ಅಖಿಲ ಭಾರತ ಕಾಂಗ್ರೆಸ ಸಮಿತಿಯ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆಯವರನ್ನು ಇಂಡಿಯಾ ಮೈತ್ರಿ ಕೂಟದ ಎಲ್ಲ ಪಕ್ಷಗಳು ಪ್ರಧಾನಿ ಅಭ್ಯರ್ಥಿಯೆಂದು ಘೋಷಣೆ ಮಾಡಿದರೆ ಈಗಿನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಜನವಿರೋಧಿ ಬಿಜೆಪಿಯನ್ನು ಎದುರಿಸಲು ಬಹುದೊಡ್ಡ ಶಕ್ತಿ ದೊರೆತಂತಾಗುತ್ತದೆ ಎಂದು ಭೀಮನಗೌಡ ಪರಗೊಂಡ ಅಭಿಪ್ರಾಯಪಟ್ಟರು.
ವಕೀಲ ಹಾಗೂ ಬೆಂಗಳೂರು ಕಾನೂನು ವಿಭಾಗ ಕೆಪಿಸಿಸಿ ಕಾರ್ಯದರ್ಶಿ ಭೀಮನಗೌಡ ಪರಗೊಂಡ ಅವರು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಮಾತನಾಡಿದ್ದು, ಪ್ರಕಟಣೆಗೆ ತಿಳಿಸಿದ್ದಾರೆ.
“ಕಾಂಗ್ರೆಸ್ ಪಕ್ಷದ ಎಲ್ಲ ಹಿರಿಯ ನಾಯಕರು ಸೇರಿದಂತೆ ಮೈತ್ರಿಕೂಟದಲ್ಲಿರುವ ಎಲ್ಲ ನಾಯಕರು ಇಚ್ಛಾಶಕ್ತಿ ಪ್ರದರ್ಶನ ಮಾಡಬೇಕು” ಎಂದು ಒತ್ತಾಯಿಸಿದರು.
“ಚಳಿಗಾಲದ ಸಂಸತ್ ಅಧಿವೇಶನದ ಅವಧಿಯಲ್ಲಿ ಒಕ್ಕೂಟದಲ್ಲಿರುವ ಬಿಜೆಪಿ ನೇತೃತ್ವದ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ವಿರೋಧ ಪಕ್ಷದ 146ಕ್ಕೂ ಅಧಿಕ ಮಂದಿ ಸಂಸದರನ್ನು ಕಾರಣವಿಲ್ಲದೇ ಅಮಾನತು ಮಾಡಿರುವುದು ಖಂಡನೀಯ” ಎಂದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭದ ಪೂರ್ವಭಾವಿ ಸಭೆ
“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಸತ್ತಿನಲ್ಲಿ ವಿರೋಧ ಪಕ್ಷದ ಸಂಸದರನ್ನು ಬಿಜೆಪಿಯ ಆಡಳಿತದ ಸರ್ಕಾರ ಅಮಾನವೀಯವಾಗಿ ನಡೆಸಿಕೊಂಡ ಘಟನೆ ದೇಶದ ಘನತೆಗೆ ಕಪ್ಪು ಚುಕ್ಕೆಯಾಗಿದೆ. ಈ ಅಧಿವೇಶನಕ್ಕೂ ಮುನ್ನ ಹೊಗೆ ಬಾಂಬ್ ಹಾಕಿ, ದಾಂಧಲೆ ಮಾಡಿದ ಅಪರಿಚಿತರಿಗೆ ಸಂಸತ್ ಒಳಪ್ರವೇಶಿಸಲು ಪಾಸ್ ನೀಡಿದ ಮೈಸೂರು-ಕೊಡಗು ಸಂಸದ ಪ್ರತಾಪಸಿಂಹ ಅವರನ್ನು ಅಮಾನತು ಮಾಡಿ ಬಂಧಿಸುವ ಬದಲಿಗೆ ಬಿಜೆಪಿ ನಾಯಕರು ವಿರೋಧ ಪಕ್ಷಗಳನ್ನು ಹತ್ತಿಕ್ಕಲು, ವಿರೋಧ ಪಕ್ಷದ ನಾಯಕರನ್ನು ಅಮಾನತು ಮಾಡಿದ್ದಾರೆ. ಈ ಮೂಲಕ ವಿರೋಧಿ ಧ್ವನಿ ಹತ್ತಿಕ್ಕಲು ಹೊರಟಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಈ ಬಗ್ಗೆ ರಾಷ್ಟ್ರಪತಿಯವರು ಮಧ್ಯಪ್ರವೇಶಿ ಮೌನ ಮುರಿದು ಮಾತನಾಡಬೇಕಿತ್ತು” ಎಂದು ಆಗ್ರಹಿಸಿದರು.