ಶಾಲೆಗೆ ರಜೆಯಿದ್ದ ಕಾರಣ ಕೆರೆಗೆ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ವಾಘವಡೆ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಗಣೇಶ ಹೀರಾಮಣಿ ಸುತಾರ್(15) ಮೃತ ಬಾಲಕ. ಮಂಗಳವಾರ ಶಾಲೆಗೆ ರಜೆಯಿದ್ದ ಕಾರಣ ಕೆರೆಯಲ್ಲಿ ಈಜಲು ಹೋಗಿದ್ದಾನೆ. ಮಂಗಳವಾರ ದಿನವಿಡಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬದವರು ಎಲ್ಲ ಕಡೆ ಹುಡುಕಿದ್ದರೂ ಎಲ್ಲಿಯೂ ಸುಳಿವು ಸಿಕ್ಕಿರಲಿಲ್ಲ. ಕೆರೆಯ ಬಳಿ ಆತನ ಬಟ್ಟೆ ಕಂಡುಬಂದಾಗ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ರಾತ್ರೋರಾತ್ರಿ ಕೆರೆ ಮಣ್ಣು ಕಳ್ಳತನ; ಗುತ್ತಿಗೆದಾರ ವಿಶ್ವನಾಥ ಕುಂಬಾರನ ವಿರುದ್ಧ ಸೂಕ್ತ ಕ್ರಮವಾಗುವುದೇ?
ವಡಗಾಂವ ಗ್ರಾಮೀಣ ಪೊಲೀಸರಿಗೆ ಕೂಡಲೇ ಮಾಹಿತಿಯನ್ನು ನೀಡಲಾಗಿದ್ದು, ಸ್ಥಳಕ್ಕಾಗಮಿಸಿದ ಸಿಬ್ಬಂದಿ ಬಾಲಕನ ಶವವನ್ನು ಕೆರೆಯಿಂದ ಮೇಲಕ್ಕೆತ್ತಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.