ಬೆಳಗಾವಿ | ಭಾರೀ ಮಳೆಗೆ ಬೆಳೆಹಾನಿ; ಶೀಘ್ರ ಪರಿಹಾರಕ್ಕೆ ರೈತಸಂಘ ಆಗ್ರಹ

Date:

ಪ್ರವಾಹದಿಂದ ಉಂಟಾಗಿರುವ ಬೆಳೆಹಾನಿಗೆ ಶೀಘ್ರವೇ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ರೈತರು ಬೆಳಗಾವಿ ಜಿಲ್ಲೆಯ ಗೋಕಾಕ್‌ ತಾಲೂಕಿನ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಗೋಕಾಕ್ ಮತ್ತು ಮೂಡಲಗಿ ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಗೋಕಾಕ ನಗರದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ಬಳಿಕ “ಈ ವರ್ಷದ ಪ್ರವಾಹದಿಂದ ಬೆಳೆ ನಾಶವಾಗಿದೆ. ಇದರಿಂದ ರೈತರ ಸ್ಥಿತಿ ಅಂತಂತ್ರವಾಗಿದ್ದು, ಸಾಲದ ಸುಳಿಯಲ್ಲಿ ಸಿಲುಕುವಂತಾಗಿದೆ. ಹಾಗಾಗಿ ಆದಷ್ಟು ಬೇಗ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು. ‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...
ರೈತ ಸಂಘ ಗೋಕಾಕ್

“ಜಿಲ್ಲೆಯಲ್ಲಿ ಪ್ರವಾಹದಿಂದ ಸೋಯಾಬಿನ್, ಜೋಳ, ಕಬ್ಬು, ಹತ್ತಿ ಮುಂತಾದ ಬೆಳೆಗಳು ನಾಶವಾಗಿದ್ದು, ರೈತರಿಗೆ ಸಾಕಷ್ಟು ನಷ್ಟವಾಗಿದೆ. ಆದಷ್ಟು ಬೇಗನೆ ಬೆಳೆಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು” ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ರೈತ ಮುಖಂಡ ಶಿವಪುತ್ರಪ್ಪ ಜಕಬಾಳ್ ಮಾತನಾಡಿ, “ರಾಜ್ಯದ ಅನೇಕ ಭಾಗಗಳಲ್ಲಿ ಪ್ರವಾಹದಿಂದ ಸಾಕಷ್ಟು ಬೆಳೆಗಳು ನಾಶವಾಗಿ ರೈತರು ಸಂಕಷ್ಟದಲ್ಲಿದ್ದಾರೆ. ರೈತರು ಬೆಳೆದ ಕಬ್ಬು, ಜೋಳ, ಹತ್ತಿ, ಸೋಯಾಬೀನ್ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ. ಈವರೆಗೂ ಸರಿಯಾದ ಪರಿಹಾರ ಸಿಕ್ಕಿಲ್ಲ. ಆದಷ್ಟು ಬೇಗನೆ ಅಧಿಕಾರಿಗಳು ಬೆಳೆಸಮೀಕ್ಷೆ ಮಾಡಿ ರೈತರಿಗೆ ಪರಿಹಾರ ನೀಡಬೇಕು. ಅಲ್ಲದೆ ಕೇಂದ್ರ ಸರ್ಕಾರ ಹಾಗೂ ರೈತ ಹೋರಾಟಗಾರರ ಜೊತೆ ಮಾಡಿಕೊಂಡ ಒಡಂಬಡಿಕೆಯನ್ನು ಅನುಷ್ಠಾನಕ್ಕೆ ತರಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಹದಗೆಟ್ಟಿರುವ ರಸ್ತೆಯ ದುರಸ್ತಿಗೆ ಸ್ಥಳೀಯರ ಆಗ್ರಹ.

ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಶಿವನಗೌಡ ಪಾಟಿಲ್, ಜಿಲ್ಲಾ ಉಪಾಧ್ಯಕ್ಷ ಬಾಳಪ್ಪ ಪಾಟಿಲ್, ಗೋಕಾಕ ತಾಲೂಕು ಅಧ್ಯಕ್ಷರಾದ ಪರಸಪ್ಪ ಸಣ್ಣಪಾಣಿ, ಯಮನಪ್ಪ ಚೂಂಚನೂರ, ಶಂಕರ ಹುಗ್ಗಿ ಮತ್ತು ರೈತ ಸಂಘಟನೆಯ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...