ಬೆಳಗಾವಿ | ಕಾರು ಅಡ್ಡಗಟ್ಟಿ ಹಣ ದರೋಡೆ ಪ್ರಕರಣಕ್ಕೆ ತಿರುವು​: ದೂರುದಾರ ಸೇರಿ ನಾಲ್ವರು ವಶಕ್ಕೆ!

Date:

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಬಳಿ ಹೈವೇಯಲ್ಲಿ ನ.15ರಂದು ಇಬ್ಬರು ದುಷ್ಕರ್ಮಿಗಳು ತಮ್ಮ ಕಾರು ಅಡ್ಡಗಟ್ಟಿ, ಗನ್‌ ತೋರಿಸಿ 75 ಲಕ್ಷ ರೂ. ದೋಚಿದ್ದಾರೆ ಎಂದು ಸಂಕೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದ ಪ್ರಕರಣ ತಿರುವು ಪಡೆದುಕೊಂಡಿದೆ.

- Advertisement -

ದೂರುದಾರ ಸೇರಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸಂಬಂಧ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, “ಕೊಲ್ಲಾಪುರದಿಂದ ಬರುತ್ತಿದ್ದ ಕಾರನ್ನು ಹರಗಾಪುರ ಬಳಿ ಅಡ್ಡಗಟ್ಟಿ 75 ಲಕ್ಷ ರೂ. ದರೋಡೆ ಮಾಡಲಾಗಿದೆ ಎಂದು ಮಹಾರಾಷ್ಟ್ರದ ಸೂರಜ್ ಹೊನಮಾನೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದಾಗ ನೇರ್ಲಿ ಬಳಿ ಕಾರು ಪತ್ತೆಯಾಗಿತ್ತು. ಇನ್ನು 75 ಲಕ್ಷ ರೂ. ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಆದರೆ, ಕಾರಿನಲ್ಲಿ ಸಿಕ್ಕಿದ್ದು 1.01 ಕೋಟಿ ರೂ. ಹಣ. ಈ ಸಂಬಂಧ ದೂರು ನೀಡಿದ ಸೂರಜ್ ಅವರನ್ನು ಕೇಳಿದಾಗ, ವ್ಯಾಪಾರಿಯೊಬ್ಬರು ಕೊಟ್ಟಿದ್ದ ಹಣವನ್ನು ಎಣಿಸದೆ ತೆಗೆದುಕೊಂಡು ಬರುತ್ತಿದ್ದೆವು. ಹಾಗಾಗಿ, 75 ಲಕ್ಷ ರೂ. ಇರಬಹುದೆಂದು ಭಾವಿಸಿದ್ದೆವು ಎಂದು ಹೇಳಿಕೆ ಕೊಟ್ಟಿದ್ದರು. ಇದರಿಂದ ದೂರುದಾರರ ಮೇಲೆ ಸಂಶಯ ಬಂದಿತು. ಹಾಗಾಗಿ, ದೂರುದಾರ ಸೂರಜ್, ಕಾರು ಚಾಲಕ ಆರೀಫ್ ಶೇಖ್, ಅಜಯ ಸರಗಾರ ಸೇರಿ ಮೂವರನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದೇವೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಬೆಳಗಾವಿ | ಮನೆಯ ಮುಂಭಾಗದಲ್ಲಿ ಮಲಗಿದ್ದ ವ್ಯಕ್ತಿಯ ಕತ್ತು ಕೊಯ್ದು ಕೊಲೆ

“ಮಹಾರಾಷ್ಟ್ರದ ಸಾಂಗ್ಲಿಯ ಭರತ್‌ ಮಾರಗುಡೆ ಎಂಬ ವ್ಯಾಪಾರಿ ಕೇರಳದಲ್ಲಿ ಹಳೆ ಚಿನ್ನದ ಮಾರಾಟ ಮಾಡುತ್ತಾರೆ. ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ಹಳೇ ಚಿನ್ನ ಕಳುಹಿಸಿ, ಇಲ್ಲಿಂದ ಕೇರಳಕ್ಕೆ ಹಣ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ಪ್ರಕರಣದಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿರುವ ಸಾಧ್ಯತೆ ಇದೆ. ಆದ್ದರಿಂದ ಕೇರಳ, ಮಹಾರಾಷ್ಟ್ರ ಮತ್ತು ಸ್ಥಳೀಯವಾಗಿಯೂ ಮೂರು ತಂಡಗಳನ್ನು ರಚಿಸಲಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳುತ್ತಿದ್ದೇವೆ” ಎಂದು ಡಾ. ಭೀಮಾಶಂಕರ ಗುಳೇದ ವಿವರಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...