ಚಾಲಕನ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಕಾರು ಉರುಳಿ ಬಿದ್ದಿದ್ದು, ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೆನಕನಹೊಳಿಯಲ್ಲಿ ನಡೆದಿದೆ.
ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮ ನಿವಾಸಿಯಾಗಿದ್ದಂತಹ ಕಿರಣ್ ನಾವಲಗಿ ಎಂಬಾತ ಕಾರು ಚಾಲನೆ ಮಾಡಿಕೊಂಡು ತೆರಳುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಕಾರು ಕೆರೆಗೆ ಬಿದ್ದಿದೆ.
ಈ ಸುದ್ದಿ ಓದಿದ್ದೀರಾ? ಧಾರವಾಡ | ನನ್ನ ಸೇವೆ ತೃಪ್ತಿದಾಯಕವಾಗಿದೆ: ಡಾ. ಎನ್.ಎಮ್.ಮಕಾಂದಾರ
ಕಾರಿನ ಒಳಗೆ ಸಿಲುಕಿಕೊಂಡಿದ್ದಂತ ಕಿರಣ್ ಹೊರ ಬರಲಾಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತ ಕಿರಣ್ ನಾವಲಗಿ(45) ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದವರು ಎಂದು ತಿಳಿದುಬಂದಿದೆ. ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿದ್ದು, ಕಾರು ಮೇಲೆತ್ತುವ ಕಾರ್ಯದಲ್ಲಿ ತೊಡಗಿದ್ದಾರೆ.