ಬೆಳಗಾವಿ | ಕರ್ನಾಟಕಕ್ಕೆ ಹರಿದುಬರುತ್ತಿದ್ದ ನೀರು ತಡೆದ ಮಹಾರಾಷ್ಟ್ರ; ಬ್ಯಾರೇಜ್‌ ಸುತ್ತ ಪೊಲೀಸ್‌ ನಿಯೋಜನೆ

Date:

Advertisements

ಮಹಾರಾಷ್ಟ್ರದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಯಿಂದಾಗಿ ತುಂಬಿರುವ ರಾಜಾಪುರ ಬ್ಯಾರೇಜ್‌ನಿಂದ ಕರ್ನಾಟಕಕ್ಕೆ ನೈಸರ್ಗಿಕವಾಗಿ ಹರಿದುಬರುತ್ತಿದ್ದ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆಹಿಡಿದಿರುವುದಕ್ಕೆ ಬೆಳಗಾವಿ ಗಡಿಯಲ್ಲಿ ಆಕ್ರೋಶ ವ್ಯಕ್ತವಾಗಿದೆ.

ರಾಜಾಪುರ ಬ್ಯಾರೇಜ್‌ ತುಂಬಿದ್ದರಿಂದ 2,500 ಕ್ಯೂಸೆಕ್‌ ಹೆಚ್ಚುವರಿ ನೀರು ಕಳೆದೆರಡು ದಿನಗಳಿಂದ ಕೃಷ್ಣಾನದಿಗೆ ಹರಿದುಬರುತ್ತಿತ್ತು. ಆದರೆ, ಭಾನುವಾರ ಈ ಬ್ಯಾರೇಜ್‌ಗೆ ಗೇಟ್ ಅಳವಡಿಸಿಕೊಳ್ಳುವ ಮೂಲಕ ರಾಜ್ಯಕ್ಕೆ ಹರಿದುಬರುತ್ತಿದ್ದ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆದಿದೆ. ಆದರೆ, ಕರ್ನಾಟಕಕ್ಕೆ ಬರುತ್ತಿದ್ದ ನೀರನ್ನು ಏಕೆ ತಡೆಹಿಡಿದಿದೆ ಎಂಬುದರ ಕುರಿತು ಅಲ್ಲಿನ ಸರ್ಕಾರ ಸ್ಪಷ್ಟಪಡಿಸಿಲ್ಲ.

ನೀರಾವರಿ ಇಲಾಖೆ, ಪೊಲೀಸ್ ಇಲಾಖೆಯ ತಲಾ ಇಬ್ಬರು ಸಿಬ್ಬಂದಿಯನ್ನು ಅಲ್ಲಿ ನಿಯೋಜಿಸಿದ ಮಹಾರಾಷ್ಟ್ರ ಸರ್ಕಾರ, ಕರ್ನಾಟಕಕ್ಕೆ ನೀರು ಹರಿಯದಂತೆ ನಿಗಾ ವಹಿಸಿದೆ.

Advertisements

ಕುಡಿಯುವ ನೀರಿನ ಹಾಹಾಕಾರದಿಂದ ತತ್ತರಿಸಿದ್ದ ಕೃಷ್ಣಾ ನದಿಪಾತ್ರದ ಜನರಿಗೆ ಮಹಾರಾಷ್ಟ್ರದ ನೀರಿನಿಂದ ಅನುಕೂಲವಾಗಿತ್ತು. ಈಗ ನೀರು ಬಾರದಂತೆ ತಡೆದ ಕಾರಣ, ಕೃಷ್ಣಾ ನದಿಯಲ್ಲಿ ನೀರು ಕಡಿಮೆಯಾಗುವ ಸಾಧ್ಯತೆ ಇದೆ. ನೀರಿಗಾಗಿ ಗಡಿಭಾಗದ ಜನ ಪರಿತಪಿಸುವಂತಾಗಿದೆ.

ಜಲತಂಟೆ ಮುಂದುವರಿಸಿದೆ: “ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ ಕರ್ನಾಟಕಕ್ಕೆ ಹರಿದು ಬರುತ್ತಿದ್ದ ಹೆಚ್ಚುವರಿ ನೀರಿಗೆ ತಡೆಯೊಡ್ಡಿದ ಅಲ್ಲಿನ ಸರ್ಕಾರಕ್ಕೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಬೇಕು” ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿಯೋಗ ಬಿಎಂಟಿಸಿಗೆ ಭೇಟಿ

“ರಾಜಾಪುರ ಬ್ಯಾರೇಜ್‌ನ ಎಲ್ಲ ಗೇಟ್‌ಗಳನ್ನು ಮಹಾರಾಷ್ಟ್ರ ಸರ್ಕಾರ ಮುಚ್ಚಿದೆ. ಬ್ಯಾರೇಜ್‌ ತುಂಬಿದ ನಂತರ ಮಳೆಗಾಲದಲ್ಲಿ ಏಕಕಾಲಕ್ಕೆ ಹೆಚ್ಚಿನ ನೀರು ಬಿಟ್ಟು, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದರೆ ಅದಕ್ಕೆ ಮಹಾರಾಷ್ಟ್ರವೇ ನೇರಹೊಣೆ. ಈ ವಿಷಯವನ್ನು ಮಹಾರಾಷ್ಟ್ರ ಸರ್ಕಾರದ ಗಮನಕ್ಕೆ ತರಬೇಕು” ಎಂದು ಆಗ್ರಹಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಬೆಳಗಾವಿ : ಬಸ್ ಲಾರಿ ಡಿಕ್ಕಿ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಹತ್ತಿರ ಭಾನುವಾರ ಬೆಳಿಗ್ಗೆ...

Download Eedina App Android / iOS

X