ಬೆಳಗಾವಿ | ಆಸ್ತಿಗಾಗಿ ಜಗಳ: ತಮ್ಮನ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆಗೈದ ಸಹೋದರ

Date:

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಟ್ರ್ಯಾಕ್ಟರ್ ಹತ್ತಿಸಿ ಒಡಹುಟ್ಟಿದ ತಮ್ಮನನ್ನೇ ಅಣ್ಣನೋರ್ವ ಭೀಕರವಾಗಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣ ಹೊರವಲಯದ‌ ಜಮೀನಿನಲ್ಲಿ ನಡೆದಿದೆ.

- Advertisement -

ಯರಗಟ್ಟಿ ಪಟ್ಟಣದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದ ಕಿರುಕುಳಕ್ಕೆ ಬೇಸತ್ತು ಸಹೋದರನ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದ್ದು ಆರೋಪಿಯ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಯರಗಟ್ಟಿಯ ಗೋಪಾಲ ಬಾವಿಹಾಳ (27) ಹತ್ಯೆಯಾದ ವ್ಯಕ್ತಿಯಾಗಿದ್ದು, ಮಾರುತಿ ಬಾವಿಹಾಳ (30) ತಮ್ಮನನ್ನೇ ಹತ್ಯೆಗೈದ ಆರೋಪಿ ಸಹೋದರ.

ನಿತ್ಯ ಮದ್ಯ ಸೇವಿಸಿ ಬಂದು ಪಿತ್ರಾರ್ಜಿತ ಆಸ್ತಿ ಅನುಭವಿಸಲು ನಿಮಗೆ ಬಿಡಲ್ಲ‌ ಎಂದು ಗೋಪಾಲ ಕಿರಿಕಿರಿ ಮಾಡುತ್ತಿದ್ದ ಹಾಗೂ ತನ್ನ ಪಾಲಿಗೆ ಬಂದಿದ್ದ ಟ್ರ್ಯಾಕ್ಟರ್ ಅನ್ನು ಗೋಪಾಲ ಪತ್ನಿಯ ಮನೆಯಲ್ಲಿ ಇರಿಸಿದ್ದ. ಹೀಗಾಗಿ, ತಮ್ಮನ ಕಿರಿಕಿರಿಗೆ ಬೇಸತ್ತು ಬೈಕಿನಲ್ಲಿ ಹೊರಟಿದ್ದ ಗೋಪಾಲನ ಮೇಲೆ ಟ್ರ್ಯಾಕ್ಟರ್ ಹರಿಸಿ ಮಾರುತಿ ಕೊಲೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿ 37

ಗೋಪಾಲನ ತಂದೆ ಅರ್ಜುನ್‌ ಬಾವಿಹಾಳ ಅವರಿಗೆ ಮೂವರು ಗಂಡು ಮಕ್ಕಳಿದ್ದು, ಕಳೆದ 15 ದಿನಗಳ ಹಿಂದಷ್ಟೇ ತಮಗೆ ಬಂದ ಜಮೀನು ಪಾಲು, ಹಣ ಪಡೆದು ಸಹೋದರರು ಬೇರೆ ಬೇರೆಯಾಗಿದ್ದರು. ಮೂವರೂ ಸಹೋದರರಿಗೂ ಒಂದೊಂದು ಟ್ರ್ಯಾಕ್ಟರ್ ಪಾಲಿಗೆ ಬಂದಿದ್ದವು. ಮೃತ ಗೋಪಾಲನಿಗೆ ಬಂದಿದ್ದ ಟ್ರ್ಯಾಕ್ಟರ್ ಅನ್ನು ಹೆಂಡತಿ ಮನೆಯಲ್ಲಿ ಇಟ್ಟಿದ್ದಕ್ಕೆ ಗಲಾಟೆ ಆಗಿತ್ತು. ನಾನು ದುಡಿದಿರುವುದನ್ನು ಹಾಳು ಮಾಡುತ್ತಿರುವೆ ಎಂದು ಆಗಾಗ್ಗೆ ಇಬ್ಬರು ಸಹೋದರ ನಡುವೆ ಜಗಳ ನಡೆಯುತ್ತಲೇ ಇತ್ತು.‌ ಗೋಪಾಲ ವಿಪರೀತ ಕುಡಿತದ ಚಟ ಹೊಂದಿದ್ದು, ಟ್ರ್ಯಾಕ್ಟರ್ ವಿಚಾರಕ್ಕೆ ಇಬ್ಬರು ಸಹೋದರರ ಮಧ್ಯೆ ಮತ್ತೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಗದಗ | ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಡಿ.24ಕ್ಕೆ ಬಂದ್‌ಗೆ ಕರೆ

ತಮ್ಮನನ್ನು ಕೊಲೆ‌ ಮಾಡಲೆಂದೇ ಹೊಂಚುಹಾಕಿ ಕುಳಿತಿದ್ದ ಮಾರುತಿ, ಯರಗಟ್ಟಿ ಹೊರವಲಯದ ಬೂದಿಗೊಪ್ಪ ರಸ್ತೆಯಲ್ಲಿ ಬೈಕ್ ಮೇಲೆ ಬರುತ್ತಿದ್ದ ಗೋಪಾಲನಿಗೆ ಟ್ರ್ಯಾಕ್ಟರ್​​ನಿಂದ ಡಿಕ್ಕಿ ಹೊಡೆದಿದ್ದಾನೆ. ಅವಘಡದಲ್ಲಿ ಜಮೀನಿನಲ್ಲಿ ಬಿದ್ದ ಗೋಪಾಲ ಮೇಲೆ ಮನಬಂದಂತೆ ಟ್ರ್ಯಾಕ್ಟರ್ ಹಾಯಿಸಿ ಹತ್ಯೆ ಮಾಡಿದ್ದಾನೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಟ್ರ್ಯಾಕ್ಟರ್​​ನಡಿ ಸಿಲುಕಿದ್ದ ಭಯಾನಕ ದೃಶ್ಯವನ್ನು ಸ್ಥಳೀಯರು ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ. ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...