ಬೆಳಗಾವಿ | ಆಸ್ತಿ ವಿವಾದದ ಕಲಹ : ಜೀವಾಪುರ ಗ್ರಾಮದಲ್ಲಿ ಜೋಡಿ ಕೊಲೆ!

Date:

ಆಸ್ತಿ ವಿಚಾರವಾಗಿ ಗುಂಪುಗಳ ಮಧ್ಯೆ ಉಂಟಾದ ಕಲಹ ವಿಕೋಪಕ್ಕೆ ತಿರುಗಿ ಇಬ್ಬರನ್ನು ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಜೀವಾಪುರ ಗ್ರಾಮದಲ್ಲಿ ನಡೆದಿದೆ.

- Advertisement -

ಘಟನೆಯಲ್ಲಿ ರಮೇಶ್ ಹಣಮಂತ ನಾಯ್ಕರ (29) ಹಾಗೂ ಬಸವ ಭೀಮಪ್ಪ ನಾಯ್ಕರ (60) ಮೃತಪಟ್ಟಿದ್ದಾರೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಎರಡು ಕಡೆಯವರ ನಡುವೆ ನಡೆದಿದ್ದ ಕಲಹ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಅಂತಿಮವಾಗಿ ಇಬ್ಬರ ಹತ್ಯೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

ಯುದ್ಧದ ನೆಪ, ಬೆಲೆ ಏರಿಕೆಯ ತಾಪ: ಅಸಲಿ ಕಾರಣಗಳೇನು?

ದೇಶವು ಚಿನ್ನ-ಬೆಳ್ಳಿಯಂತಹ ಲೋಹಗಳಿಗೆ ಆಮದನ್ನೇ ಹೆಚ್ಚಾಗಿ ನಂಬಿಕೊಂಡಿದೆ. ಒಂದೆಡೆ ಕಚ್ಚಾ ತೈಲ, ಇನ್ನೊಂದೆಡೆ ಬೆಲೆಬಾಳುವ ಲೋಹಗಳು- ಹೀಗೆ ಎರಡೂ ಕಡೆಯಿಂದ ಬೆಲೆ ಏರಿಕೆಯ ಒತ್ತಡ ಶುರುವಾಗಿದೆ. ಹಿಂದಿನ ರಷ್ಯಾ-ಉಕ್ರೇನ್ ಯುದ್ಧದ ಕಾಲಕ್ಕಿಂತ ಈಗಿನ...

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಡಿವೈಎಸ್ಪಿ ಮಡಿವಾಳರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದು, ಘಟನೆಯ ಸಂಪೂರ್ಣ ಹಿನ್ನೆಲೆ ಹಾಗೂ ಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.

ಒಂದೇ ಗ್ರಾಮದಲ್ಲಿ ಇಬ್ಬರ ಹತ್ಯೆ ನಡೆದಿರುವ ಘಟನೆ ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಜೀವಾಪುರ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ನಿಗಾ ವಹಿಸಲಾಗಿದೆ.

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ನಡೆದ ಈ ಜೋಡಿ ಹತ್ಯೆ ಪ್ರಕರಣ ಗ್ರಾಮದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪೊಲೀಸರ ತನಿಖೆಯಿಂದ ಘಟನೆಯ ಸಂಪೂರ್ಣ ಸತ್ಯಾಂಶ ಹೊರಬರಬೇಕಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಜೆಡಿಯು ಶಾಸಕ ಅನಂತ್ ಸಿಂಗ್ ಮಗಳ ಮದುವೆಯ ಅವಾಂತರ

ಜೆಡಿಯುನಿಂದ ಉಚ್ಚಾಟಿತ ಮೊಕಾಮಾ ಶಾಸಕ ಅನಂತ್ ಸಿಂಗ್ ಅವರ ಮಗಳು ಶಿವಾಂಗಿ...

ಜಾತಿ ಭೇದ ಬಿಟ್ಟು ಮಾನವೀಯತೆ, ಸಮಾನತೆ ಹಾದಿಯಲ್ಲಿ ಸಾಗಬೇಕೆಂಬ ಕನಕದಾಸರ ಸಂದೇಶ ಪ್ರಸ್ತುತ: ಸಿಎಂ ಡಿಕೆಶಿ

ಜಾತಿ, ಕುಲದ ಹೆಸರಿನಲ್ಲಿ ಭೇದಭಾವ ಮಾಡುವುದನ್ನು ಬಿಟ್ಟು ಮಾನವೀಯತೆ ಮತ್ತು ಸಮಾನತೆಯ...

ಬಾಗಲಕೋಟೆ | ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ

ಬಡವರು, ಮಧ್ಯಮ ವರ್ಗದ ಜನರ ಬದುಕಿನ ಮೇಲೆ ಬೆಲೆ ಏರಿಕೆಯ ಬರೆ...

ಬೆಳಗಾವಿ ಅಧಿವೇಶನಕ್ಕೆ ಪ್ರತಿಭಟನೆಗಳ ಕಾವು: ಅನುಮತಿ ಕೋರಿ 58 ಸಂಘಟನೆಗಳಿಂದ ಮನವಿ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಕರ್ನಾಟಕ ವಿಧಾನಮಂಡಲದ ಈ ಬಾರಿಯ ಚಳಿಗಾಲದ...