ಬೆಳಗಾವಿ | ಪೋಲಿಸರಿಂದ ಅಧಿಕಾರಲೋಪ ಆರೋಪ; ಮಾಹಿತಿ ಹಕ್ಕು ಹೋರಾಟಗಾರ ಕ್ರಮಕ್ಕೆ ಆಗ್ರಹ

Date:

ಪೋಲಿಸರಿಂದ ಅಧಿಕಾರಲೋಪವಾಗುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಹಿತಿ ಹಕ್ಕು ಹೋರಾಟಗಾರ ಶ್ರೀನಿವಾಸಗೌಡ ಪಾಟಿಲ್‌ ಆಗ್ರಹಿಸಿದ್ದಾರೆ.

- Advertisement -

ಬೆಳಗಾವಿಯ ಉತ್ತರ ವಲಯ ಪೋಲಿಸ್ ಮಹಾನಿರೀಕ್ಷಕರು, ಗೃಹ ಮಂತ್ರಿಗಳು ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಿ‌ ಮಾತನಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಗ್ರಾಮ ಪಂಚಾಯಿತಿ ಭ್ರಷ್ಟಾಚಾರ ಖಂಡಿಸಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾಮ ಪಂಚಾಯಿತಿ ಎದುರು 2017ರ ಮಾರ್ಚ್‌ 6ರಂದು ನಡೆಸಿದ್ದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ ನನ್ನ ಮತ್ತು ಸಾರ್ವಜನಿಕರ ವಿರುದ್ಧ ಪೊಲೀಸ್‌ ಇಲಾಖೆಯು ದೂರು ದಾಖಲಿಸಿ, ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸಿ ದೋಷಾರೋಪಣ ಪತ್ರ ತಾಯಾರಿಸಿ ನಮ್ಮನ್ನು 7 ವರ್ಷಗಳ ಕಾಲ ವಿಚಾರಣೆಗೆ ಒಳಪಡಿಸುವಂತೆ ಮಾಡಿದ್ದರು” ಎಂದು ಆರೋಪಿಸಿದರು.

“ನ್ಯಾಯಾಲಯವು ಈ ಪ್ರಕರಣದಲ್ಲಿ ನಮ್ಮನ್ನು ಆರೋಪಮುಕ್ತಗೊಳಿಸಿದೆ. ಆದ್ದರಿಂದ ದೂರುದಾರರು ಮತ್ತು ಪೊಲೀಸ್ ಅಧಿಕಾರಿಗಳ ವಿರುದ್ಧ ಕಲಂ 166, 182, 211, 219, 220, 469, 471 ಮತ್ತು ಕಂಡುಬರುವ ಇತರೆ ಕಲಂಗಳ ಪ್ರಕಾರ ಮೊಕದ್ದಮೆ ದಾಖಲಿಸಬೇಕು. ಅಧಿಕಾರಿಗಳು ಗಂಭೀರ ಕರ್ತವ್ಯಲೋಪವೆಸಗಿದ್ದು ಮತ್ತು ಅಧಿಕಾರಿಗಳಿಗೆ ಸುಳ್ಳು ವರದಿ ನೀಡಿದ್ದಾರೆ. ಹಾಗಾಗಿ 15 ದಿನದೊಳಗಾಗಿ ತನಿಖೆ ನಡೆಸಿ ಸಂಬಂಧಪಟ್ಟ ಪೋಲಿಸ್ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ದಲಿತರಿಗೆ ಬಹಿಷ್ಕಾರ ಪ್ರಕರಣ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಈ ಕುರಿತು ಈ ದಿನ.ಕಾಮ್ ಜೊತೆ ಮಾತನಾಡಿದ ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಪಾಟಿಲ್, “ಅನಾವಶ್ಯಕವಾಗಿ 7 ವರ್ಷಗಳ ಕಾಲ ಕೋರ್ಟಿಗೆ ಅಲೆದಾಡಿಸಿ ಮಾನಸಿಕವಾಗಿ ಕಿರುಕುಳ ನೀಡಿದ ಅಧಿಕಾರಿಗಳನ್ನು ವಜಾಗೊಳಿಸಬೇಕು. ಹಾಗೂ 15 ದಿನಗಳೊಳಗೆ ಸೂಕ್ತ ಆದೇಶವನ್ನು ಮಾಡಬೇಕೆಂದು ಪೋಲಿಸ್ ಅಧಿಕಾರಿಗಳಿಗೆ ಲಿಖಿತವಾಗಿ ಮನವಿ ಮಾಡಿದ್ದೇನೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...