ಬೆಳಗಾವಿ | ಸಂವಿಧಾನ ಜಾಗೃತಿ ಜಾಥಾ; ಐಕ್ಯತಾ ಸಮಾವೇಶ

Date:

ಬೆಳಗಾವಿ ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,‌ ಮಹಾನಗರ ಪಾಲಿಕೆ, ಪೌರಾಡಳಿತ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಮತ್ತು ಸ್ತಬ್ಧಚಿತ್ರ ಮೆರವಣಿಗೆ ಹಾಗೂ ಐಕ್ಯತಾ ಸಮಾವೇಶವನ್ನು ಜನವರಿ 26ರಿಂದ ಫೆಬ್ರವರಿ 25ರವರೆಗೆ ಹಮ್ಮಿಕೊಂಡಿದೆ.

ಜನರಲ್ಲಿ ಸಂವಿಧಾನದ ಕುರಿತು ಜಾಗೃತಿ ಮೂಡಿಸುವ ಉದ್ಧೇಶದಿಂದ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಪ್ರಾರಂಭಿಸಿದ್ದು, ಆದರ್ಶ ಸಮಾಜದ ಲಕ್ಷಣಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಹಾಗೂ ಶಿಕ್ಷಣ ಪ್ರಬಲ ಮತ್ತು ಪರಿಣಾಮಕಾರಿ ಅಸ್ತ್ರ, ಸಮುದಾಯದ ಪ್ರಗತಿಯನ್ನು ಮಹಿಳೆಯರು ಸಾಧಿಸಿದ ಪ್ರಗತಿಯಿಂದ ಅಳೆಯಲಾಗುತ್ತದೆ. ನಾವು ಮೊದಲನೆಯದಾಗಿ ಕೊನೆಯದಾಗಿ ಭಾರತೀಯರೇ ಆಗಿದ್ದೇವೆಂಬ ಅಂಬೇಡ್ಕರ್‌ ಅವರ ಸಂದೇಶಗಳನ್ನು ಜನರಿಗೆ ಮುಟ್ಟಿಸುವುದು ಸಂವಿಧಾನ ಜಾಗೃತಿ ಜಾಥಾದ ಉದ್ಧೇಶವಾಗಿದೆ.

ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮಕ್ಕೆ ಭಾನುವಾರ ಸಂವಿಧಾನ ಜಾಗೃತಿ ಜಾಥಾ ಬಂದಿದ್ದು, ಊರಿನ ಗ್ರಾಮಸ್ಥರು, ಮಹಿಳೆಯರು ಮತ್ತು ಶಾಲಾ ವಿದ್ಯಾರ್ಥಿಗಳು ಸಂವಿಧಾನ ಜಾಗೃತಿ ಜಾಥಾ ಮತ್ತು ಅಂಬೇಡ್ಕರ್‌ ಅವರ ಸ್ತಬ್ಧ ಚಿತ್ರವನ್ನು ಬರಮಾಡಿಕೊಂಡರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಗದಗ | ವೈದ್ಯರ ನಿರ್ಲಕ್ಷ್ಯ ಆರೋಪ: ಅವಳಿ ಮಕ್ಕಳು, ಬಾಣಂತಿ ಸಾವು; ಕುಟುಂಬಸ್ಥರಿಂದ ಪ್ರತಿಭಟನೆ

ಶಾಲಾ ವಿದ್ಯಾರ್ಥಿಗಳು ಉತ್ತರ ಕರ್ನಾಟಕದ ಪ್ರಮುಖ ಜಾನಪದ ಕಲೆಯಾದ ಡೊಳ್ಳು ಕುಣಿತ ಹಾಗೂ ಕೋಲಾಟ ನೃತ್ಯದ ಮೂಲಕ ಗ್ರಾಮದಲ್ಲಿ ಮೆರವಣಿಗೆ ಮಾಡಿದರು. ಗ್ರಾಮದ ಶಾಲಾ ವಿದ್ಯಾರ್ಥಿಗಳು ಹಾಗೂ ಹಿರಿಯರು ಸಂವಿಧಾನ ಪೀಠಿಕೆಯನ್ನು ಓದುವುದರ ಮೂಲಕ ಗೌರವ ಸೂಚಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಹಿರಿಯರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ನೀಡುವಂತೆ ಆಗ್ರಹ

ಸ್ಲಂ ನಿವಾಸಿಗಳ ಹಕ್ಕುಪತ್ರಗಳಿಗಾಗಿ ಶಿಖರಖಾನೆ ಭಾಗ -2 ಹಾಗೂ ಭಾಗ 3ನ್ನು...

ಬೀದರ್‌ | ಜಿಲ್ಲಾದ್ಯಂತ ಕನ್ನಡದಲ್ಲಿ ನಾಮಫಲಕ ಅಳವಡಿಸಲು ಕಸಾಪ ಆಗ್ರಹ

ರಾಜ್ಯದಲ್ಲಿರುವ ಅಂಗಡಿ ಮುಂಗಟ್ಟುಗಳ ಮೇಲಿರುವ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡದಲ್ಲಿ ಮತ್ತು...

ಬೆಂಗಳೂರು | ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕ ಹಾಕಲು ಬುಧವಾರವೇ ಕೊನೆ ದಿನ

ಫೆ.28ರೊಳಗೆ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ವಾಣಿಜ್ಯ ಮಳಿಗೆಗಳ ಮುಂದೆ...

ಉಡುಪಿ | ರಷ್ಯಾ ಮೂಲದ ವ್ಯಕ್ತಿ ಸಾವು; ಇಂದ್ರಾಳಿಯಲ್ಲಿ ಅಂತ್ಯ ಸಂಸ್ಕಾರ

ಮುರುಡೇಶ್ವರದಲ್ಲಿ ಸಾವನ್ನಪ್ಪಿದ ವಿದೇಶಿ ಪ್ರಜೆಯ ಅಂತ್ಯಸಂಸ್ಕಾರವನ್ನು ಮುರುಡೇಶ್ವರದ ಇಂದ್ರಾಳಿಯ ಹಿಂದೂ ರುದ್ರಭೂಮಿಯಲ್ಲಿ...