ಬೆಳಗಾವಿ | ‘ಮರಾಠಿ ಮಾತನಾಡಲು ಬರಲ್ಲʼವೆಂದ ಬಸ್‌ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

Date:

‘ಮರಾಠಿ ಮಾತನಾಡಲು ಬರಲ್ಲʼವೆಂದು ಹೇಳಿದ್ದಕ್ಕೆ ಬೆಳಗಾವಿ ತಾಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ಬಸ್‌ ಕಂಡಕ್ಟರ್ ಮಹಾದೇವ ಹುಕ್ಕೇರಿ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಮಾರಿಹಾಳ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

- Advertisement -

ಅಪ್ರಾಪ್ತ ಸೇರಿದಂತೆ ನಾಲ್ವರನ್ನು ಈಗಾಗಲೇ ಬಂಧಿಸಲಾಗಿತ್ತು. ಈಗ ಬಾಳೇಕುಂದ್ರಿಯ ಮೋಹನ ಹಂಚಿನಾಳ ಎಂಬಾತನನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಹಲ್ಲೆಗೊಳಗಾಗಿದ್ದ ಬಸ್ ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲು

ಕರ್ನಾಟಕ–ಮಹಾರಾಷ್ಟ್ರ ಮಧ್ಯೆ ಭಾನುವಾರವೂ ಬಸ್‌ ಸಂಚಾರ ಸ್ಥಗಿತ ಮುಂದುವರೆದಿದ್ದು, ಪ್ರಯಾಣಿಕರು ಸಂಚಾರಕ್ಕೆ ಪರದಾಡಿದರು. ಬೆಳಗಾವಿಯಿಂದ ಕೊಲ್ಹಾಪುರ, ಪುಣೆ, ಸತಾರಾ, ಮುಂಬೈ ಮತ್ತಿತರ ಕಡೆ ತೆರಳುವವರು ಬಸ್‌ ಸಿಗದೆ ಹೈರಾಣಾದರು. ಎರಡೂ ರಾಜ್ಯಗಳ ಸಾರಿಗೆ ಸಂಸ್ಥೆಗಳ ಬಸ್‌ಗಳು ತಮ್ಮ ಗಡಿಯವರೆಗಷ್ಟೇ ಕಾರ್ಯಾಚರಣೆ ನಡೆಸಿದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...