ಬೈಕ್ ಸವಾರನ ನಿಯಂತ್ರಣ ತಪ್ಪಿ ಪಾದಚಾರಿಗೆ ಢಿಕ್ಕಿಯಾದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೊರವಲಯದಲ್ಲಿರುವ ಸರ್ಕಾರಿ ಪದವಿ ಕಾಲೇಜು ಬಳಿ ನಡೆದಿದೆ.
ಮುಳ್ಳೂರ ಬೆಟ್ಟದಿಂದ ರಾಮದುರ್ಗದ ಕಡೆಗೆ ವೇಗವಾಗಿ ಬರುತ್ತಿದ್ದ ಬೈಕ್ ಸವಾರ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಡೆದುಕೊಂಡು ರಾಮದುರ್ಗದ ಕಡೆಗೆ ಹೊರಟಿದ್ದ ವೃದ್ಧನಿಗೆ ಢಿಕ್ಕಿ ಹೊಡೆದಿದ್ದು, ಈ ಅಪಘಾತ ಸಂಭವಿಸಿದೆ. ಬೆಳಗಾವಿ
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ದೊಡ್ಡಮಂಗಡಿ ಗ್ರಾಮದ ನಿವಾಸಿ ಹನುಮಂತ ಸಿದ್ದಪ್ಪ ಜಂಜಳಿ(65) ಎಂದು ಗುರುತಿಸಲಾಗಿದೆ. ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಭ್ರಷ್ಟಾಚಾರ ನಡೆಸಿದರೆ ಸಹಿಸುವ ಪ್ರಶ್ನೆಯೇ ಇಲ್ಲ; ಎಸ್ ಎಸ್ ಮಲ್ಲಿಕಾರ್ಜುನ್ ಎಚ್ಚರಿಕೆ
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.