ಬೆಳಗಾವಿ | ವಿದ್ಯುತ್ ತಂತಿ ತಗುಲಿ ದಂಪತಿ ಸಾವು; ಸಂತ್ರಸ್ತ ಕುಟುಂಬಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸಾಂತ್ವನ

Date:

ಜಮೀನಿನಲ್ಲಿ ಕ್ರಿಮಿನಾಶಕ ಸಿಂಪಡಣೆ ವೇಳೆ ವಿದ್ಯುತ್ ತಂತಿ ತಗುಲಿ ದಂಪತಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಮದ ಮೃತ ದಂಪತಿ ಅಮಿತ್ ದೇಸಾಯಿ-ಲತಾ ಕುಟುಂಬಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭೇಟಿ ನೀಡಿ ಸಾಂತ್ವನ ಹೇಳಿದರು.

ತಾಲೂಕಿನ ಬಿಜಗರಣಿ ಗ್ರಾಮದಲ್ಲಿ ಅಮಿತ್‌ ದೇಸಾಯಿ-ಲತಾ ದೇಸಾಯಿ ಆಗಸ್ಟ್‌ 6ರ ಭಾನುವಾರ ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದರು. ಅಳಿಯ ಮತ್ತು ಮಗಳನ್ನು ಕಳೆದುಕೊಂಡು ಆಘಾತಕ್ಕಗೊಳಗಾಗಿರುವ ತಾಯಿ ಚಂದ್ರಮಾಲಾ ದೇಸಾಯಿ ಅವರನ್ನು ಲಕ್ಷ್ಮೀ ಹೆಬ್ಬಾಳ್ಕರ್‌ ಸಂತೈಸಿದರು.

ಇದೇ ವೇಳೆ‌, ʼಲಕ್ಷ್ಮೀತಾಯಿ ಫೌಂಡೇಷನ್ʼ ವತಿಯಿಂದ ಆರ್ಥಿಕ ಸಹಾಯ ನೀಡಿ, ಸರ್ಕಾರದಿಂದಲೂ ಪರಿಹಾರ ಬಿಡುಗಡೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಪಬ್ಜಿ ಗೇಮ್‌ನಲ್ಲಿ ಹಣ ಕಳೆದುಕೊಂಡ ಎಂಜಿನಿಯರಿಂಗ್ ವಿದ್ಯಾರ್ಥಿ; ಮನನೊಂದು ಆತ್ಮಹತ್ಯೆ

ಚಿಕ್ಕ ವಯಸ್ಸಿನಲ್ಲೇ ಪ್ರಾಣ ಕಳೆದುಕೊಂಡ ದಂಪತಿಗೆ ಅನನ್ಯ ಎಂಬ 2 ವರ್ಷದ ಹೆಣ್ಣು ಮಗು ಇದ್ದು, ಈಗ ಅನಾಥವಾಗಿದೆ. ಈ ಮಗುವನ್ನು ಕಂಡು ಮರುಗಿದ ಲಕ್ಷ್ಮೀ ಹೆಬ್ಬಾಳ್ಕರ್‌, “ಆ ಮಗುವಿನ ಮುಖ ನೋಡಿದರೆ ಕರುಳು ಕಿತ್ತು ಬಂದಂತಿದೆ. ವಿಧಿ ನಿಜಕ್ಕೂ ಕ್ರೂರಿ. ತಂದೆ ತಾಯಿಯನ್ನು ಕಳೆದುಕೊಂಡ ನೋವು ಯಾವ ಮಗುವಿಗೂ ಬಾರದಿರಲಿ” ಎಂದರು.

ಗ್ರಾಮದ ಹಿರಿಯರು, ತಹಶೀಲ್ದಾರ್, ಉಪ ವಿಭಾಗಾಧಿಕಾರಿ, ಹೆಸ್ಕಾಂ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿ, ಆರ್‌ಐ ಅಧಿಕಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ ಪ್ರಗತಿಪರ ಸಂಘಟನೆಗಳ ಒತ್ತಾಯ

ಸರ್ಕಾರ, ನಿರ್ಲಕ್ಷ್ಯ ಧೋರಣೆ ಬಿಟ್ಟು ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ...

ಕಲಬುರಗಿ | ಸಿಮೆಂಟ್‌ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು; 2 ತಿಂಗಳಲ್ಲಿ 4ನೇ ದುರಂತ

ಸಿಮೆಂಟ್‌ ಕಾರ್ಖಾನೆಯಲ್ಲಿ ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ,...

ಬೀದರ್‌ | ವಿದ್ಯುತ್‌ ಸ್ಪರ್ಶ: ಸ್ಥಳದಲ್ಲೇ ವ್ಯಕ್ತಿ ಸಾವು

ವಿದ್ಯುತ್‌ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ಲಾಡವಂತಿ...

ವಿಜಯಪುರ | ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆ ಅವ್ಯವಸ್ಥೆ ಸರಿಪಡಿಸುವಂತೆ ಡಿಎಸ್‌ಎಸ್‌ ಮನವಿ 

ವಿಜಯಪುರ ಜಿಲ್ಲೆಯ ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆಯ ಅವ್ಯವಸ್ಥೆಗೆ ಕಾರಣರಾಗಿರುವ ಅಧಿಕಾರಿಗಳ...