ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಹಳೆ ನ್ಯಾಯಾಲಯದ ಆವರಣದಲ್ಲಿರುವ ಬಾಂಡ್ ರೈಟರ್ ಅಂಗಡಿಗೆ ಬೆಂಕಿ ಹತ್ತಿಕೊಂಡು ಅಪಾರ ಪ್ರಮಾಣದ ಸಾಮಗ್ರಿ ದಾಖಲೆಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಖಾನಾಪೂರ ತಾಲೂಕು ಪಂಚಾಯಿತಿ ಒಡೆತನದ ಕಾಂಪ್ಲೆಕ್ಸ್ ಇದಾಗಿದ್ದು, ಶಾರ್ಟ್ ಸರ್ಕ್ಯೂಟನಿಂದ್ ಹೊತ್ತಿಕೊಂಡ ಬೆಂಕಿಗೆ ಕಂಪ್ಯೂಟರ್, ಸಾಮಗ್ರಿಗಳು, ದಾಖಲೆ ಪತ್ರಗಳು ಬೆಂಕಿಗೆ ಆಹುತಿಯಾಗಿದ್ದು, ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮವಾಗಿವೆ.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ‘ಹಸಿರು ನಾಳೆ ಮಲೆ ಮಹದೇಶ್ವರ ಬೆಟ್ಟ’ ನೂತನ ಯೋಜನೆಗೆ ತ್ರಿಪಕ್ಷೀಯ ಒಡಂಬಡಿಕೆ
ಬೆಂಕಿ ಹೊತ್ತಿಕೊಂಡ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.