ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಮದಭಾವಿ ರಸ್ತೆ ಹೊಂದಿಕೊಂಡಿರುವ ಚೌಹಾಣ್ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿಗಳ ಶವ ಪತ್ತೆಯಾಗಿದೆ.
ನಾನಾ ಸಾಹೇಬ್ ಬಾಬು ಚೌವ್ಹಾಣ್ (58) ಜಯಶ್ರೀ ನಾನಾ ಸಾಹೇಬ್ ಚೌವ್ಹಾಣ್ (50) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಮನೆಯ ಸುತ್ತಲೂ ದುರ್ವಾಸನೆ ಬರುತ್ತಿದ್ದಂತೆ ಪಕ್ಕದ ಮನೆಯವರು ಗಮನಿಸಿ ಅಥಣಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಿಯರ ಮಾಹಿತಿಯ ಪ್ರಕಾರ ಜಮಖಂಡಿ, ಸಂಕೇಶ್ವರ, ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಮಗನ ಮೇಲಿನ ಕಳ್ಳತನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇವರ ಮಗ ದೀಲಿಪ್ ನಾನಾಸಾಹೇಬನನ್ನು ಅಕ್ಟೋಬರ್ 29ರಂದು ಬಂಧಿಸಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.