ಬೆಳಗಾವಿ | ಹಳ್ಳಿಗೆ ಬಂದ ಮೊಸಳೆ ಹಿಡಿದು ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ ಗ್ರಾಮಸ್ಥರು

Date:

ಆಹಾರ ಹುಡುಕುತ್ತ ನದಿ ನೀರಿನಿಂದ ಹೊರಗೆ ಬಂದು, ಹಳ್ಳಿ ಪ್ರವೇಶ ಮಾಡಿದ್ದ ಮೊಸಳೆಯನ್ನು ಬೆಳಗಾವಿ ಜಿಲ್ಲೆಯ ಗ್ರಾಮಸ್ಥರೇ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.

- Advertisement -

ಗೋಕಾಕ್​ ತಾಲೂಕಿನ ಉದಗಟ್ಟಿ ಎಂಬ ಗ್ರಾಮದಲ್ಲಿ ಬೃಹತ್​ ಗಾತ್ರದ ಮೊಸಳೆ ಸೆರೆಯಾಗಿದ್ದು, ಗ್ರಾಮಸ್ಥರು ಜೆಸಿಬಿ ತರಿಸಿ ಮೊಸಳೆಯನ್ನು ಸಾಗಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಮಳೆಯಿಲ್ಲದ ಕಾರಣ ಘಟಪ್ರಭಾ ನದಿಯಲ್ಲಿ ನೀರು ಕಡಿಮೆಯಾಗಿದೆ. ಹೀಗಾಗಿ ಇತ್ತೀಚೆಗೆ ನದಿ ತೀರದ ಊರ ಜನರಿಗೆ ಮೊಸಳೆ ಕಾಟ ಹೆಚ್ಚಾಗಿತ್ತು. ಮೊಸಳೆ ದಡಕ್ಕೆ ಬಂದು ಮಲಗುವುದು, ಊರಿಗೆ ಪ್ರವೇಶ ಮಾಡುವುದು, ಅಲ್ಲಿಯೇ ಇದ್ದ ಗದ್ದೆಗೆ ಬಂದು ಮಲಗುವುದು ಸಾಮಾನ್ಯವಾಗಿತ್ತು. ಹೀಗಾಗಿ ಸಮೀಪದ ಊರುಗಳ ಜನರು ಸದಾ ಭಯದಲ್ಲಿಯೇ ಇರುವಂತಾಗಿತ್ತು.

ಹಳ್ಳಿಗೆ ಪ್ರವೇಶಿಸಿದ ಮೊಸಳೆ
ಗದ್ದೆಯಲ್ಲಿ ಮಲಗಿರುವ ಮೊಸಳೆ

ಈ ಸುದ್ದಿ ಓದಿದ್ದೀರಾ? ಧಾರವಾಡ | ನೀರು ಪೂರೈಕೆ ಕಾಮಗಾರಿಗಳು ಸಮರ್ಪಕವಾಗಿ ಸಾಗಬೇಕು: ಸಚಿವ ಸಂತೋಷ್‌ ಲಾಡ್

ಶನಿವಾರ ರಾತ್ರಿಯೂ ಮೊಸಳೆ ಆಹಾರ ಅರಸಿ ಗದ್ದೆಗೆ ಬಂದು ಮಲಗಿತ್ತು. ಅದನ್ನು ನೋಡಿದ ಗ್ರಾಮಸ್ಥರು ಕೂಡಲೇ ತಾವೇ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ. ಬಳಿಕ ಅದನ್ನು ಚೀಲದಲ್ಲಿ ಬಿಗಿಯಾಗಿ ಕಟ್ಟಿ, ಜೆಸಿಬಿ ಯಂತ್ರದ ಸಹಾಯದಿಂದ ಮೊಸಳೆ ಸಾಗಿಸಿದ್ದಾರೆ. ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ವಿಷಯ ತಿಳಿಸಿ, ಮೊಸಳೆಯನ್ನು ಅವರ ಸುಪರ್ದಿಗೆ ವಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...