ಮನರೇಗಾ ಯೋಜನೆಯಡಿ ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಫೆಬ್ರವರಿ 13ರಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಾಮಾಜಿಕ ಹೊರಾಟಗಾರ ಶ್ರೀನಿವಾಸಗೌಡ ಪಾಟೀಲ್ ತಿಳಿಸಿದ್ದಾರೆ.
“ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುಧೆನೂರ, ಓಬಳಾಪೂರ ಗ್ರಾಮ ಪಂಚಾಯಿತಿಯಲ್ಲಿ ಮನರೇಗಾ ಯೋಜನೆಯಡಿ ಮಾರ್ಗಸೂಚಿ ಉಲ್ಲಂಘಿಸಿ, ಅನರ್ಹ ಪಲಾನುಭವಿ ಆಯ್ಕೆ ಮಾಡಿ ಸುಳ್ಳು ದಾಖಲೆ ನೀಡಿ ಸರ್ಕಾರದ ಹಣ, ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದರು.
ಈ ಕುರಿತು ಸಾಮಾಜಿಕ ಹೊರಾಟಗಾರ ಶ್ರೀನಿವಾಸಗೌಡ ಪಾಟಿಲ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, ಮನರೇಗಾ ಯೋಜನೆಯಡಿ ಅಕ್ರಮ ಎಸಗಿರುವ ಅಧಿಕಾರಿಗಳಿಂದ ₹78,07,219ನ್ನು ಬಡ್ಡಿ ಸಹಿತ ವಸೂಲಿ ಮಾಡಬೇಕೆಂದು 2023ರ ಜೂನ್ 14ರಂದು ಓಂಬಡ್ಸುಮನ್ ನ್ಯಾಯಾಲಯ ಆದೇಶ ಹೊರಡಿಸಿದೆ. ಆದರೆ ಈವರೆಗೆ ಭ್ರಷ್ಟ ಅಧಿಕಾರಿಗಳ ಮೇಲೆ ಯಾವುದೇ ಮೊಕದ್ಧಮ್ಮೆ ದಾಖಲಿಸಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ರಾಮನಗರ | ಕೇಂದ್ರದ ಧೋರಣೆ ಖಂಡಿಸಿ ಯುವ ಕಾಂಗ್ರೆಸ್‌ನಿಂದ ಪಂಜಿನ ಮೆರವಣಿಗೆ
“ಹಣ ಪಾವತಿಸಿದ ಬಗ್ಗೆ ಯಾವುದೇ ದಾಖಲೆ ಇರುವದಿಲ್ಲ. ಆದ್ಧರಿಂದ ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಒಟ್ಟು ₹28 ಕೋಟಿ ಮೆಲ್ಪಟ್ಟ ತೀರುವಳಿಗೆ ಕ್ರಮ ವಹಿಸಿರುವದಿಲ್ಲ. ಆದ್ದರಿಂದ ತಪಿಸ್ಥತ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಬೇಕು. ಅಲ್ಲಿಯವರೆಗೂ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.