ಬೆಳಗಾವಿ | ಸಾಲ ಮರಳಿಸಿಲ್ಲವೆಂದು ಪತ್ನಿ-ಪುತ್ರನಿಗೆ ಗೃಹಬಂಧನ; ರೈತ ಆತ್ಮಹತ್ಯೆ

Date:

ಕೃಷಿಗಾಗಿ ಸಾಲ ಮಾಡಿದ್ದ ರೈತ, ಬರದಿಂದಾಗಿ ನಷ್ಟಕ್ಕೆ ಸಿಲುಕಿ ಸಾಲ ಮರುಪಾವತಿ ಮಾಡಿರಲಿಲ್ಲ. ಹೀಗಾಗಿ, ಸಾಲದಾತ ಮಹಿಳೆ ರೈತನ ಪತ್ನಿ ಮತ್ತು ಪುತ್ರನನ್ನು ಗೃಹಬಂಧನದಲ್ಲಿಟ್ಟಿದ್ದು, ಮನನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರದಲ್ಲಿ ನಡೆದಿದೆ.

- Advertisement -

ಇಬ್ಬರು ಸಚಿವರಿರುವ – ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ – ಜಿಲ್ಲೆಯಲ್ಲಿಯೇ ಸಾಲದಾತರು ರೈತನ ಕುಟುಂಬದ ಮೇಲೆ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ. ದೌರ್ಜನ್ಯದಿಂದ ಮನನೊಂದ, ಸಾಲ ಮಾಡಿದ್ದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇಸ್ಲಾಂಪುರದ ರೈತ ರಾಜು ಖೋತಗಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅವರು ಅದೇ ಗ್ರಾಮದ ಸಿದ್ದವ್ವ ಬಯ್ಯನವರ ಎಂಬ ಮಹಿಳೆಯ ಬಳಿ 10% ಬಡ್ಡಿದರದಲ್ಲಿ 1.5 ಲಕ್ಷ ಸಾಲ ಮಾಡಿದ್ದರು. ಸಾಲ ಮರುಪಾವತಿಸುವಂತೆ ಪದೇ-ಪದೇ ಒತ್ತಡ ಹಾಕಿದ್ದರು. ಒಂದೆರಡು ತಿಂಗಳು ಸಮಯ ಕೇಳಿದರೂ ಒಬ್ಬದ ಸಾಲದಾತೆ, ಸಾಲ ವಾಪಾಸ್ ಕೊಡುವವರೆಗೂ ಪುತ್ರ ಬಸವರಾಜ್‌ನನ್ನು ತನ್ನ ಮನೆಯಲ್ಲಿ ಬಿಟ್ಟು ಹೋಗುವಂತೆ ತಾಕೀತು ಮಾಡಿದ್ದರು. ಮಗನನ್ನು ಕರೆದುಕೊಂಡ ಬರಲು ಹೋದ ರಾಜು ಪತ್ನಿ ದುರ್ಗವ್ವ ಅವರನ್ನೂ ಗೃಹ ಬಂಧನದಲ್ಲಿಡಲಾಗಿತ್ತು.

ಸಾಲದಾತೆ ರಾಜು ಅವರ ಪುತ್ರ ಮತ್ತು ಪತ್ನಿಗೆ ನೀರು-ಆಹಾರವನ್ನೂ ಕೊಡದೆ, ಹಸಿವಿನಲ್ಲಿ ಇರಿಸಿದ್ದರು ಎಂದು ಹೇಳಲಾಗಿದೆ. ಇದರಿಂದ ಮನವೊಂದ ರೈತ ರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಲದಾತೆ ಸಿದ್ದವ್ವ ಅವರ ದೌರ್ಜನ್ಯದ ವಿರುದ್ಧ ದೂರು ದಾಖಲಿಸಿಕೊಳ್ಳಲು ಪೊಲೀಸರು ನಿರಾಕರಿಸಿದ್ದರು ಎಂಬ ಆರೋಪವೂ ಇದೆ. ರೈತ ಆತ್ಮಹತ್ಯೆ ಮಾಡಿಕೊಂಡ ಬಳಿಕ, ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....