ಬೆಳಗಾವಿ | ಅರಣ್ಯ ಭೂಮಿ ಅತಿಕ್ರಮಣ ಆರೋಪ; ವಿಷದ ಬಾಟಲಿ ಹಿಡಿದು ರೈತ ಮಹಿಳೆಯರ ಪ್ರತಿಭಟನೆ

Date:

ಅರಣ್ಯ ಭೂಮಿ ಅತಿಕ್ರಮಣ ಮಾಡಿ ಸಾಗುವಳಿ ಮಾಡಿದ್ದಾರೆಂದು ರೈತರನ್ನು ಒಕ್ಕಲೆಬ್ಬಿಸಲು ಬಂದ ಅರಣ್ಯ ಇಲಾಖೆ ಅಧಿಕಾರಿಗಳನ್ನು ತಡೆದ ಮಹಿಳೆಯರು ವಿಷದ ಬಾಟಲಿ ಹಿಡಿದು ಪ್ರತಿಭಟಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದೇವಗಾಂವ ಗ್ರಾಮದಲ್ಲಿ ನಡೆದಿದೆ.

- Advertisement -

ಗೋವಿನ ಜೋಳ ಹಾಗೂ ಕಬ್ಬುಬೆಳೆ ನಾಶ ಮಾಡಿ ರಥರನ್ನು ಒಕ್ಕಲೆಬ್ಬಿಸಲು ಬಂದಿದ್ದ ಅಧಿಕಾರಿಗಳ ವಿರುದ್ಧ ದೇವಗಾಂವ ಗ್ರಾಮದ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, “1957ರಿಂದ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತ ಬಂದಿದ್ದೇವೆ. ಇದೀಗ ಇದ್ದಕಿದ್ದಂತೆ ಜೆಸಿಬಿ ಯಂತ್ರದ ಮೂಲಕ ಬಂದ ಅರಣ್ಯ ಇಲಾಖೆ ಅಧಿಕಾರಿಗಳು, ಗೋವಿನಜೋಳ ಕಬ್ಬುಬೆಳೆಗಳನ್ನು ನಾಶ ಮಾಡಿ, ಕೈಗೆ ಬಂದಿದ್ದು ಬಾಯಿಗೆ ಬರದಂತೆ ಮಾಡಲು ಮುಂದಾಗಿದ್ದಾರೆ” ಎಂದು ರೈತ ಮಹಿಳೆಯರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

“ಪಹಣಿ ಪತ್ರಿಕೆಯ ಸಾಗುವಳಿದಾರರ ಹೆಸರಿನಲ್ಲಿ ಕೆಲವರ ಹೆಸರುಗಳಿವೆ. ನಂತರದ ದಿನಗಳಲ್ಲಿ ಈ ಭೂಮಿಯನ್ನು ಅರಣ್ಯ ಇಲಾಖೆ ವ್ಯಾಪ್ತಿಗೆ ಪಡೆಯಲಾಗಿದೆ. ಕೆಲವರಿಗೆ ಭೂಮಿ ಹಕ್ಕು ನೀಡಿ ನಮಗೇಕೆ ನೀಡುತ್ತಿಲ್ಲ. ಈ ಭೂಮಿಯಲ್ಲಿ ನಾವು ಇಷ್ಟು ವರ್ಷಗಳ ಕಾಲ ಬದುಕು ನಡೆಸಿದ್ದೇವೆ. ಸಾಲ ಮಾಡಿ ಬೆಳೆದ ಬೆಳೆಗಳನ್ನು ನಾಶಮಾಡಲು ಇದೀಗ ಅಧಿಕಾರಿಗಳು ಬಂದಿದ್ದಾರೆ. ಸಾಗುವಳಿ ಭೂಮಿಯಲ್ಲಿ ಟ್ರಂಚ್ ಹೊಡೆದು ಸಸಿ ನೆಡಲು ಬಂದಿದ್ದಾರೆ.‌ ನಮ್ಮ ಜಾಗ ಬಿಟ್ಟು ನಾವು ಕದಲುವದಿಲ್ಲ” ಎಂದು ರೈತ ಮಹಿಳೆಯರು ವಿಷದ ಬಾಟಲಿ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಮುಡಾ ಹಗರಣ ಪ್ರಕರಣ | ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮೈಸೂರು ವಕೀಲರ ಬೆಂಬಲ

ಕಿತ್ತೂರು ಕರ್ನಾಟಕ ರೈತ ಜಾಗೃತಿ ಸಂಘಟನೆಯ ಮುಖಂಡರಾದ ಎಂ ಎಫ್‌ ಜಕಾತಿ, ಅಪ್ಪೇಶ ದಳವಾಯಿ, ಬಿಷ್ಪಪ್ಪ ಶಿಂಧೆಯವರು ಘಟನಾ ಸ್ಥಳಕ್ಕೆ ಆಗಮಿಸಿ, ಟ್ರಂಚ್‌ ಹೊಡೆಯಲು ಅವಕಾಶ ಕೊಡುತ್ತೇವೆ. ಆದರೆ ಬೆಳೆ ನಾಶಮಾಡಬಾರದೆಂದು ಅಧಿಕಾರಿಗಳ ಜತೆಗೆ ಒಪ್ಪಂದ ಮಾಡಿಕೊಂಡ ಬಳಿಕ ರೈತರು ಟ್ರಂಚ್ ಹೊಡೆಯಲು ಅವಕಾಶ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲು ಸ್ಥಳಾಂತರಕ್ಕೆ ತಾತ್ಕಾಲಿಕ ತಡೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...