ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರನ್ನಾಗಿ ಅಪ್ಪಾಸಾಹೇಬ್ ಇವರನ್ನು ಆಯ್ಕೆ ಮಾಡಲಾಗಿದ್ದು, ಈ ಕುರಿತು ರೆಕ್ಕೆ ಪುಕ್ಕ ಕಟ್ಟುವುದು ಬೇಡ ಎಂದು ಶಾಸಕ ಲಕ್ಷ್ಮಣ ಸವದಿ ಮಾಧ್ಯಮದವರ ಪ್ರಶ್ನೆಗೆ ಉತ್ತರ ನೀಡಿದ್ದಾರೆ.
ಬೆಳಗಾವಿ ನಗರದಲ್ಲಿ ಶಾಸಕ ಲಕ್ಷ್ಮಣ ಸವದಿಯವರನ್ನು ಹೊರಗಿಟ್ಪು ಸಭೆ ನಡೆಸಿ ಅಪ್ಪಾಸಾಹೇಬ್ ಇವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು ಜಾರಕಿಹೊಳಿ ಸಹೋದರರ ಮೇಲುಗೈ ಎಂದು ಬಿಂಬಿಸಲಾಗಿತ್ತು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ, ಅಧ್ಯಕ್ಷ ಸ್ಥಾನದ ಆಯ್ಕೆ ಅವಿರೋಧವಾಗಿ ನಡೆದಿದೆ. ಮೇಲುಗೈ, ಕೆಳಗೈ ಅಂತ ಎನಿಲ್ಲ. ಎಲ್ಲರ ಜೊತೆಗೆ ಚರ್ಚೆ ಮಾಡಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಹಾವೇರಿ | ರಸ್ತೆ ಬದಿಯ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್‌ಗಳು ಪತ್ತೆ
“ಇಲ್ಲೇನೂ ಚುನಾವಣೆ ಆಗಿದೆಯಾ. ಚುನಾವಣೆ ಆಗಿಲ್ಲ ಅವಿರೋಧ ಆಗಿದೆ ಅಂದ್ರೆ ಮೇಲುಗೈ ಹೇಗೆ ಆಗುತ್ತದೆ ಅಧ್ಯಕ್ಷ ಸ್ಥಾನದ ವಿಚಾರವಾಗಿ ರೆಕ್ಕೆ ಪುಕ್ಕ ಕಟ್ಟುವುದು ಬೇಡ” ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.
ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಗೆ ಆಗಮಿಸಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಅಪ್ಪಾಸಾಹೇಬ್ ಅವರಿಗೆ ಶಾಸಕ ಲಕ್ಷ್ಮಣ ಸವದಿ ಅಭಿನಂದನೆ ಸಲ್ಲಿಸಿದ್ದಾರೆ.
