕ್ಷ್ಯ...