ಬೆಳಗಾವಿ | 2ಎ ಮೀಸಲಾತಿಗಾಗಿ ಬೆಂಗಳೂರಿನಲ್ಲಿ ಧರಣಿ: ಬಸವ ಮೃತ್ಯುಂಜಯ ಸ್ವಾಮೀಜಿ

Date:

ಕಾಂಗ್ರೆಸ್ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರವಾಗಿ ಯಾವುದೇ ಕ್ರಮ ಕೈಗೊಳ್ಳದ ಕಾರಣ ಅಕ್ಟೋಬರ್ 18ರಂದು ಬೆಂಗಳೂರಿನಲ್ಲಿ ಧರಣಿ ನಡೆಸಲಿದ್ದೇವೆ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

- Advertisement -

ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, “ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮುಖ್ಯಮಂತ್ರಿ ಭೇಟಿಗಾಗಿ ದಿನಾಂಕ ನಿಗದಿಪಡಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ, ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಮೀಸಲಾತಿ ಹೋರಾಟ ಬಳಸಿಕೊಂಡು ಆಯ್ಕೆಯಾದ ನಮ್ಮ ಸಮುದಾಯದ ಕಾಂಗ್ರೆಸ್‌ನ ಶಾಸಕರು, ಈಗ ನಮ್ಮ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿ ಮುಂದೆ ಏಕೆ ಧ್ವನಿ ಎತ್ತುತ್ತಿಲ್ಲವೆಂದು ಗೊತ್ತಾಗುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ನಮ್ಮ ಬೇಡಿಕೆ ಈಡೇರಿಕೆಗಾಗಿ ಕಳೆದ ತಿಂಗಳು ವಕೀಲರ ಸಮಾವೇಶ ನಡೆಸಿ, ಸರ್ಕಾರಕ್ಕೆ ಪ್ರತಿಭಟನೆಯ ಎಚ್ಚರಿಕೆ ಕೊಟ್ಟಿದ್ದೆವು. ಆಗ ಸಿದ್ದರಾಮಯ್ಯ ಮಾತನಾಡಿ, ಅ.15ರಂದು ಸಮುದಾಯದೊಂದಿಗೆ ಸಭೆ ನಡೆಸಲು ದಿನಾಂಕ ನಿಗದಿಪಡಿಸುವುದಾಗಿ ತಿಳಿಸಿದ್ದರು. ಆದರೆ, ಮುಖ್ಯಮಂತ್ರಿ ಈಗ ನವದೆಹಲಿಗೆ ಹೋಗುತ್ತಿದ್ದಾರೆ. ಸಭೆಯ ಮುಂದಿನ ದಿನಾಂಕವನ್ನು ತಿಳಿಸಲಾಗುವುದೆಂದು ಕಳೆದ ವಾರವಷ್ಟೇ ನಮಗೆ ಮಾಹಿತಿ ಸಿಕ್ಕಿದೆ” ಎಂದು ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ನ.1ಂದು ಕರಾಳ ದಿನಾಚರಣೆಗೆ ಎಂಇಎಸ್ ನಿರ್ಣಯ; ಕನ್ನಡಪರ ಹೋರಾಟಗಾರರು ತೀವ್ರ ಹೋರಾಟದ ಎಚ್ಚರಿಕೆ

“ಅಕ್ಟೋಬರ್‌ 18ರಂದು ಬೆಂಗಳೂರಿನಲ್ಲಿ ಧರಣಿ ನಡೆಸಿದ ನಂತರವೂ, ಮುಖ್ಯಮಂತ್ರಿ ಭೇಟಿಗೆ ಸಮಯ ನಿಗದಿಯಾಗದಿದ್ದರೆ ವಿಧಾನಸೌಧಕ್ಕೆ ಹೋಗಿ ಅಸಮಾಧಾನ ಹೊರಹಾಕುತ್ತೇವೆ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...