ಬೆಳಗಾವಿ | ಅಕ್ರಮ ಚಟುವಟಿಕೆ ತಾಣವಾದ ಇಂದಿರಾ ಕ್ಯಾಂಟಿನ್; ಅಧಿಕಾರಿಗಳ ನಿರ್ಲಕ್ಷ್ಯ

Date:

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟಿನ್, ಪಟ್ಟಣ ಪ್ರದೇಶಗಳಿಗೆ ದುಡಿಯಲು ಬರುವ ಕೂಲಿ ಕಾರ್ಮಿಕರು, ರೈತರು, ವಿದ್ಯಾರ್ಥಿಗಳು ಹಾಗೂ ನಿರ್ಗತಿಕರು ಯಾರೂ ಕೂಡಾ ಹಸಿವಿನಿಂದ ಕಂಗಾಲಾಗಬಾರದೆಂಬ ಉದ್ದೇಶದಿಂದ 2017ರಲ್ಲಿ ಜಾರಿಗೆ ತಂದ ಜನಪರ ಯೋಜನೆ. ‌

- Advertisement -

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗದೆ ಅರ್ಧಕ್ಕೆ ನಿಂತಿದ್ದು, ಸದ್ಯ ಅಕ್ರಮ ಚಟುವಟಿಕೆಗಳ ತಾಣವಾಗಿದೆ. ಜತೆಗೆ ಇಂದಿರಾ ಕ್ಯಾಂಟಿನ್ ಸ್ಥಳವನ್ನು ಜನರು ಶೌಚಕ್ಕೆ ಬಳಸಿಕೊಳ್ಳುತ್ತಿರುವುದು ಅಥಣಿ ಪಟ್ಟಣದ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಪಷ್ಟ ನಿದರ್ಶನವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಈ ಕುರಿತು ಸ್ಥಳೀಯ ಉಮರ್ ಸೈಯ್ಯದ್ ಮಾತನಾಡಿ, “ಸಿದ್ದರಾಮಯ್ಯನವರ ಕನಸು ಇಂದಿರಾ ಕ್ಯಾಂಟಿನ್ ಯೋಜನೆಯನ್ನು ಶಾಸಕ ಲಕ್ಷ್ಮಣ್ ಸವದಿಯವರು ಅಥಣಿ ಪಟ್ಟಣಕ್ಕೆ ತರುವಲ್ಲಿ ಯಶಸ್ವಿಯಾದರೂ ಕೂಡಾ ಇಲ್ಲಿನ ಅಧಿಕಾರಿಗಳು ಜನಸಂದಣಿಯಿಲ್ಲದ ಜಾಗದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಾಣ ಮಾಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಬಸವೇಶ್ವರ ವೃತ್ತ, ಅನಂತಪುರ ವೃತ್ತ ಅಥವಾ ಅಂಬೇಡ್ಕರ್ ವೃತ್ತ ಪ್ರದೇಶದಲ್ಲಿ ನಿರ್ಮಾಣ ಮಾಡಬೇಕಿತ್ತು. ಇದರಿಂದ ಜನರಿಗೆ ಅನುಕೂಲವಾಗುತ್ತಿತ್ತು. ಆದರೆ ಇಲ್ಲಿ ಜನ ಈ ಸ್ಥಳವನ್ನು ಶೌಚಕ್ಕೆ ಬಳಸಿಕೊಳ್ಳುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ಇಂದಿರಾ ಕ್ಯಾಂಟಿನ್‌ 1

