ಬೆಳಗಾವಿಯಲ್ಲಿ ಡಿಸೆಂಬರ್ 26, 27ರಂದು ನಡೆಯಲಿರುವ ಗಾಂಧಿ ಭಾರತ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಐತಿಹಾಸಿಕ ಕಾರ್ಯಕ್ರಮಕ್ಕೆ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ ನೀಡಿದರು.
ಬೆಳಗಾವಿ ನಗರದ ಸಿ ಪಿ ಎಡ್ ಮೈದಾನದಲ್ಲಿ ನಡೆಯಲಿರುವ ಗಾಂಧಿ ಭಾರತ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಸಿದ್ದತೆಗಳನ್ನು ಪರಿಶೀಲಿಸಿ ಮಾತನಾಡಿದರು.
ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಟಿಳಕವಾಡಿಯ ಕಾಂಗ್ರೆಸ್ ಅಧಿವೇಶನ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸುದ್ದಿ ಓದಿದ್ದೀರಾ? ಮಂಡ್ಯ | ಏಕೀಕರಣಗೊಂಡ ರೈತಸಂಘದ ಅಡಿಯಲ್ಲಿ ರೈತ ದಿನಾಚರಣೆ
ಬೆಳಗಾವಿಯಲ್ಲಿ ಎರಡು ದಿನಗಳ ಕಾಲ ನಡೆಯುವ ಗಾಂಧಿ ಭಾರತ ಕಾರ್ಯಕ್ರಮದ ಸರ್ವ ಸಿದ್ಧತೆಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಇದ್ದರು.