ಲಾರಿ-ಕಾರು ನಡುವೆ ಅಪಘಾತ ಸಂಭವಿಸಿದ್ದು, ಪತಿ ಎದುರೇ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಡಾ.ಆಶಾ ಕೋಳಿ(32) ಮೃತಪಟ್ಟ ದುರ್ದೈವಿ. ಮೂಡಲಗಿ ತಾಲೂಕಿನ ಸಂಗನಕೇರಿಯ ನಿವಾಸಿಯಾಗಿರುವ ಅವರು, ವೃತ್ತಿಯಲ್ಲಿ ವೈದ್ಯರಾಗಿದ್ದು, ಇಂದು ಬೆಳಿಗ್ಗೆ ತಮ್ಮ ಪತಿಯೊಂದಿಗೆ ಧಾರವಾಡದಿಂದ ಬೆಳಗಾವಿ ಕಡೆಗೆ ಬರುವಾಗ ಕಾರು ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದೆ.
ಅಪಘಾತದಿಂದಾಗಿ ಡಾ ಆಶಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು. ಅವರ ಪತಿ ಡಾ. ಭೀಮಪ್ಪ ಕೋಳಿ, ಚಾಲಕ ಮಹೇಶ ಖೋತ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮೈಸೂರು | ಮುಡಾ ಪ್ರಕರಣದ ವರದಿ ಸಲ್ಲಿಕೆಗೆ ಮೇ 31ರವರೆಗೆ ಗಡುವು ವಿಸ್ತರಣೆ
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.