ಸಾಮಜಿಕ ಹೋರಾಟಗಾರ ಶಿವಾನಂದ ಸೌಧಾಗರ ಈ ದಿನ.ಕಾಮ್ ಜೊತೆ ಮಾತನಾಡಿ, “ಅಥಣಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ಸುಮಾರು ಶೇ.60ರಷ್ಟು ನಿರ್ಮಾಣವಾಗಿದೆ. ಆದರೆ ಪೂರ್ಣ ಪ್ರಮಾಣದಲ್ಲಿ ಪ್ರಾರಂಭವಾಗಿಲ್ಲ. ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ಆಯುವ ಕಾರ್ಮಿಕರು, ಕೂಲಿ ಕಾರ್ಮಿಕರಿಗೆ ಇಂದಿರಾ ಕ್ಯಾಂಟಿನ್‌ನಲ್ಲಿ ಊಟ ಉಪಹಾರ ಸಿಗುತ್ತದೆ. ಆದರೆ ಅಥಣಿ ಪಟ್ಟಣದಲ್ಲಿನ ಇಂದಿರಾ ಕ್ಯಾಂಟಿನ್ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗದೆ ಇಂದು ಅಕ್ರಮ ಚಟುವಟಿಕೆಗಳ ತಾಣವಾಗಿದೆ. ಆದಷ್ಟು ಸಾರ್ವಜನಿಕ ಪ್ರದೇಶದಲ್ಲಿ ನಿರ್ಮಾಣ ಮಾಡಲಿ” ಎಂದು ಹೇಳಿದ್ದಾರೆ.

“ಅಥಣಿ ಪಟ್ಟಣದಲ್ಲಿ ಸರ್ಕಾರ ಇಂದಿರಾ ಕ್ಯಾಂಟಿನ್ ನಿರ್ಮಾಣ ಮಾಡಿದೆ. ಆದರೆ ಇನ್ನೂ ಪ್ರಾರಂಭವಾಗಿಲ್ಲ. ಇಂದು ಇಲ್ಲಿ ಜನ ಶೌಚಕ್ಕೆ ಬರುತ್ತಿದ್ದಾರೆ ಹಾಗೂ ಅಕ್ರಮ ಚಟುವಟಿಕೆಗಳ ತಾಣವಾಗಿದ್ದು ಸ್ಥಳೀಯ ಅಧಿಕಾರಿಗಳು ಆದಷ್ಟು ಬೇಗನೆ ಈ ಸಮಸ್ಯೆ ಪರಿಹರಿಸಬೇಕು” ಎಂದು ದಲಿತ ಸಂಘಟನೆಯ ತಾಲೂಕು ಸಂಚಾಲಕ ಪ್ರಕಾಶ್ ಕಾಂಬ್ಳೆ ಆಗ್ರಹಿಸಿದ್ದಾರೆ.

ಈ ಕುರಿತು ಅಥಣಿ ಪಟ್ಟಣದ ಪುರಸಭೆಯ ಅಧಿಕಾರಿಗಳನ್ನು ಈ ದಿ.ಕಾಮ್‌ ಸಂಪರ್ಕಿಸಿದಾಗ, “ಇಂದಿರಾ ಕ್ಯಾಂಟಿನ್ ನಿರ್ಮಾಣ ಇನ್ನೂ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ. ರಾಜ್ಯಮಟ್ಟದ ಟೆಂಡರ್‌ನಲ್ಲಿದೆ” ಎಂದಷ್ಟೇ ತಿಳಿಸಿದ್ದಾರೆ. ಇಂದಿರಾ ಕ್ಯಾಂಟಿನ್ ಸುತ್ತಲೂ ಸ್ವಚ್ಛತೆ ಇಲ್ಲದಿರುವ ಕುರಿತು ಪ್ರಶ್ನಿಸಿದಾಗ ಸರಿಯಾಗಿ ಪ್ರತಿಕ್ರಿಯೆ ನೀಡಿರುವುದಿಲ್ಲ.

“ನಿತ್ಯವೂ ಅಥಣಿ ಪಟ್ಟಣಕ್ಕೆ ಗ್ರಾಮೀಣ ಭಾಗದಿಂದ ಬರುವ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟಿನ್ ಸೌಲಭ್ಯ ಸಿಗದಿರುವುದು ಇಲ್ಲಿನ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು, 6 ತಿಂಗಳಿನಿಂದ ಅರ್ಧಕ್ಕೆ ನಿಂತಿರುವ ಇಂದಿರಾ ಕ್ಯಾಂಟಿನ್ ಆದಷ್ಟು ಬೇಗ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...