ಬೆಳಗಾವಿ | ಮಳೆಗೆ ಸಿಲುಕಿ ಹಾನಿಗೊಳಗಾದ ಮೆಕ್ಕೆಜೋಳ; ಪರಿಹಾರದ ನಿರೀಕ್ಷೆಯಲ್ಲಿ ರೈತರು

Date:

Advertisements

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಮತ್ತು ಮುಗಳಿಹಾಳ ಗ್ರಾಮದ ರೈತರು ಬೆಳೆದ ಮೆಕ್ಕೆಜೋಳವು ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ.

ಐದಾರು ತಿಂಗಳಿನಿಂದ ಬಿತ್ತಿ ಗೊಬ್ಬರ ಹಾಕಿ ನೀರು ಹಾಯಿಸಿ ಮೆಕ್ಕೆಜೋಳ ಬೆಳೆದಿದ್ದು, ಸದ್ಯ ಗೋವಿನಜೋಳದ ತೆನೆಯನ್ನು ಮುರಿದು ರಾಶಿ ಮಾಡಿ ಮಾರುಕಟ್ಟೆಗೆ ಸಾಗಿಸಬೇಕು ಎನ್ನುವ ಸಂದರ್ಭದಲ್ಲಿಯೇ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಗೋವಿನ ಜೋಳದ ತೆನೆಗಳು ಮಳೆನೀರಿನ ಪಾಲಾಗಿವೆ. ಲಕ್ಷಾಂತರ ರೂಪಾಯಿಗಳ ಗೋವಿನಜೋಳ ಬೆಳೆಯು ನಾಶವಾಗಿದ್ದು, ರೈತರಿಗೆ ದಿಕ್ಕೇ ತೊಚದಂತಾಗಿದೆ.

ಕೊಡ್ಲಿವಾಡ ಗ್ರಾಮದ ರೈತ ರಾಮಪ್ಪ ಹಾರುಗೊಪ್ಪ ಈ ಕುರಿತು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಎರಡು ಎಕರೆ ಭೂಮಿಯಲ್ಲಿ ಗೋವಿನ ಜೊಳ ಬೆಳೆದಿದ್ದು, ತೆನೆ ಮುರಿದು ತೋಟದಲ್ಲಿ ರಾಶಿ ಮಾಡಲು ಹಾಕಲಾಗಿತ್ತು. ಆದರೆ ಅನಿರೀಕ್ಷಿತವಾಗಿ ಮಳೆ ಬಂದಿದ್ದರಿಂದ ತೆನೆಗಳು ಮಳೆಗೆ ಸಿಲುಕಿ ಮೊಳಕೆ ಬಂದಿವೆ. ಇದರಿಂದ ಮಾರುಕಟ್ಟೆಯಲ್ಲಿ ಯಾರೂ ಇವುಗಳನ್ನು ಕೊಂಡುಕೊಳ್ಳುವದಿಲ್ಲ. ಐದಾರು ತಿಂಗಳಿಂದ ಬೆಳೆದ ಗೋವಿನ ಜೋಳದ ಬೆಳೆಯು ನಾಶವಾಗಿ ನಷ್ಟವಾಗಿದೆ. ಅಧಿಕಾರಿಗಳು ಗಮನಹರಿಸಿ ಪರಿಹಾರ ನೀಡಬೇಕು” ಎಂದು ಅವಲತ್ತುಕೊಂಡರು.

Advertisements
ಮೆಕ್ಕೆಜೋಳ ಹಾನಿ

ಈ ಸುದ್ದಿ ಓದಿದ್ದೀರಾ? ಈ ದಿನ ಫಲಶೃತಿ | ಪಡಿತರ ಗೋದಾಮಿಗೆ ಗಜೇಂದ್ರಗಡ ಅಧಿಕಾರಿಗಳ ಭೇಟಿ; ಆಹಾರ ನಿಯಮ ಪಾಲನೆಗೆ ಸೂಚನೆ

ಈ ಕುರಿತು ಯರಗಟ್ಟಿ ತಾಲೂಕಿನ ಕೃಷಿ ಅಧಿಕಾರಿಗಳನ್ನು ಈ ದಿನ.ಕಾಮ್ ಸಂಪರ್ಕಿಸಿದಾಗ, “ಅಧಿಕಾರಿಗಳು ರೈತರ ತೋಟಗಳಿಗೆ ಭೇಟಿ ನೀಡಿ ಸಮಿಕ್ಷೆ ಮಾಡುತ್ತೆವೆ ಹಾಗೂ ಮೇಲಧಿಕಾರಿಗಳಿಗೆ ಮಾಹಿತಿ ನೀಡಿ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಸುನಿಲ್
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X