ಬೆಳಗಾವಿ | ಕರಾಳ ದಿನಾಚರಣೆಗೆ ಅನುಮತಿ ಇಲ್ಲ; ಎಂಇಎಸ್‌ಗೆ ಜಿಲ್ಲಾಧಿಕಾರಿ ಸೌಹಾರ್ದತೆ ಪಾಠ

Date:

Advertisements

ಯಾವುದೇ ಕಾರಣಕ್ಕೂ ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನಾಚರಣೆಗೆ ಅನುಮತಿ ಇಲ್ಲವೆಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಎಂಇಎಸ್‌ಗೆ ಸೌಹಾರ್ದತೆಯ ಪಾಠ ಹೇಳಿದ್ದಾರೆ.

ಮಹಾರಾಷ್ಟ್ರ ಏಕೀಕರಣ ಸಮಿತಿಯು ಕರಾಳ ದಿನಾಚರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿ ಎಂಇಎಸ್ ಮುಖಂಡರ ಜೊತೆ ಸುದಿರ್ಘವಾಗಿ ಚರ್ಚೆ ನಡೆಸಿದರು.

“ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಸಂದರ್ಭದಲ್ಲಿ ಇಲ್ಲಿಯ ಜನತೆ ಈದ್ ಮಿಲಾದ್ ಮೆರವಣಿಗೆಯನ್ನು ಮುಂದೂಡಿ ಸೌಹಾರ್ದತೆ ಕಾಪಾಡಿದ್ದಾರೆ. ಅದೇ ರೀತಿ ನೀವೂ ಕೂಡಾ ಭಾಷಾ ಸೌಹಾರ್ದತೆಯನ್ನು ಕಾಪಾಡಿ. ಕರ್ನಾಟಕ ರಾಜ್ಯೋತ್ಸವ ರಾಜ್ಯದ ಪ್ರಮುಖ ಮತ್ತು ಹೆಮ್ಮೆಯ ದಿನವಾಗಿದೆ. ಆದ್ದರಿಂದ ನವೆಂಬರ್ 01ರಂದು ಕರಾಳ ದಿನಾಚರಣೆಗೆ ಅವಕಾಶ ನೀಡುವುದಿಲ್ಲ. ಶಾಂತಿ ಸೌಹಾರ್ದತೆ ಕಾಪಾಡುವುದು ಜಿಲ್ಲಾಡಳಿತದ ಕರ್ತವ್ಯವಾಗಿದೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಂಜಾರ ಸಂಸ್ಕೃತಿಯ ಅನನ್ಯತೆ ಮೇಲೆ ಬೆಳಕು ಚೆಲ್ಲಬೇಕು: ಡಾ. ಸಣ್ಣರಾಮ

ಎಂಇಎಸ್ ಕಾರ್ಯಕರ್ತರು, ನಮಗೆ ನವೆಂಬರ್ 1ರಂದು ಕರಾಳ ದಿನಾಚರಣೆಗೆ ಅವಕಾಶ ನೀಡಬೇಕೆಂದು ತಕಾರಾರು ಮಾಡಿದಾಗ ಜಿಲ್ಲಾಧಿಕಾರಿಗಳು ಎಂಇ‌ಎಸ್ ಮುಖಂಡರಿಗೆ ಬುದ್ಧಿವಾದ ಹೇಳಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ಇರುವುದಿಲ್ಲವೆಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಮಹಾಪೌರ ಮಾಲೋಜಿರಾವ್‌ ಅಷ್ಟೇಕರ, ಪ್ರಕಾಶ ಮರಗಾಳೆ, ವಿಕಾಸ ಕಲಘಟಗಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X