ಬೆಳಗಾವಿ | ಜೂ.4ರಂದು ಮತ ಎಣಿಕೆ; ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸಕಲ ಸಿದ್ಧತೆ

Date:

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆಯು ಜೂನ್‌ 4ರಂದು ನಡೆಯಲಿದ್ದು, ಇದಕ್ಕಾಗಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳೊಂದಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಲೊಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ತಿಳಿಸಿದರು.

- Advertisement -

ಮತ ಎಣಿಕೆ ಕೇಂದ್ರವಾದ ಪಟ್ಟಣದ ಆರ್ ಡಿ ಕಾಲೇಜಿನಲ್ಲಿ ಸ್ಥಾಪಿಸಲಾದ ಮಾಧ್ಯಮ‌ ಕೇಂದ್ರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ಚಿಕ್ಕೋಡಿ ಲೋಕಸಭಾ ಮತಕ್ಷೇತ್ರಕ್ಕೆ ಮೇ 7ರಂದು ಜರುಗಿದ ಮತದಾನದ ವೇಳೆ ಚಲಾವಣೆಯಾದ ಒಟ್ಟು 13,85,688 ಮತಗಳು ಹಾಗೂ 4,722 ಅಂಚೆ ಮತಗಳ ಎಣಿಕೆ ನಡೆಯಲಿದೆ. ಜತೆಗೆ ಇಟಿಪಿಬಿಎಸ್ ಮತಗಳ ಎಣಿಕೆಯೂ ನಡೆಯಲಿದೆ” ಎಂದು ಹೇಳಿದರು.

“ಎಂಟು ಇವಿಎಂ ಮತ ಎಣಿಕೆ ಕೇಂದ್ರ ಸ್ಥಾಪಿಸಲಾಗಿರುತ್ತದೆ. ಪ್ರತಿ ಮತ ಎಣಿಕೆ ಕೇಂದ್ರದಲ್ಲಿ 12 ಟೇಬಲ್ ‌ವ್ಯವಸ್ಥೆ ಮಾಡಲಾಗಿದೆ. ಅಂಚೆ ಮತಗಳ ಎಣಿಕೆಗೆ 16 ಟೇಬಲ್ ಹಾಗೂ ಇಟಿಪಿಬಿಎಸ್ ಮತಗಳ ಎಣಿಕೆಗೆ 2 ಕೇಂದ್ರಗಳನ್ನು ಸ್ಥಾಪಿಸಲಾಗಿದೆ” ಎಂದರು.

“ಮತ ಎಣಿಕೆಗೆ ಹೆಚ್ಚುವರಿ ಸಿಬ್ಬಂದಿ ಸೇರಿದಂತೆ ಒಟ್ಟು 139 ಮಂದಿ ಮತ ಎಣಿಕೆ ಸೂಪರ್‌ವೈಸರ್, 158 ಮಂದಿ ಮತ ಎಣಿಕೆ ಸಹಾಯಕರು ಹಾಗೂ 139 ಮಂದಿ ಮೈಕ್ರೊ ಅಬ್ಸರ್‌ವರ್‌ಗಳನ್ನು ಹಾಗೂ 40 ಮಂದಿ ಇಟಿಪಿಬಿಎಸ್ ಮತಗಳ ಸ್ಕ್ಯಾನಿಂಗ್ ಪ್ರಕ್ರಿಯೆಗೆ ಸಿಬ್ಬಂದಿ ನಿಯೋಜಿಸಲಾಗಿದೆ” ಎಂದರು.

“ಜೂನ್‌ 4ರ ಬೆಳಿಗ್ಗೆ 8ಕ್ಕೆ ಅಂಚೆ ಮತಗಳ ಎಣಿಕೆ ನಡೆಯಲಿದ್ದು, 8.30ಕ್ಕೆ ವಿದ್ಯುನ್ಮಾನ ಮತಯಂತ್ರಗಳ ಮತ ಎಣಿಕೆ, ನಂತರ ಪ್ರತಿ ಮತಕ್ಷೇತ್ರದ 5 ವಿವಿ ಪ್ಯಾಟ್‌ಗಳನ್ನು ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಿ ಎಣಿಕ ಕಾರ್ಯ ಪ್ರಾರಂಬಿಸಲಾಗುವುದು” ಎಂದು ತಿಳಿಸಿದರು.

“ಮತ ಎಣಿಕೆ ಮುಗಿದ ನಂತರ ವಿದ್ಯುನ್ಮಾನ ಯಂತ್ರಗಳನ್ನು ಬೆಳಗಾವಿ ನಗರದ ಹಿಂಡಲಗಾದಲ್ಲಿನ ವೇರ್‌ಹೌಸ್‌ಗೆ ಕಳುಹಿಸಲಾಗುವುದು. ಮತ ಎಣಿಕ ಏಜೆಂಟರ್‌ಗಳು ಮೊಬೈಲ್‌ಗಳನ್ನು ಮತ ಎಣಿಕಾ ಕೇಂದ್ರದೊಳಗೆ ತರಲು ಅವಕಾಶವಿರುವುದಿಲ್ಲ” ಎಂದು ತಿಳಿಸಿದರು.

ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ಡಾ ಭೀಮಾಶಂಕರ ಗುಳೇದ‌ ಮಾತನಾಡಿ, “ಮತ ಎಣಿಕಾ ಕಾರ್ಯವು ಶಾಂತಿಯುತ ಹಾಗೂ ನ್ಯಾಯಸಮ್ಮತವಾಗಿ ಜರುಗಿಸಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಪೊಲೀಸ್‌ ಸಿಬ್ಬಂದಿ ನೀಯೋಜಿಸಲಾಗಿದೆ. ಜತೆಗೆ ಜೂನ್‌ 1ರಿಂದ ಮತ ಎಣಿಕೆ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶಕ್ಕೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ; ನಿಯಮ ಪಾಲನೆಗೆ ಸಹಾಯವಾಣಿ ಸ್ಥಾಪನೆ

“ಮತ ಎಣಿಕೆ ದಿನದಂದು ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದ್ದು, ನಿಪ್ಪಾಣಿ ಮಾರ್ಗದಿಂದ ಬರುವ ವಾಹನಗಳಿಗೆ ಐಟಿಐ ಕಾಲೇಜು‌ ಮೈದಾನದಲ್ಲಿ, ಯಕ್ಸಂಬಾ ಮಾರ್ಗದಿಂದ ಬರುವ ವಾಹನಗಳಿಗೆ ಭೀಮ‌ ನಗರದ ಹತ್ತಿರದ‌ ಮುನ್ಸಿಪಾಲಿಟಿ ಖಾಲಿ ಜಾಗದಲ್ಲಿ, ಅಂಕಲಿ‌ ಮಾರ್ಗದಿಂದ ಬರುವ ವಾಹನಗಳಿಗೆ ಪರಟಿ ನಾಗಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಹಾಗೂ ಮುಲ್ಲಾ ಪ್ಲಾಟ ಖಾಲಿ ಸ್ಥಳದಲ್ಲಿ, ಹುಕ್ಕೇರಿ ಮಾರ್ಗದಿಂದ ಬರುವ ವಾಹನಗಳಿಗೆ ಪದ್ಮಾ ಮಂಗಲ ಕಾರ್ಯಾಲಯದ ಹತ್ತಿರ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...