ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಹೊರವಲಯದ ಸೀತಾರಾಮ್ ಕ್ರಾಸ್‌ನಲ್ಲಿ ಬುಧವಾರ ರಾತ್ರಿ ಕೂಲಿ ಆಳುಗಳಿದ್ದ ಜೀಪ್ ಮರಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 20 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.
ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಕೆಂಚಪ್ಪ ಈರಣ್ಣವರ(50) ಸ್ಥಳದಲ್ಲೇ ಮೃತಪಟ್ಟವರು. ಬಸಪ್ಪ(16) ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದು, ಮೂವರ ಸ್ಥತಿ ಚಿಂತಾಜನವಾಗಿದೆ. ಗಾಯಾಳುಗಳನ್ನು ಸವದತ್ತಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಯುವತಿಗೆ ಉದ್ಯೋಗ ಕೊಡಿಸಲು ಹೊರಟಿದ್ದ ಯುವಕನ ಮೇಲೆ ಹಲ್ಲೆ
ಸವದತ್ತಿ ಪೋಲಿಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶಿಲನೆ ನಡೆಸಿದ್ದಾರೆ.