ಬೆಳಗಾವಿ | ಕಾಂಗ್ರೆಸ್‌ ಗ್ಯಾರಂಟಿ; ʼಫ್ರೀ ಕರೆಂಟ್, ನೋ ರೀಡಿಂಗ್’ ಸಂದೇಶ ಅಂಟಿಸಿದ ನಿವಾಸಿ ‌

Date:

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರಂಟಿಗಳ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿಯ ಹಲವೆಡೆ ಸ್ಥಳೀಯರು ಆಗ್ರಹಿಸಿದ್ದಾರೆ. ಬೆಳಗಾವಿಯ ಸದಾಶಿವನಗರದಲ್ಲಿ ಜನರು ಈ ತಿಂಗಳ ವಿದ್ಯುತ್ ಶುಲ್ಕ ಪಾವತಿ ಮಾಡದೇ ಇರಲು ನಿರ್ಧರಿಸಿದ್ದು, ಸಾಮಾಜಿಕ ಕಾರ್ಯಕರ್ತ ಪ್ರಸಾದ್ ಚೌಗುಲೆ ಎಂಬವರು ‘ಫ್ರೀ ಕರೆಂಟ್, ನೋ ರೀಡಿಂಗ್’ ‌ಎಂದು ಬರೆದು ವಿದ್ಯುತ್ ಮೀಟರ್‌ಗೆ ಅಂಟಿಸಿದ್ದಾರೆ.

“ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯುನಿಟ್ ಫ್ರೀ ವಿದ್ಯುತ್ ನೀಡುವುದಾಗಿ ಚುನಾವಣೆಗೂ ಮುನ್ನ ಭರವಸೆ ನೀಡಿತ್ತು. ಇದೀಗ ಕಾಂಗ್ರೆಸ್ ‌ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಹೀಗಾಗಿ ಹೆಸ್ಕಾಂ ಸಿಬ್ಬಂದಿ ರೀಡಿಂಗ್ ಪಡೆಯಬಾರದು. ನಾನು ವಿದ್ಯುತ್ ಪಾವತಿಸುವುದಿಲ್ಲ” ಎಂದು ಪ್ರಸಾದ್ ಚೌಗುಲೆ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 31ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ವಿದ್ಯುತ್ ಬಿಲ್ ಕಟ್ಟುವುದಿಲ್ಲ ಎಂದು ರಾಜ್ಯದ ಹಲವು ಕಡೆಗಳಲ್ಲಿ ಜನರು ಈಗಾಗಲೇ ಪಟ್ಟು ಹಿಡಿದಿದ್ದಾರೆ. ಈ ಮಧ್ಯೆ, ಬೆಳಗಾವಿಯ ಜನರು ಶುಲ್ಕ ಪಾವತಿಸದೇ ಇರಲು ಒಗ್ಗಟ್ಟಿನಿಂದ ಮುಂದಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಗ್ರಾಮ ವಾಸ್ತವ್ಯ

ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್‌ ಗ್ರಾಮ ವಾಸ್ತವ್ಯ...

ಕಲಬುರಗಿ | ಹೈ-ಕ ಭಾಗದ ಸಾಹಿತಿಗಳೆಂಬ ಹಣೆಪಟ್ಟಿ ಏಕೆ: ಡಾ. ಚಿದಾನಂದ ಸಾಲಿ

ದಲಿತ ಸಾಹಿತಿಗಳು ಅಂತ ಇರುವ ಹಾಗೆ, ಬ್ರಾಹ್ಮಣ ಕತೆಗಾರರು ಎಂಬ ಹೆಸರು...

ಮದ್ಯದಂಗಡಿ ಬೇಡ – ನೀರು, ಆರೋಗ್ಯ, ಆಹಾರ ಕೊಡಿ; ಸ್ಲಂ ಜನಾಂದೋಲನ ಒತ್ತಾಯ

ನಾಗರೀಕ ಸಮಾಜಕ್ಕೆ ಬೇಕಿರುವುದು ನೀರು, ನೈರ್ಮಲ್ಯ, ಆರೋಗ್ಯ ಮತ್ತು ಆಹಾರವೇ ಹೊರತು,...

ರಾಯಚೂರು | 9 ವರ್ಷಗಳಿಂದ ಅಂಗನವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ರೋಡಲ ಬಂಡಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ...