ಬೆಳಗಾವಿ | ಪೊಲೀಸರು ನಿರ್ಲಕ್ಷ್ಯ ವಹಿಸಿದ್ದೇ ಅಂಜಲಿ ಹತ್ಯೆಗೆ ಕಾರಣ; ಆರೋಪ

Date:

“ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ ಆರೋಪಿ ಗಿರೀಶ ಸಾವಂತಗೆ ಗಲ್ಲು ಶಿಕ್ಷೆ ವಿಧಿಸಬೇಕು” ಎಂದು ಆಗ್ರಹಿಸಿ ಬೆಳಗಾವಿ ನಗರದಲ್ಲಿ ಜಿಲ್ಲಾ ಕೋಳಿ ಬೆಸ್ತ ಸಮಾಜ ಸಂಘದವರು ಪ್ರತಿಭಟನೆ ನಡೆಸಿದರು.

- Advertisement -

ನಗರದ ರಾಣಿ ಚನ್ನಮ್ಮನ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ಅವರು, ಜಿಲ್ಲಾಧಿಕಾರಿ ಕಚೇರಿ ಆವರಣದವರೆಗೆ ಮೆರವಣಿಗೆ ನಡೆಸಿ, ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

“ಅಂಜಲಿ ಅವರಿಗೆ ಕೊಲೆ ಬೆದರಿಕೆ ಹಾಕಿದ ಕುರಿತು ಪೊಲೀಸರಿಗೆ ಮೌಖಿಕವಾಗಿ ದೂರು ನೀಡಲಾಗಿತ್ತು. ಅವರು ನಿರ್ಲಕ್ಷ್ಯ ತೋರಿದ್ದರಿಂದ ಹತ್ಯೆಯಾಯಿತು. ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾದ ಸಂದರ್ಭವೇ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದರೆ, ಇಂತಹ ಘಟನೆ ಮರುಕಳಿಸುತ್ತಿರಲಿಲ್ಲ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

ವಿಧಾನ ಪರಿಷತ್‌ ಸದಸ್ಯ ಸಾಬಣ್ಣ ತಳವಾರ ಮಾತನಾಡಿ, “ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಎರಡನೇ ಕೊಲೆ ಇದಾಗಿದೆ. ಈ ಬೆಳವಣಿಗೆ ಗಮನಿಸಿದರೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ಅಂಜಲಿ ಕೊಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು. ಅಂಜಲಿ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ ಪರಿಹಾರ ವಿತರಿಸಬೇಕು” ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಧುಶ್ರೀ ಪೂಜಾರಿ ಮಾತನಾಡಿ, “ನೇಹಾ ಹಿರೇಮಠ ಕೊಲೆ ಪ್ರಕರಣವನ್ನೇ ಜನರು ಇನ್ನೂ ಮರೆತಿಲ್ಲ. ಹೀಗಿರುವಾಗ ಮತ್ತೊಂದು ಕೊಲೆ ನಡೆದಿದ್ದು, ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು. ಮಹಿಳೆಯರ ಸುರಕ್ಷತೆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದಿಲೀಪ ಕುರಂದವಾಡೆ, ಪ್ರಧಾನ ಕಾರ್ಯದರ್ಶಿ ಸಂಜಯ ಪಾಟೀಲ, ನಗರ ಘಟಕದ ಅಧ್ಯಕ್ಷ ಸಿದಗೌಡ ಸುಣಗಾರ, ಯುವ ಘಟಕದ ಅಧ್ಯಕ್ಷ ಅಪ್ಪಯ್ಯ ರಾಮರಾವ್, ತಾಲೂಕು ಘಟಕದ ಅಧ್ಯಕ್ಷೆ ಗೀತಾ ಕೋಳಿ, ಅಶೋಕ ಶಿರಗೆ, ಲಕ್ಷ್ಮಣ ಯಮಕನಮರಡಿ, ಕಾಶಪ್ಪ ಕೋಳಿ, ಮಲ್ಲಪ್ಪ ಮುರಗೋಡ, ಸಾಗರ ಕೋಳಿ, ರವಿ ಪೂಜಾರ, ಕೃಷ್ಣಭಟ್, ವಿಜಯ ಜಾಧವ, ಅಪ್ಪಾಸಾಹೇಬ ಪೂಜಾರ ಇದ್ದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | 25, 26ರಂದು 10ನೇ ಮೇ ಸಾಹಿತ್ಯ ಸಮ್ಮೇಳನ: ಬಸವರಾಜ್ ಸೂಳಿಬಾವಿ

ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌, ವಿಶ್ವ ಹಿಂದೂ ಪರಿಷತ್‌ ಮತ್ತಿತರ ಸಂಘಟನೆಯವರು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು‌.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯಾ ಪ್ರಕರಣ: ಮಂಗಳೂರಿಗೆ ನೂತನ SIT ತಂಡ; ತನಿಖೆಗೆ ಸಿದ್ಧತೆ

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್...

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್...

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...